
ಮಂಡ್ಯ (ಫೆ.3): ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು, 2025-26 ನೇ ಸಾಲಿನ ವಿವಿಧ ಪದವಿ ಪರೀಕ್ಷೆಗಳ ಮೌಲ್ಯಮಾಪನ ಕಾರ್ಯವನ್ನು ದಾಖಲೆ ಸಮಯದಲ್ಲಿ ಮುಗಿಸಿ ಕೊನೆಯ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸುವ ಮೂಲಕ ರಾಜ್ಯದ ಗಮನ ಸೆಳೆದಿದೆ.
ಸರ್ಕಾರಿ ಸಂಸ್ಥೆಯೊಂದು ಇಷ್ಟೊಂದು ವೇಗವಾಗಿ ಫಲಿತಾಂಶ ನೀಡಿರುವುದು ಕಾಲೇಜಿನ ಪರಿಶ್ರಮದ ಹೆಗ್ಗುರುತಾಗಿದೆ. ಕಾಲೇಜಿನ ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ, ಬಿಸಿಎ, ಬಿಎಫ್ಎಸ್ಐ, ಇ-ಕಾಮರ್ಸ್ ಪದವಿ ಪರೀಕ್ಷೆಗಳು ಜ.2ರಿಂದ ಜ.31ರವರೆಗೆ ನಡೆದಿದ್ದವು. ಪರೀಕ್ಷೆಗಳು ಜ.31ರಂದು ಮುಕ್ತಾಯಗೊಂಡಿದ್ದು ಅದೇ ದಿನ ಸಂಜೆ 4ಕ್ಕೆ ಮೌಲ್ಯಮಾಪನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲಾಯಿತು. ವಿಶೇಷವೆಂದರೆ ಮೌಲ್ಯಮಾಪನ ಮುಗಿದ ಕೇವಲ ಒಂದು ಗಂಟೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಫಲಿತಾಂಶ ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಶಿಸ್ತುಬದ್ಧ ಕೆಲಸ ಹಾಗೂ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದಾಗಿ ಈ ಅಸಾಧಾರಣ ಸಾಧನೆ ಸಾಧ್ಯವಾಗಿದೆ. ಈ ಕಾರ್ಯವನ್ನು ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ರವಿಕಾಂತ್ ಲಂಬಾಣಿ ಮತ್ತು ತಂಡ ಪರೀಕ್ಷೆ ಆರಂಭದಿಂದ ಮುಕ್ತಾಯದವರೆಗೂ ಸತತ ಪರಿಶ್ರಮ, ತಾಳ್ಮೆ, ಜಾಣ್ಮೆ, ಅತ್ಯಂತ ಶಿಸ್ತಿನಿಂದ ಶ್ರಮಿಸಿದ ಫಲವಾಗಿ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಲು ಸಹಕಾರಿಯಾಯಿತೆಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ