ಶಾಂತಿಯ ತೋಟದಲ್ಲಿ ಸಿದ್ದರಾಮಯ್ಯ ಸರ್ಕಾರ ಹಿಂದೂ ದ್ವೇಷದ ಬೀಜ ಬಿತ್ತುತ್ತಿದೆ: ಸಂಸದ ಕಿಡಿ

Published : May 03, 2025, 08:26 AM ISTUpdated : May 03, 2025, 08:34 AM IST
ಶಾಂತಿಯ ತೋಟದಲ್ಲಿ ಸಿದ್ದರಾಮಯ್ಯ ಸರ್ಕಾರ ಹಿಂದೂ ದ್ವೇಷದ ಬೀಜ ಬಿತ್ತುತ್ತಿದೆ: ಸಂಸದ ಕಿಡಿ

ಸಾರಾಂಶ

ಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅಪಚಾರವೆಸಗಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಮಂಗಳೂರು (ಮೇ.3): ಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅಪಚಾರವೆಸಗಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿ ಅವಮಾನಿಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸಂಸದರು, ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿಇಟಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಯಜ್ಞೋಪವೀತ ತುಂಡರಿಸಿರುವುದು ಹಿಂದೂಗಳ ಶ್ರದ್ಧೆಯ ಮೇಲೆ ನಡೆದ ಆಕ್ರಮಣವಾಗಿದೆ. ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ಬಲವಂತವಾಗಿ ತೆಗೆಸಿರುವುದು ಸನಾತನ ಹಿಂದು ಧರ್ಮದ ಭಾಗವಾದ ಬ್ರಾಹ್ಮಣ ಸಮಾಜಕ್ಕೆ ಮಾಡಿದ ಅವಮಾನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುಡುಪು ಗುಂಪು ಹ ತ್ಯೆಯಲ್ಲಿ ಅಮಾಯಕರ ಸಿಲುಕಿಸಿದರೆ ಹೋರಾಟ: ಶಾಸಕ ಡಾ.ಭರತ್‌ ಶೆಟ್ಟಿ...

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದಲ್ಲಿ ದ್ವೇಷದ ಬೀಜವನ್ನು ಬಿತ್ತುತ್ತಿದ್ದು, ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮುಸ್ಲಿಮರಿಗೆ ಮೀಸಲಾತಿ, ಜಾತಿ ಗಣತಿಯಲ್ಲಿಯೂ ತಾರತಮ್ಯ, ಜನಿವಾರದಂತಹ ಕೃತ್ಯಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಗದ ಜನರನ್ನು ಓಲೈಸುತ್ತಿರುವುದು ಕೋಮುವಾದದ ಅತಿರೇಕದ ನಡೆಗಳಾಗಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಕ್ಷಣ ರಾಜ್ಯದ ಜನತೆಯ ಕ್ಷಮೆಯಾಚಿಸಿ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌