ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗುವುದರ ಜೊತೆಗೆ ಭಾರೀ ಅವಘಡವೊಂದು ಫೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಮಂಗಳೂರು (ಮೇ.25): ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗುವುದರ ಜೊತೆಗೆ ಭಾರೀ ಅವಘಡವೊಂದು ಫೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಮಂಗಳೂರಿನಿಂದ ದುಬೈಗೆ (Mangaluru to dubai) ಹೊರಟಿದ್ದ ಇಂಡಿಗೋ ವಿಮಾನ(Indigo flight) ಪ್ರಯಾಣಿಕರ ಸಹಿತ ಬೆ.8.30ಕ್ಕೆ ಹೊರಟಿತ್ತು. ಟ್ಯಾಕ್ಸಿ ವೇ ದಾಟಿ ರನ್ ವೇ(runway)ನಲ್ಲಿ ಸಾಗುತ್ತಿದ್ದ ಇಂಡಿಗೋ ವಿಮಾನ ಇನ್ನೇನು ಕೆಲವೇ ಕ್ಷಣಗಳಲ್ಲಿ ಟೇಕಾಫ್ ಆಗುವ ಸಿದ್ದತೆಯಲ್ಲಿತ್ತು. ಈ ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ರೆಕ್ಕೆಯ ಇಂಜಿನ್ ಭಾಗದಲ್ಲಿ ಶಬ್ದ ಉಂಟಾಗಿ ತಾಂತ್ರಿಕ ಸಮಸ್ಯೆಯ ಸೂಚನೆ ಕೊಟ್ಟಿದೆ ಎನ್ನಲಾಗಿದೆ.
ಮಂಗಳೂರು ವಿಮಾನ ದುರಂತ ಕಹಿ ನೆನಪಿಗೆ 13 ವರ್ಷ !
ಈ ವೇಳೆ ತಕ್ಷಣ ಅಪಾಯದ ಸೂಚನೆ ಅರಿತು ಎಟಿಸಿಗೆ(Air traffic control) ಮಾಹಿತಿ ನೀಡಿದ ಪೈಲಟ್, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಾಸ್ ಬಂದಿದ್ದಾರೆ. ಸದ್ಯ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ನಡೆಸಲಾಗಿ, ಹಾರಾಟ ಅಸಾಧ್ಯ ಎನ್ನಲಾಗಿದೆ. ಹೀಗಾಗಿ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ದುಬೈಗೆ ತೆರಳಲು ವ್ಯವಸ್ಥೆ ಮಾಡಲಾಗಿದೆ. ದುಬೈಗೆ ತೆರಳಲು ಮತ್ತೊಂದು ವಿಮಾನದ ಮೂಲಕ ವ್ಯವಸ್ಥೆ ಮಾಡಲಾಗಿದ್ದು, ಕೆಲ ಕಾಲ ಮಂಗಳೂರು ಏರ್ಪೋರ್ಟ್ ನಲ್ಲಿ ಈ ಘಟನೆ ಆತಂಕಕ್ಕೆ ಕಾರಣವಾಗಿದೆ.
ನೇಪಾಳ ವಿಮಾನ ದುರಂತ: ಫೇಸ್‌ಬುಕ್ ಲೈವ್ ಮಾಡುವಾಗ ಅಪಘಾತ.!