ಹಿರಿಯ ರಾಜಕಾರಣಿ, ರೈತ ಹೋರಾಟಗಾರ ಜಿ. ಮಾದೇಗೌಡ ನಿಧನ

Published : Jul 17, 2021, 08:49 PM ISTUpdated : Jul 17, 2021, 11:07 PM IST
ಹಿರಿಯ ರಾಜಕಾರಣಿ, ರೈತ ಹೋರಾಟಗಾರ ಜಿ. ಮಾದೇಗೌಡ ನಿಧನ

ಸಾರಾಂಶ

* ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡ ವಿಧಿವಶ * ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ನಿಧನ * ಶಾಸಕರಾಗಿ, ಲೋಕಸಭಾ ಸದಸ್ಯರಾಗಿ, ರೈತ ಪರ ಹೋರಾಟಗಾರರಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದ ಮಾದೇಗೌಡ್ರು

ಮಂಡ್ಯ, (ಜು.17): ಕಾವೇರಿಯ ಕಂದ ಎಂದೇ ಕರೆಯಲ್ಪಡುತ್ತಿದ್ದ ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ.ಮಾದೇಗೌಡ (92) ಅವರು ನಿಧನರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಮಾದೇಗೌಡರು ಇಂದು (ಶನಿವಾರ) ಕೊನೆಯುಸಿರೆಳೆದಿದ್ದಾರೆ.

ಕಾಂಗ್ರೆಸ್ ತ್ಯಜಿಸದಂತೆ ಕೃಷ್ಣಗೆ ಗೌಡ  ಜಿ. ಮಾದೇಗೌಡ  ಪತ್ರ

ಮಂಡ್ಯ ಜಿಲ್ಲೆಯ ಹಿರಿಯ ರಾಜಕೀಯ ನಾಯಕರು, ಕಾವೇರಿ ಹೋರಾಟಗಾರರು, ಮಾಜಿ ಲೋಕಸಭಾ ಸದಸ್ಯರು ಹಾಗು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡರವರು ತೀವ್ರ ಅನಾರೋಗ್ಯದಿಂದ ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗಲಿಲ್ಲ. 

ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಶಾಸಕರಾಗಿ, ಲೋಕಸಭಾ ಸದಸ್ಯರಾಗಿ, ರೈತ ಪರ ಹೋರಾಟಗಾರರಾಗಿ ಜಿಲ್ಲೆಯ ಅಭಿವೃದ್ಧಿಗೆ ಎಸ್.ಎಂ.ಕೃಷ್ಣ ರವರ ಜೊತೆ ಶ್ರಮಿಸಿದವರು.

1980ರ ದಶಕದಲ್ಲಿ ಆರ್​ ಗುಂಡೂರಾವ್​ ಅವರ ಮಂತ್ರಿ ಮಂಡಲದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಮಾದೇಗೌಡರು ಮಂಡ್ಯದ ಅಂದಿನ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ 1989 ಮತ್ತು 1991ರಲ್ಲಿ ಆಯ್ಕೆಗೊಂಡಿದ್ದರು. ಹಿರಿಯ ರಾಜಕಾರಣಿ ಮಾದೇಗೌಡರು ಕಾವೇರಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದರು. ಇತರೆ ಅನೇಕ ರೈತ ಹೋರಾಟಗಳಲ್ಲಿ ಅವರು ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದರು.

ನಾಳೆ(ಜು.18) ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂತಿಮ ದರ್ಶನ. ನಂತರ ಹುಟ್ಟುರಾದ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಹಾಗೂ ಮದ್ದೂರು ತಾಲೂಕಿನ  ಕೆಎಂ ದೊಡ್ಡಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮದ್ದೂರು ತಾಲೂಕಿನ ಹನುಮಂತನಗರದಲ್ಲಿ  ಮಧ್ಯಾಹ್ನ 3 ಗಂಟೆ ಅಂತ್ಯಕ್ರಿಯೆ ನಡೆಯಲಿದೆ. 

ಎಚ್‌ಡಿಕೆ ಸಂತಾಪ
ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ G. ಮಾದೇಗೌಡರ ನಿಧನ ಸಂಗತಿ ತೀವ್ರ ನೋವುಂಟುಮಾಡಿದೆ. ಕಾವೇರಿ ರಕ್ಷಣೆ, ರೈತರ ಹಿತಕ್ಕಾಗಿ ಶ್ರಮಿಸಿದ್ದವರು ಮಾದೇಗೌಡರು. ಅವರ ನಿಧನದಿಂದ ಮಂಡ್ಯ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಂದಿದ್ದೆ. ಅವರು ಗುಣವಾಗುವ ವಿಶ್ವಾಸ ಹುಸಿಯಾಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್