ಗ್ಯಾಸ್ ಟ್ಯಾಂಕರ್ ಪಲ್ಟಿ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಸ್ಥಗಿತ

Published : Dec 02, 2018, 11:03 AM IST
ಗ್ಯಾಸ್ ಟ್ಯಾಂಕರ್ ಪಲ್ಟಿ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಸ್ಥಗಿತ

ಸಾರಾಂಶ

ಮಂಗಳೂರಿನ ಉಪ್ಪಿನಂಗಡಿ ಬಳಿ ಡ್ರೈವರ್ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಮಂಗಳೂರು ಬೆಂಗಳೂರು ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.ಠಧ

ಮಂಗಳೂರು[ಡಿ.02]: ಉಪ್ಪಿನಂಗಡಿ ಸಮೀಪದ ಮಂಗಳೂರು- ಬೆಂಗಳೂರು ಹೆದ್ದಾರಿಯ ಬೆದ್ರೋಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಅನಿಲ ಸೋರಿಕೆಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆದ್ದಾರಿಯನ್ನು ಬಂದ್ ಮಾಡಲಾಗಿದ್ದು, ಅಗ್ನಿಶಾಮಕ ದಳ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಈ ಟ್ಯಾಂಕರ್ ಬೆದ್ರೋಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅನಿಲ ಸೊರಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೆದ್ರೋಡಿ ಆಸುಪಾಸಿನ 2 ಕಿ. ಮೀಟರ್ ಪ್ರದೆಶದಲ್ಲಿ ಯಾರೂ ಬೆಂಕಿ ಹಚ್ಚದಂತೆ ಸೂಚನೆ ನೀಡಲಾಗಿದೆ.

ಅಧಿಕಾರಿಗಳು ಕಾರ್ಯಾಚರಣೆ ಮುಂದುವರೆಸಿದ್ದು, ಅನಿಲ ಸೋರಿಕೆ ತಡೆಯಲು ಪ್ರಯತ್ನ ಮುಂದುವರೆದಿದೆ. 

2013ರಲ್ಲಿ ಉಪ್ಪಿನಂಗಡಿಯ ಪೆರ್ನೆ ಸಮೀಪ ಗ್ಯಾಸ್ ಟ್ಯಾಂಕರ್ ಅಪಘಾತದಿಂದಾಗಿ ಬೆಂಕಿ ಹಬ್ಬಿ ಸಾವು ನೋವು ಸಂಭವಿಸಿದ್ದು ಉಲ್ಲೇಖನೀಯ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

KSRTC ಪ್ರಯಾಣಿಕರಿಗೆ ಬಿಗ್ ಶಾಕ್! ಇಂಧನ ಬೆಲೆ ಏರಿಕೆ ನೆಪ, ಶೀಘ್ರ ಬಸ್‌ ದರ ಹೆಚ್ಚಳ, ಸಾರಿಗೆ ಸಚಿವ ಮಹತ್ವದ ಸುಳಿವು
80ನೇ ಸ್ವಾತಂತ್ರ್ಯ ದಿನ: 72,000 ಸರ್ಕಾರಿ ನೌಕರಿ, ಉಚಿತ ಕೋಡಿಂಗ್, AI ವಿವಿ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್!