ಅಂದು ರಿಕ್ಷಾ ನಿಲ್ಲಿಸದೆ ಅವಮಾನ ಅನುಭವಿಸಿದ್ದ ಮಂಗಳಮುಖಿ ಈಗ 4 ರಿಕ್ಷಾಗಳ ಒಡತಿ!

Kannadaprabha News, Ravi Janekal |   | Kannada Prabha
Published : Jun 26, 2025, 03:01 PM ISTUpdated : Jun 26, 2025, 03:06 PM IST
Mangaluru mangalamukhi

ಸಾರಾಂಶ

ಮಂಗಳೂರಿನ ಮಂಗಳಮುಖಿಯೊಬ್ಬರು ರಿಕ್ಷಾದಲ್ಲಿ ಪ್ರಯಾಣಿಸಲು ನಿರಾಕರಿಸಿದ ಅನುಭವದಿಂದ ಸ್ಫೂರ್ತಿ ಪಡೆದು ನಾಲ್ಕು ರಿಕ್ಷಾಗಳನ್ನು ಖರೀದಿಸಿ ಬಾಡಿಗೆಗೆ ನೀಡುವ ಮೂಲಕ ಸ್ವಾವಲಂಬಿಯಾಗಿದ್ದಾರೆ. ಗರ್ಭಿಣಿಯರು ಮತ್ತು ಹಿರಿಯ ಮಂಗಳಮುಖಿಯರಿಗೆ ಉಚಿತ ಪ್ರಯಾಣವನ್ನು ಸಹ ಒದಗಿಸುತ್ತಿದ್ದಾರೆ.

ಮಂಗಳೂರು (ಜೂ.26) : ಮನೆಗೆ ಹೋಗಲು ರಿಕ್ಷಾದವರು ಒಪ್ಪದೆ ಅವಮಾನ ಅನುಭವಿಸಿದ್ದ ಮಂಗಳಮುಖಿಯೊಬ್ಬರು ಅದನ್ನೇ ತಮ್ಮ ಯಶಸ್ಸಿನ ಏಣಿಯನ್ನಾಗಿ ಮಾಡಿಕೊಂಡು ನಾಲ್ಕು ರಿಕ್ಷಾ ಖರೀದಿಸಿ, ಬಾಡಿಗೆ ನೀಡಿ, ತಮ್ಮ ಜೀವನೋಪಾಯದೊಂದಿಗೆ ಸಮಾಜಕ್ಕೂ ಮಾದರಿಯಾಗಿದ್ದಾರೆ.

ಇವರು ಅನಿ. ಮೂಲತಃ ರಾಯಚೂರಿನವರು. ಮಂಗಳೂರಿನಲ್ಲಿ ವಿದ್ಯಾಭ್ಯಾಸಕ್ಕೆ ಬಂದವರು ಈಗ ಇಲ್ಲೇ ನೆಲೆ ನಿಂತಿದ್ದಾರೆ. ಬಿ.ಎ. ಪದವಿಯ ಬಳಿಕ ಬಿ.ಎಡ್.ನಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆ ಬರೆದು ಬಳಿಕ ಶಿಕ್ಷಣ ಮೊಟಕುಗೊಳಿಸಿದ್ದರು. ಬಳಿಕ, ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಬದುಕು ಕಂಡುಕೊಂಡಿದ್ದರು. ಈ ಹಿಂದೆ ಅವರು ಪ್ರತಿದಿನ ಸಂಜೆ ಮನೆಗೆ ತೆರಳಲು ರಿಕ್ಷಾವನ್ನು ಅವಲಂಬಿಸಿದ್ದರು. ಆದರೆ, ಇವರನ್ನು ನೋಡಿದಾಗ ರಿಕ್ಷಾದವರು ನಿಲ್ಲಿಸುತ್ತಿರಲಿಲ್ಲ. ‘ಒಂದು ದಿನವಂತೂ ಸಂಜೆಯಿಂದ ರಾತ್ರಿವರೆಗೂ ಕಾದು ಯಾವ ರಿಕ್ಷಾದವರೂ ಬಾಡಿಗೆಗೆ ಕರೆದೊಯ್ಯಲು ಒಪ್ಪದಿದ್ದಾಗ ಗತಿಯಿಲ್ಲದೆ ರಾತ್ರಿ ನಡೆದುಕೊಂಡೇ ಮನೆ ತಲುಪಿದೆ. ಅಂದೇ ನಾನು ರಿಕ್ಷಾ ಖರೀದಿಸಬೇಕು ಎಂಬ ನಿರ್ಧಾರ ಮಾಡಿದೆ’ ಎಂದು ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಾರೆ ಅವರು.

ಬಳಿಕ, ಬ್ಯಾಂಕ್‌ನಲ್ಲಿ ಸಾಲ ಮಾಡಿ, 4 ರಿಕ್ಷಾ ಖರೀದಿಸಿ, ದೇರಳಕಟ್ಟೆಯಲ್ಲಿ ಬಾಡಿಗೆಗೆ ನೀಡಿದರು. ಆ ಮೂಲಕ ಅವರಿಗೆ ಮಾಸಿಕವಾಗಿ ನಿಶ್ಚಿತ ಆದಾಯ ಬರುತ್ತಿದೆ. ಇವರು ತಮ್ಮ ರಿಕ್ಷಾದಲ್ಲಿ ತುಂಬು ಗರ್ಭಿಣಿಯರು, ಹಿರಿಯ ಮಂಗಳಮುಖಿಯರಿಗೆ ಉಚಿತ ಪ್ರಯಾಣ ಸೇವೆ ಕಲ್ಪಿಸಿದ್ದಾರೆ. ಈ ಮಧ್ಯೆ, ಕೆಲ ಸಿನಿಮಾದಲ್ಲಿಯೂ ನಟನೆ ಮಾಡಿದ್ದಾಗಿ ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌