ಮಂಡ್ಯ ಸಾಹಿತ್ಯ ಸಮ್ಮೇಳನ : ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಸಂಚಾರಿ ಮಾರ್ಗದಲ್ಲಿ ಬದಲಾವಣೆ

By Kannadaprabha News  |  First Published Dec 19, 2024, 7:19 AM IST

3 ದಿನಗಳ ಕಾಲ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಡಿ. 20 ರಿಂದ 23 ರವರೆಗೆ ಹೊಸ ಸಂಚಾರ ಮಾರ್ಗಗಳನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕರು ಇದನ್ನು ಗಮನಿಸಬೇಕು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


ಮಂಡ್ಯ (ಡಿ.19): 3 ದಿನಗಳ ಕಾಲ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬೆಂಗಳೂರು - ಮೈಸೂರು ಸಂಚಾರಿ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.ಡಿ. 20ರ ಬೆಳಗ್ಗೆ 5 ಗಂಟೆಯಿಂದ ಡಿ. 23ರ ಬೆಳಗ್ಗೆ 6 ಗಂಟೆವರೆಗೆ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರು ಮತ್ತು ಮಂಡ್ಯಕ್ಕೆ ಬಂದು ಹೋಗುವವರಿಗೆ ಸಮ್ಮೇಳನ ನಡೆಯುವ 3 ದಿನಗಳ ಕಾಲ ಹೆದ್ದಾರಿ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು, ರಾಮನಗರ, ತುಮಕೂರು, ಮದ್ದೂರು, ಮಳವಳ್ಳಿಯಿಂದ ಎಕ್ಸ್‌ಪ್ರೆಸ್‌ವೇನಲ್ಲಿ ಬರುವವರಿಗೆ ಹೊಸಬೂದನೂರು ಬಳಿ ಎಕ್ಸಿಟ್, ಹೊಸಬೂದನೂರು ಬಳಿ ಎಕ್ಸಿಟ್ ಪಡೆದು ಸರ್ವಿಸ್ ರಸ್ತೆ, ಸಮ್ಮೇಳನದ ಮುಖ್ಯ ದ್ವಾರದ ಮೂಲಕ ಬ್ಯಾಂಕರ್ಸ್ ಕಾಲೋನಿ ರಸ್ತೆ ಮೂಲಕ ಸಮ್ಮೇಳನ ಸ್ಥಳ ತಲುಪುವುದು.ಮೈಸೂರು, ಶ್ರೀರಂಗಪಟ್ಟಣ, ಪಾಂಡವಪುರದಿಂದ ಎಕ್ಸ್‌ಪ್ರೆಸ್‌ ವೇನಲ್ಲಿ ಬರುವವರಿಗೆ ಶಶಿಕಿರಣ ಕನ್ವೆನ್‌ಷನ್ ಹಾಲ್ ಎದುರಿನಲ್ಲಿ ಎಕ್ಸಿಟ್, ಸರ್ವಿಸ್ ರಸ್ತೆ ಮೂಲಕ ಹೊಸಬೂದನೂರು ಅಂಡರ್ ಪಾಸ್ ಮೂಲಕ ಯೂ ಟರ್ನ್ ಪಡೆದು ಸರ್ವಿಸ್ ರಸ್ತೆ ಮೂಲಕ ಬ್ಯಾಂಕರ್ಸ್ ಕಾಲೋನಿ ಮೂಲಕ ಸಮ್ಮೇಳನ ಸ್ಥಳ ತಲುಪುವುದು.

Tap to resize

Latest Videos

undefined

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೈಸೂರು ದಸರಾ ರೀತಿ ಲೈಟಿಂಗ್!

ಸಾರಿಗೆ ಬಸ್ ನಿಲ್ದಾಣದಿಂದ ಸಮ್ಮೇಳನಕ್ಕೆ ಉಚಿತ ಬಸ್ ಸೇವೆ ಇದೆ. ಸರ್ವಿಸ್ ರಸ್ತೆಗಳಲ್ಲಿ ದ್ವಿಮುಖ ಸಂಚಾರ ನಿರ್ಬಂಧಿಸಲಾಗಿದೆ. ಚಿಕ್ಕಮಂಡ್ಯದಿಂದ ಹನಕೆರೆವರೆಗಿನ ಎರಡೂ ಬದಿಯ ಸರ್ವಿಸ್ ರಸ್ತೆಯಲ್ಲಿ ದ್ವಿಮುಖ ಸಂಚಾರ ನಿರ್ಬಂಧ ಮಾಡಲಾಗಿದೆ. ಮದ್ದೂರು ಮತ್ತು ಶ್ರೀರಂಗಪಟ್ಟಣ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬರುವ ವಾಹನಗಳು ಎಕ್ಸ್ ಪ್ರೆಸ್ ವೇನಲ್ಲಿ ಚಲಿಸುವುದು. ನಿರ್ಬಂಧಿತ ವಾಹನಗಳನ್ನು ಹೊರತುಪಡಿಸಿ ಎಲ್ಲಾ ವಾಹನಗಳಿಗೆ ಎಕ್ಸ್ ಪ್ರೆಸ್ ವೇನಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.

ನಾಳೆ, ನಾಡಿದ್ದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರು ಹಾಗೂ ನೋಂದಾವಣೆ ಮಾಡಿಕೊಂಡಿರುವ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ವಸತಿ ವ್ಯವಸ್ಥೆ, ಮೂಲಸೌಲಭ್ಯ ಕಲ್ಪಿಸಲು ಉದ್ದೇಶಿರುವುದರಿಂದ ಡಿ.20,21 ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ.

 

ಕನ್ನಡ ಸಾಹಿತ್ಯ ಸಮ್ಮೇಳನದಲ್ಲೇ ಮಂಡ್ಯ ಆಸ್ಮಿತೆಗೆ ಧಕ್ಕೆ: ಬಾಡೂಟ ಇಲ್ಲ ಎಂದಿದ್ದಕ್ಕೆ ಕೋಳಿಗಳು ಫುಲ್‌ ಖುಷ್‌!

ನಮ್ಮ ಸಾಹಿತ್ಯ, ಸಂಸ್ಕೃತಿ, ಪರಂಪರೆ ಬಿಂಬಿಸುವ ಹಾಗೂ ನಾಡು - ನುಡಿಯ ಬಗೆಗೆ ಅಭಿಯಾನ ಮೂಡಿಸುವ ಕಾರ್ಯಕ್ರಮವಾಗಿರುವುದರಿಂದ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಸಾಹಿತ್ಯಾಭಿರುಚಿ ಹೆಚ್ಚಿಸಿಕೊಳ್ಲುವ, ಕನ್ನಡನಾಡು, ನುಡಿ ಬಗ್ಗೆ ವಿವಿಧ ಗೋಷ್ಠಿಗಳು ನಡೆಯಲಿದ್ದು, ಜ್ಞಾನಾರ್ಜನೆ ಹೆಚ್ಚಿಸುವ ಉದ್ದೇಶದಿಂದ ಎರಡು ದಿನಗಳ ಕಾಲ ಎಲ್ಲಾ ಸರ್ಕಾರಿ , ಅನುದಾನ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಸದರಿ ರಜೆ ಅವಧಿಯನ್ನು ಮುಂದಿನ ಸರ್ಕಾರಿ ರಜಾ ದಿನಗಳಲ್ಲಿ ಪಾಠ, ಪ್ರವಚನ ನಡೆಸಿ ಸರಿದೂಗಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

click me!