ಮಂಡ್ಯದಲ್ಲಿ ಒಂದು ಹನುಮ ಧ್ವಜ ಕೆಳಗಿಳಿಸಿದ್ದಕ್ಕೆ, ಈಗ ಊರಿನ ತುಂಬೆಲ್ಲ ಭಗವಾ ಧ್ವಜ ಹಾರಾಟ!

By Ravi Janekal  |  First Published Jan 28, 2024, 4:36 PM IST

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ , ನಿಮಗೆ ತಾನು ಹಿಂದೂ ಎಂದು ಕರೆದುಕೊಳ್ಳುವ ಯಾವ ನೈತಿಕತೆಯೂ ಉಳಿದಿಲ್ಲ. ನನ್ನ ಹೆಸರಿನಲ್ಲಿ ರಾಮ ಇದ್ದಾನೆ, ನಾನೂ ಹಿಂದು ಎಂದು ಹೇಳಿಕೊಳ್ಳುವ ಯಾವ ನೈತಿಕತೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯರ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.


ಬೆಂಗಳೂರು (ಜ.28): ಮುಖ್ಯಮಂತ್ರಿ ಸಿದ್ದರಾಮಯ್ಯನವರೇ , ನಿಮಗೆ ತಾನು ಹಿಂದೂ ಎಂದು ಕರೆದುಕೊಳ್ಳುವ ಯಾವ ನೈತಿಕತೆಯೂ ಉಳಿದಿಲ್ಲ. ನನ್ನ ಹೆಸರಿನಲ್ಲಿ ರಾಮ ಇದ್ದಾನೆ, ನಾನೂ ಹಿಂದು ಎಂದು ಹೇಳಿಕೊಳ್ಳುವ ಯಾವ ನೈತಿಕತೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯರ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆರಗೋಡು ಪಟ್ಟಣದಲ್ಲಿ ಹಿಂದೂಗಳ ಭಾರೀ ವಿರೋಧದ ನಡುವೆಯೂ ಪೊಲೀಸರು ಲಾಠಿಚಾರ್ಜ್ ನಡೆಸಿ ಹನುಮಧ್ವಜ ತೆರವು ಮಾಡಿಸಿರುವ ವಿಚಾರ ಸಂಬಮಧ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದುವಿರೋಧಿ ನೀತಿಗಳನ್ನು ಅನುಸರಿಸುತ್ತಾ ಓಲೈಕೆ ರಾಜಕಾರಣ ಮಾಡುತ್ತಿದೆ. ಒಂದು ಹನುಮಧ್ವಜ ತೆಗೆದರೆ ಹಿಂದುಗಳು ಮನೆಮನೆಯಲ್ಲೂ ಹನುಮಧ್ವಜ ಹಾರಿಸುವಂತೆ ವಿಡಿಯೋ ಮೂಲಕ ಕರೆ ನೀಡಿದ್ದಾರೆ.

Tap to resize

Latest Videos

ಮಂಡ್ಯದಲ್ಲಿ ಹನುಮ ಧ್ವಜ ತೆರವು ಗಲಾಟೆ; ಸಿಎಂ ಹೇಳುವ ಸರ್ವಜನಾಂಗದ ಶಾಂತಿಯ ತೋಟ ಇದೇನಾ? ಬೊಮ್ಮಾಯಿ ಕಿಡಿ

ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಕರೆಕೊಟ್ಟಿರುವ ಮನೆ ಮನೆಯಲ್ಲಿ ಹನುಮಧ್ವಜ ಹಾರಿಸುವ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ. ಮನೆ ಮನೆಯಲ್ಲೂ ಹನುಮಧ್ವಜ ಹಾರಿಸುವ ಮೂಲಕ ಸರ್ಕಾರದ ಹಿಂದೂ ವಿರೋಧಿ ನೀತಿಗೆ ಪ್ರತ್ಯುತ್ತರ ನೀಡಲು ರಾಜ್ಯ ಬಿಜೆಪಿ ಮುಂದಾಗಿದೆ.

ರಾಷ್ಟ್ರಧ್ವಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ 

ಮಂಡ್ಯ ಜಿಲ್ಲೆಯ ಕೆರಗೋಡು ಎಂಬ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ನಿರ್ಣಯ ಮಾಡಿ 108 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಹನುಮ ಧ್ವಜ ಹಾರಿಸಿದಾಗ, ರಾಜ್ಯ ಸರ್ಕಾರವು ಪೊಲೀಸ್ ಬಲದ ಮೂಲಕ ದಬ್ಬಾಳಿಕೆ ಮಾಡಿ ಧ್ವಜ ಇಳಿಸುವ ದುಸ್ಸಾಹಸ ಪ್ರದರ್ಶಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು… pic.twitter.com/orbAoZo4pt

— BJP Karnataka (@BJP4Karnataka)
click me!