
ಮಂಗಳೂರು: ದುಬೈನಲ್ಲಿ ಕುಳಿತು ಮಂಗಳೂರಿನಲ್ಲಿ ಕೋಮು ಭಾವನೆ ಕೆರಳಿಸುವಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಯುವಕನನ್ನು ಮಂಗಳೂರು ಪೊಲೀಸರು ಬಲೆಗೆ ಕೆಡವಿದ್ದಾರೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಮೂಲದ 27 ವರ್ಷದ ಅಬ್ದುಲ್ ಖಾದರ್ ನೇಹಾದ್ ಬಂಧಿತ ಆರೋಪಿ. ಈತ ಸೌದಿ ಆರೇಬಿಯಾದಲ್ಲಿ ಅಡಗಿದ್ದ ಈತ ಅಲ್ಲೇ ಕುಳಿತು ಇನ್ಸ್ಟಾಗ್ರಾಮ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಅನ್ಯ ಧರ್ಮದವರ ಬಗ್ಗೆ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ವಿಚಾರಗಳನ್ನು ಪೋಸ್ಟ್ ಮಾಡಿ ಕೋಮು ಭಾವನೆಯನ್ನು ಕೆರಳಿಸುತ್ತಿದ್ದ.
ಆರೋಪಿ ಅಬ್ದುಲ್ ಖಾದರ್ sdpi_2025 ಎಂಬ ಇನ್ಸ್ಟಾಗ್ರಾಮ್ ಖಾತೆಯನ್ನು ನಿಭಾಯಿಸುತ್ತಿದ್ದು, ಕಳೆದ ಆಕ್ಟೋಬರ್ 11 ರಂದು ಇದೇ ಖಾತೆಯ ಮೂಲಕ ಆತ ಅನ್ಯಧರ್ಮಗಳ ಬಗ್ಗೆ ತೀವ್ರ ಆಕ್ಷೇಪಾರ್ಹ ಹಾಗೂ ಅವಮಾನಕಾರಿಯಾಗಿ ಪೋಸ್ಟೊಂದನ್ನು ಪೋಸ್ಟ್ ಮಾಡಿದ್ದ. ಸಮಾಜದ ಶಾಂತಿ ಕದಡುವ ಉದ್ದೇಶದಿಂದಲೇ ಈ ರೀತಿ ಪೋಸ್ಟ್ ಹಂಚಿಕೊಳ್ಳುತ್ತಿದ್ದ. ಈ ಹಿನ್ನೆಲೆಯಲ್ಲಿ ಬಜ್ಪೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ತನಿಖೆ ಆರಂಭಿಸಿದಾಗ, ಈ ಪ್ರಚೋದನಕಾರಿ ಪೋಸ್ಟ್‌ನ್ನು ಮಂಗಳೂರಿನ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ ಪ್ರಸ್ತುತ ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಅಬ್ದುಲ್ ಖಾದರ್ ಅಲ್ಲಿಂದಲೇ ಸ್ಟೇಟಸ್ ಹಾಕಿರುವುದಾಗಿ ತನಿಖೆಯಿಂದ ತಿಳಿದು ಬಂತು.
ಇದನ್ನೂ ಓದಿ: ನಿದ್ರಿಸುತ್ತಿದ್ದ ಪೋಷಕರ ಮಧ್ಯೆ ಸಿಲುಕಿ ನವಜಾತ ಶಿಶು ಸಾವು
ಹೀಗಾಗಿ ವಿದೇಶದಲ್ಲಿ ಕುಳಿತು ಇಲ್ಲಿ ಕೋಮು ಗಲಭೆಗೆ ಪ್ರೇರಣೆ ನೀಡುತ್ತಿರುವ ಅಬ್ದುಲ್ ಖಾದರ್ ವಿರುದ್ಧ ಮಂಗಳೂರು ಪೊಲೀಸರು ತಕ್ಷಣವೇ ಲುಕೌಟ್ ನೋಟೀಸ್ ಜಾರಿ ಮಾಡಿದ್ದರು. ಇದಾದ ನಂತರ ಡಿಸೆಂಬರ್ 14ರಂದು ಸೌದಿ ಅರೇಬಿಯಾದಿಂದ ಅಬ್ದುಲ್ ಖಾದರ್ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಕೂಡಲೇ ಪೊಲೀಸರು ಆತನನ್ನು ಬಂಧಿಸಿ ಏರ್‌ಪೋರ್ಟ್‌ನಲ್ಲಿ ಬಂಧಿಸಿದ್ದಾರೆ. ಮಂಗಳೂರು ಪೊಲೀಸರ ಈ ಕಾರ್ಯಾಚರಣೆಗೆ ಈಗ ಶ್ಲಾಘನೆ ವ್ಯಕ್ತವಾಗ್ತಿದೆ.
ಇದನ್ನೂ ಓದಿ: ಸಿಡ್ನಿಯ ಬೋಂಡಿ ಬೀಚ್‌ನಲ್ಲಿ 15 ಜನರ ಬಲಿ ಪಡೆದ ಯಹೂದಿ ಹಬ್ಬದ ಮೇಲಿನ ದಾಳಿಯ ಹಿಂದೆ ಪಾಕಿಸ್ತಾನಿ ಅಪ್ಪ ಮಗ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ