ಒಂದು ಕೇಸ್, ಮೂರು ಎಫ್‌ಐಆರ್!, ಗೂಂಡಾ ಕಾಯ್ದೆಯಡಿ ಮಂಗಳೂರು ಹಿಂದೂ ಕಾರ್ಯಕರ್ತನ ಬಂಧನ!

Published : Mar 21, 2024, 06:09 PM IST
ಒಂದು ಕೇಸ್, ಮೂರು ಎಫ್‌ಐಆರ್!, ಗೂಂಡಾ ಕಾಯ್ದೆಯಡಿ ಮಂಗಳೂರು ಹಿಂದೂ ಕಾರ್ಯಕರ್ತನ ಬಂಧನ!

ಸಾರಾಂಶ

ಪಾಕಿಸ್ತಾನ ಪರ ಘೋಷಣೆ ಕೂಗಿದವರ ಮೇಲೆ ಕೇಸ್ ಹಾಕೊಲ್ಲ. ಜೈಶ್ರೀರಾಮ್, ಹನಮಾನ್ ಚಾಲೀಸಾ ಹಾಕಿದ ಯುವಕನ ಮೇಲೆ ಹಲ್ಲೆ ನಡೆಸಿದ ಪುಂಡರ ವಿರುದ್ಧ ಕೇಸ್ ಇಲ್ಲ, ಗಡಿಪಾರು ಇಲ್ಲ. ಆದರೆ ಯಾವುದೇ ಅಪರಾಧದಲ್ಲಿ ಭಾಗಿಯಾಗದಿದ್ರೂ ಹಿಂದೂ ಕಾರ್ಯಕರ್ತರ ಮೇಲೆ ಸರ್ಕಾರ ಕೇಸ್ ಹಾಕುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮುಖಂಡ ಶಿವಾನಂದ ಮೆಂಡನ್ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರು (ಮಾ.21): ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಅಖಾಡಕ್ಕಿಳಿದಿದ್ದಕ್ಕೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನ ಧಮನ ಮಾಡುವ ಕೆಲಸ ಮಾಡುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮುಖಂಡ ಶಿವಾನಂದ ಮೆಂಡನ್ ಆರೋಪಿಸಿದ್ದಾರೆ.

ಕಳೆದೊಂದು ವರ್ಷದಿಂದ ಯಾವುದೇ ಅಪರಾಧ ಪ್ರಕರಣದಲ್ಲಿ ಭಾಗಿಯಾಗದ ಮಂಗಳೂರಿನ ಹಿಂದೂ ಕಾರ್ಯಕರ್ತ ಜೆಪಿ ಜಯಪ್ರಕಾಶ್ ಎಂಬುವವರ ಮೇಲೆ ಗೂಂಡಾ ಕಾಯ್ದೆಯಡಿ ಕೇಸ್ ಹಾಕಿ ಬಂಧಿಸಿದ್ದಾರೆ.  ಲೋಕಸಭಾ ಚುನಾವಣೆ ಹಿನ್ನೆಲೆ ಅಲ್ಪಸಂಖ್ಯಾತರ ಮತ ಸೆಳೆಯಲು ಗೂಂಡಾ ಕಾಯ್ದೆಯಡಿ ಕೇಸ್ ಹಾಕಿ ಸರ್ಕಾರ ಬಂಧಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೋಚಕ ಟ್ವಿಸ್ಟ್ ಪಡೆದ ಬಾಗಲಕೋಟೆ ಟಿಕೆಟ್ ಫೈಟ್; ಸೋಷಿಯಲ್ ಮೀಡಿಯಾದಲ್ಲಿ ಬೆಂಬಲಿಗರ ಬಿಗ್ ಫೈಟ್!

ಒಂದು ಕೇಸ್‌ಗೆ 3 ಎಫ್ಐಆರ್!

ಸೆಗಣಿ ಹಾಕಿದ್ದಕ್ಕೆ ಪ್ರದೀಪ್ ಪಂಪವೆಲ್ ಎಂಬ ಕಾರ್ಯಕರ್ತನ ಮೇಲೆ 307 ಸೆಕ್ಷನ್ ಹಾಕಿರುವ ಪೊಲೀಸರು. ಒಂದೇ ಕೇಸ್‌ಗೆ ಮೂರು ಎಫ್‌ಐಆರ್ ದಾಖಲಿಸಿದ್ದಾರೆ. ಪೊಲೀಸರು ನೂರಕ್ಕೆ ನೂರು ಸರಿಯಾಗಿ ಸೆಕ್ಷನ್ ಹಾಕಿಲ್ಲ. ಕಳೆದ ಚುನಾವಣೆ ಸಂದರ್ಭ ಕಾಂಗ್ರೆಸ್ ನವರು ಬಜರಂಗದಳ ಬ್ಯಾನ್ ಎಂದು ಸುಳ್ಳು ಹೇಳಿದ್ರು. ಇದೀಗ ಲೋಕಸಭಾ ಚುನಾವಣೆ ಇರೋದ್ರಿಂದ ಹಿಂದೂ ಕಾರ್ಯಕರ್ತರನ್ನ ಸರ್ಕಾರ ಬಂಧಿಸುತ್ತಿದೆ. ಇದರಿಂದ ಅಲ್ಪಸಂಖ್ಯಾತರ ಮತ ಸಿಗುತ್ತೆ ಎಂಬ ಭ್ರಮೆಯಲ್ಲಿದೆ. ಈ ಕಾರಣಕ್ಕೆ ನಮ್ಮನ್ನ ಚುನಾವಣೆ ಸಂದರ್ಭ ಧಮನ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.

 

ಹಿಂದೆಂದಿಗಿಂತ ಹೆಚ್ಚು ಅಂತರದಲ್ಲಿ ಬ್ರಿಜೇಶ್ ಚೌಟರನ್ನು ಗೆಲ್ಲಿಸಿಕೊಂಡು ಬರುತ್ತೇವೆ: ನಳೀನ್ ಕುಮಾರ ಕಟೀಲ್

ಪಾಕಿಸ್ತಾನ ಪರ ಘೋಷಣೆ ಕೂಗಿದವರ ಮೇಲೆ ಕೇಸ್ ಹಾಕೊಲ್ಲ. ಜೈಶ್ರೀರಾಮ್, ಹನಮಾನ್ ಚಾಲೀಸಾ ಹಾಕಿದ ಯುವಕನ ಮೇಲೆ ಹಲ್ಲೆ ನಡೆಸಿದ ಪುಂಡರ ವಿರುದ್ಧ ಕೇಸ್ ಇಲ್ಲ, ಗಡಿಪಾರು ಇಲ್ಲ. ಆದರೆ ಯಾವುದೇ ಅಪರಾಧದಲ್ಲಿ ಭಾಗಿಯಾಗದಿದ್ರೂ ಹಿಂದೂ ಕಾರ್ಯಕರ್ತರ ಮೇಲೆ ಸರ್ಕಾರ ಕೇಸ್ ಹಾಕುತ್ತಿದೆ. ಹೀಗಾಗಿ ನಮಗೆ ಹಿಂದೂಗಳ ಪರವಾದ ಸರ್ಕಾರ ಬೇಕು. ನಾವು ಈ ಬಾರಿ ಮನೆಮನೆಗೆ ಹೋಗಿ ಪ್ರಚಾರ ಮಾಡುತ್ತೇವೆ. ನಮ್ಮ ಕೇಂದ್ರದ ಬೈಠಕ್ ನಲ್ಲೂ ಈ ಬಗ್ಗೆ ತೀರ್ಮಾನವಾಗಿದೆ. ಈ ಕಾರಣಕ್ಕೆ ನಾವು ಹಿಂದುತ್ವದ ಪರವಾದ ಸರಕಾರವನ್ನ ಗೆಲ್ಲಿಸುತ್ತೇವೆ. ನಮ್ಮದು ಗೋ ಹತ್ಯೆ, ಡ್ರಗ್ಸ್, ಹೆಣ್ಣು ಮಕ್ಕಳನ್ನ ಕೆಡಿಸುವ ಸಂಘಟನೆಯಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!