ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ; ನೈಜೀರಿಯಾ ಮೂಲದ ಡ್ರಗ್ಸ್ ಪೆಡ್ಲರ್ ಸೆರೆ

By Ravi JanekalFirst Published Sep 2, 2023, 10:32 PM IST
Highlights

ಡ್ರಗ್ಸ್ ಮುಕ್ತ ಮಂಗಳೂರು ನಿರ್ಮಾಣಕ್ಕೆ ಪಣತೊಟ್ಟಿರುವ ಸಿಸಿಬಿ ಪೊಲೀಸರು ಮಾದಕ ವಸ್ತು ಜಾಲ, ಮಾರಾಟದ ಮೇಲೆ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಂದು ಕೂಡ ಖಚಿತ ಮಾಹಿತಿ ಆಧರಿಸಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಪ್ರಮುಖ ಡ್ರಗ್ಸ್ ಪೆಡ್ಲರ್‌ ಬಂಧಿಸಿದ್ದಾರೆ.

ಮಂಗಳೂರು (ಸೆ.2): ಡ್ರಗ್ಸ್ ಮುಕ್ತ ಮಂಗಳೂರು ನಿರ್ಮಾಣಕ್ಕೆ ಪಣತೊಟ್ಟಿರುವ ಸಿಸಿಬಿ ಪೊಲೀಸರು ಮಾದಕ ವಸ್ತು ಜಾಲ, ಮಾರಾಟದ ಮೇಲೆ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಂದು ಕೂಡ ಖಚಿತ ಮಾಹಿತಿ ಆಧರಿಸಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಪ್ರಮುಖ ಡ್ರಗ್ಸ್ ಪೆಡ್ಲರ್‌ ಬಂಧಿಸಿದ್ದಾರೆ.

ನೈಜೀರಿಯಾ ಮೂಲದ ಅಡೆವೊಲೆ ಅಡೆಟುಡು ಆನು(33) ಮಹಿಳೆಯನ್ನು ಬೆಂಗಳೂರಿನ ಯಲಹಂಕದ ಚೊಕ್ಕನ ಹಳ್ಳಿಯಲ್ಲಿ ಬಂಧಿಸಲಾಗಿದೆ. ದಾಳಿ ವೇಳೆ 400 ಗ್ರಾಂ ತೂಕದ 20 ಲಕ್ಷ ರೂಪಾಯಿ ಮೌಲ್ಯದ MDMA, ಐಫೋನ್‌ ಮೊಬೈಲ್ ಸೇರಿದಂತೆ ಒಟ್ಟು 20 ಲಕ್ಷ 52 ಸಾವಿರ ಮೌಲ್ಯದ ಸ್ವತ್ತು ವಶಕ್ಕೆ ಪಡೆದುಕೊಳ್ಳಾಗಿದೆ.

 

ಡ್ರಗ್ಸ್ ದಂಧೆ ವಿರುದ್ಧ ಸಮರ ಸಾರಿದ ಮಂಗಳೂರು ಪೊಲೀಸರು!

ಇತ್ತಿಚೇಗೆ ಲಕ್ಷಾಂತರ ಮೌಲ್ಯದ MDMA ಮಾರಾಟ ಜಾಲ ಭೇದಿಸಿದ್ದ ಮಂಗಳೂರು ಸಿಸಿಬಿ ಪೊಲೀಸರು. ಪ್ರಕರಣದಲ್ಲಿ ಬಂಧಿತ ಆರೋಪಿಗಳನ್ನು ವಿಚಾರಿಸಿದಾಗ ಆರೋಪಿಗಳು ಈ ಮಹಿಳೆಯ ಕುರಿತು ಮಾಹಿತಿ ನೀಡಿದ್ದಾರೆ. ಆರೋಪಿಗಳಿಗೆ MDMA ಡ್ರಗ್ ಪೂರೈಸುತ್ತಿದ್ದ ನೈಜೀಯರಿಯಾ ಮೂಲಕ ಆರೋಪಿ ಮಹಿಳೆ. ನೈಜೀಯರಿಯಾದಿಂದ ವ್ಯಾಸಂಗ ವೀಸಾದಡಿ ಭಾರತಕ್ಕೆ ಬಂದಿರುವ ಮಹಿಳೆ. ಬಂದ ಬಳಿಕ ಕೆಲ ಸಮಯ ನರ್ಸಿಂಗ್ ಮಾಡಿಕೊಂಡು ಬೆಂಗಳೂರಿನಲ್ಲಿ ನೆಲೆಸಿದ್ದಳು.

ಬಳಿಕ ಮಾದಕ ವಸ್ತು ಮಾರಾಟ ಜಾಲದಲ್ಲಿ ಪ್ರಮುಖ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ. ಈಗಾಗಲೇ ಈಕೆಯ ವಿರುದ್ಧ  ಉಳ್ಳಾಲ, ಸೆನ್ ಪೊಲೀಸ್ ಠಾಣೆ, ಕಂಕನಾಡಿ ನಗರ, ಕೊಣಾಜೆ, ಬಂದರು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಪಿಸ್ತೂಲ್‌, ಡ್ರಗ್ಸ್‌ ಸಹಿತ 3 ಪೆಡ್ಲರ್‌ಗಳ ಬಂಧನ

ಈಕೆಯಿಂದಲೇ ಮಾದಕ ವಸ್ತು ಖರೀದಿ ಮಾಡಿದ್ದ 7 ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳು. ಸದ್ಯ ಆರೋಪಿ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಕೋರ್ಟ್. ಬೆಂಗಳೂರಿನಲ್ಲಿ ಡ್ರಗ್ಸ್ ಪೆಡ್ಲರ್‌ಗಳನ್ನು ಎಡೆಮುರಿಕಟ್ಟಿದ ನಂತರ ನೈಜೀರಿಯನ್ ಪ್ರಜೆಗಳು ಬೆಂಗಳೂರು ಬಿಟ್ಟು ಮಂಗಳೂರನ್ನು ಟಾರ್ಗೆಟ್ ಮಾಡಿಕೊಂಡಿದ್ದಾರಾ ಎಂದು ಮಂಗಳೂರಿನಲ್ಲಿ ನೈಜೀರಿಯನ್ ಪ್ರಜೆಗಳಿಂದ ಹೆಚ್ಚುತ್ತಿರುವ ಪ್ರಕರಣಗಳಿಂದ ಅನುಮಾನ ಮೂಡಿಸಿದೆ.

click me!