ಲೋಕಸಭೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಸ್ತಾಪಿಸಿದ ಸಂಸದೆ ಸುಮಲತಾ

Kannadaprabha News   | Asianet News
Published : Aug 07, 2021, 08:25 AM IST
ಲೋಕಸಭೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಸ್ತಾಪಿಸಿದ ಸಂಸದೆ ಸುಮಲತಾ

ಸಾರಾಂಶ

*  ಸುಮಲತಾಗೆ ಮಾತನಾಡಲು ಅವಕಾಶ ಕಲ್ಪಿಸಿದ ಸ್ಪೀಕರ್‌ ಓಂ ಬಿರ್ಲಾ * ವಾಯು ಮಾಲಿನ್ಯ ನಿಯಂತ್ರಣ ಸ್ಟೇಷನ್‌ ಸ್ಥಾಪನೆ * ಅಕ್ರಮ ಗಣಿಗಾರಿಕೆ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ವಿರುದ್ಧ ಗುಡುಗಿದ ಸುಮಲತಾ  

ನವದೆಹಲಿ(ಆ.07): ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಲೋಕಸಭೆ ಕಲಾಪದಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ವಿರುದ್ಧ ಗುಡುಗಿದ್ದಾರೆ. 

ಶುಕ್ರವಾರದ ಕಲಾಪದ ವೇಳೆ ಸ್ಪೀಕರ್‌ ಓಂ ಬಿರ್ಲಾ ಅವರು ಸುಮಲತಾ ಅವರಿಗೆ ಮಾತನಾಡಲು ಅವಕಾಶ ಕಲ್ಪಿಸಿದರು. ಈ ವೇಳೆ ಮಾತನಾಡಿದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್‌ ಅವರು, ‘ಗಣಿಗಾರಿಕೆಗಾಗಿ ಭಾರೀ ಪ್ರಮಾಣದ ಸ್ಫೋಟಕಗಳು ಹಾಗೂ ರಾಸಾಯನಿಕಗಳನ್ನು ಬಳಸಲಾಗುತ್ತಿದೆ. ಇದರಿಂದಾಗಿ ಗಣಿ ಪ್ರದೇಶಗಳ ಸುತ್ತಮುತ್ತ ವಾಸಿಸುವವರಲ್ಲಿ ಉಸಿರಾಟ ಸಮಸ್ಯೆ ಹಾಗೂ ಶ್ವಾಸಕೋಶ ಸೇರಿದಂತೆ ಇನ್ನಿತರ ಅನಾರೋಗ್ಯ ಸಮಸ್ಯೆಗಳು ಕಂಡುಬರುತ್ತಿದೆ. ಅಲ್ಲದೆ ಈ ಪ್ರದೇಶಗಳಲ್ಲಿ ಗಾಳಿ ಮತ್ತು ಅಂತರ್ಜಲ ಕಲುಷಿತಗೊಳ್ಳುತ್ತಿದ್ದು, ಬೆಳೆಗಳ ಮೇಲೆಯೂ ದುಷ್ಪರಿಣಾಮವಾಗುತ್ತಿದೆ’ ಎಂದು ಹೇಳಿದ್ದಾರೆ. 

ರಾಜ್ಯಪಾಲರನ್ನು ಭೇಟಿಯಾದ ಸುಮಲತಾ : 30 ದಿನದಲ್ಲಿ ಕ್ರಮದ ಭರವಸೆ

ಈ ಹಿನ್ನೆಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಯಂತ್ರಣ ಹಾಗೂ ಪರಿಸರದ ರಕ್ಷಣೆಗಾಗಿ ಕೇಂದ್ರ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರ ದೇಶಾದ್ಯಂತ ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ ಒಟ್ಟು 1114 ವಾಯು ಮಾಲಿನ್ಯ ನಿಯಂತ್ರಣ ಸ್ಟೇಷನ್‌ಗಳನ್ನು ಸ್ಥಾಪಿಸಲಾಗಿದೆ ಎಂದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ