ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ; ಶಾರೀಕ್‌ಗೆ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟ

Published : Apr 26, 2026, 05:54 AM IST
Mangaluru Cooker Bomb Blast

ಸಾರಾಂಶ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್‌ ಶಾರೀಕ್‌, ತಾನು ಕೃತ್ಯ ಎಸಗಿದ್ದಾಗಿ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ಮಾನ್ಯ ಮಾಡಿದೆ. ಏಪ್ರಿಲ್ 27 ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟವಾಗಲಿದೆ.

ಬೆಂಗಳೂರು: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್‌ ಶಾರೀಕ್‌ನ ತಪ್ಪೊಪ್ಪಿಗೆ ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಿಶೇಷ ನ್ಯಾಯಾಲಯ ಈ ಹಿಂದೆಯೇ ಮಾನ್ಯ ಮಾಡಿದ್ದು, ಏ.27ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.

ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಶನಿವಾರ ನಡೆದ ವಿಚಾರಣೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್‌ ಅವರು, ಆರೋಪಿಗೆ ಅಂತಿಮವಾಗಿ ಕಠಿಣ ಶಿಕ್ಷೆ ವಿಧಿಸುವಂತೆ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ವಾದ ಆಲಿಸಿದ ಕೋರ್ಟ್‌ ಏ.27ಕ್ಕೆ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದೆ.

ತಪ್ಪೊಪ್ಪಿಕೊಂಡಿರುವ ಶಾರೀಕ್

ಕಳೆದ 3 ತಿಂಗಳ ಹಿಂದೆಯೇ ಆರೋಪಿ ಶಾರೀಕ್‌ ತಾನು ಕೃತ್ಯ ಎಸಗಿದ್ದಾಗಿ ತಪ್ಪೊಪ್ಪಿಕೊಂಡು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಕೂಡ ಸಲ್ಲಿಸಿದ್ದ. ಈ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿತ್ತು. ಈ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ತನಿಖೆ ನಡೆಸಿ 2024ರಲ್ಲಿ ಆರೋಪಿಗಳಾದ ಶಾರೀಕ್‌ ಮತ್ತು ಸೈಯದ್‌ ಯಾಸೀನ್‌ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ ಕಂಕನಾಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2022ರ ನ.19ರಂದು ಸಂಜೆ 4.40 ಸುಮಾರಿಗೆ ಶಾರೀಕ್‌ ಆಟೋದಲ್ಲಿ ತೆರಳುವಾಗ ಕುಕ್ಕರ್ ಸ್ಫೋಟಗೊಂಡಿತ್ತು. ಶಾರೀಕ್‌ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಕೂಡ ಪಡೆದಿದ್ದ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರಜ್ಞಾಹೀನ ಸ್ಥಿತಿಯಲ್ಲಿ ಸಚಿವ ಹಿರಿಯೂರು ಸುಧಾಕರ್‌; ಆಸ್ಪತ್ರೆಗೆ ಭೇಟಿ ನೀಡಿ ವಿವರ ಪಡೆದ ಸಿಎಂ
ಚಿಕ್ಕಬಳ್ಳಾಪುರದ ವಿದ್ಯಾರ್ಥಿ ಜನಿವಾರಕ್ಕೆ ಕತ್ತರಿ; ವಾರದ ಹಿಂದೆ ಉಪನಯನ ಆದವಗೆ ಅಪಮಾನ