KRS ಡ್ಯಾಂ ಬಳಿ ಪ್ರಾಯೋಗಿಕ ಸ್ಫೋಟ

Published : Jan 25, 2019, 10:11 AM ISTUpdated : Jan 25, 2019, 10:17 AM IST
KRS ಡ್ಯಾಂ ಬಳಿ ಪ್ರಾಯೋಗಿಕ ಸ್ಫೋಟ

ಸಾರಾಂಶ

ಐದು ದಿನಗಳ ಕಾಲ ಕೆಆರ್‌ಎಸ್ ಸುತ್ತಮುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿ ಪ್ರಾಯೋಗಿಕ ಸ್ಫೋಟ ನಡೆಸಲು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅನುಮತಿ ನೀಡಿದ್ದಾರೆ.

ಮಂಡ್ಯ: ಗಣಿ ಸ್ಫೋಟದಿಂದ ಅಣೆಕಟ್ಟೆಗೆ ಉಂಟಾಗಬಹುದಾದ ಅಪಾಯಗಳನ್ನು ಅರಿಯಲು ಜ.28 ರಿಂದ ಐದು ದಿನಗಳ ಕಾಲ ಕೆಆರ್‌ಎಸ್ ಸುತ್ತಮುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿ ಪ್ರಾಯೋಗಿಕ ಸ್ಫೋಟ ನಡೆಸಲು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ. 

ಜಿಲ್ಲಾಧಿಕಾರಿಗಳ ಆದೇಶದ ಅನ್ವಯ  ಪುಣೆಯ ಸಿಡಬ್ಲ್ಯೂಪಿಆರ್‌ಎಸ್ ವಿಜ್ಞಾನಿ ಎ.ಕೆ.ಘೋಷ್ ನೇತೃತ್ವದ ಮೂವರು ತಜ್ಞರು ಹಾಗೂ ಇಬ್ಬರು ಸಿಬ್ಬಂದಿ ತಂಡ ಭಾನುವಾರ ಕೆಆರ್‌ಎಸ್‌ಗೆ ಆಗಮಿಸಲಿದೆ. 

ಸೋಮವಾರದಿಂದ ಗಣಿ ಸ್ಫೋಟದ ಕಂಪನ ಮಾಪನ ನಡೆಯಲಿದೆ ಎಂದು ಕೆಆರ್‌ಎಸ್ ಕಾರ್ಯಪಾಲಕ ಅಭಿಯಂತರ ಬಸವರಾಜೇಗೌಡ ಅವರು ‘ಕನ್ನಡಪ್ರಭ’ಕ್ಕೆ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!