ಚಂಡಮಾರುತದಿಂದ ಕರ್ನಾಟಕದಲ್ಲಿ ಮುಂದಿನ 2 ದಿನ ಭಾರಿ ಮಳೆ, ನಾಲ್ಕು ಜಿಲ್ಲೆಗೆ ಯೆಲ್ಲೋ ಅಲರ್ಟ್

Published : Oct 28, 2025, 01:40 PM IST
These are the severe cyclones that hit Andhra Pradesh causing havoc with rain

ಸಾರಾಂಶ

ಚಂಡಮಾರುತದಿಂದ ಕರ್ನಾಟಕದಲ್ಲಿ ಮುಂದಿನ 2 ದಿನ ಭಾರಿ ಮಳೆ, ನಾಲ್ಕು ಜಿಲ್ಲೆಗೆ ಯೆಲ್ಲೋ ಅಲರ್ಟ್, ಕರ್ನಾಟಕದ ಕರಾವಳಿ ಜಿಲ್ಲೆ ಸೇರಿದಂತೆ ಉತ್ತರದ ದಿಲ್ಲೆಗಳಲ್ಲಿ ಭಾರಿ ಮಳೆ ಸೂಚನೆ ನೀಡಲಾಗಿದೆ.

ಬೆಂಗಳೂರು (ಅ.28) ಮೋಂಥಾ'ಚಂಡಮಾರುತ ಮತ್ತು ವಾಯುಭಾರ ಕುಸಿತದ ಹಿನ್ನೆಲೆಯಲ್ಲೇ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪ್ರಮುಖವಾಗಿ ಆಂಧ್ರ ಪ್ರದೇಶದ ಕರಾವಳಿ ತೀರಕ್ಕೆ ಚಂಡಮಾರುತ ಅಪ್ಪಳಿಸುತ್ತಿದೆ. ಹೀಗಾಗಿ ಆಂಧ್ರ ಪ್ರದೇಶ, ಒಡಿಶಾ, ತಮಿಳುನಾಡು, ಕರ್ನಾಟಕ ಹಾಗೂ ಕೇರಳ ಭಾಗದಲ್ಲಿ ಮಳೆಯಾಗುತ್ತಿದೆ. ಇದೀಗ ಭಾರತೀಯ ಹವಾಮಾನ ಇಲಾಖೆ ಮಹತ್ವದ ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾಲ್ಕು ಜಿಲ್ಲೆಗೆ ಯೆಲ್ಲೋ ಅಲರ್ಟ್

ಭಾರೀ ಮಳೆ ಮತ್ತು ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ . ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಮೋಂಥಾ'ಇಂದು ಉತ್ತರ-ವಾಯುವ್ಯದ ಕಡೆಗೆ ಗಂಟೆಗೆ 18 ಕಿ.ಮೀ. ವೇಗದಲ್ಲಿ ಚಲಿಸಲಿದೆ. ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆಯಾದರೆ, ಉತ್ತರ ಒಳನಾಡಿನ‌ ಬಾಗಲಕೋಟೆ, ಕೊಪ್ಪಳ, ರಾಯಚೂರು, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆ ನಿರೀಕ್ಷಿಸಲಾಗಿದೆ. ಈ ಪೈಕಿ ಬೀದರ್, ಯಾದಗಿರಿ, ವಿಜಯಪುರ ಗುಲ್ಬರ್ಗಾದಲ್ಲಿ ಇಂದು ಹಾಗೂ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಸೂಚಿಸಲಾಗಿದೆ.

ಮುಂದಿನ 48 ಗಂಟೆ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸ ಮೋಡ ಕವಿದ ವಾತಾವರಣ ಇರಲಿದೆ. ಇಷ್ಟೇ ಅಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 25°C ರಿಂದ 20°C ಇರಬಹುದು.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ಆಂಧ್ರಪ್ರದೇಶದ ಹಲವು ರಾಜ್ಯಗಳು ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆಯಿಂದ ತತ್ತರಿಸಿ ಹೋಗಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು ಕಾರ್ಯಪ್ರವೃತ್ತವಾಗಿದೆ. ಚಂಡಮಾರುತ ಕಾಕಿನಾಡದಿಂದ 370 ಕಿ.ಮೀ ದೂರದಲ್ಲಿದೆ. ಪ್ರತಿ ಘಂಟೆಗೆ 110 ಕಿ.ಮೀ ವೇಗದಲ್ಲಿ ಚಂಡಮಾರುತ ಕಾಕಿನಾಡದ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಲಿದೆ. ಹೀಗಾಗಿ ಎರಡು ದಿನಗಳ ಕಾಲ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿ ಸಿ ಎಸ್ ಪಾಟೀಲ್ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕನ್ನಡದ 'ತ್ರಿಮೂರ್ತಿ'ಗಳ ಸಂಗಮಕ್ಕೆ ಸಾಕ್ಷಿಯಾಗಲಿದ್ದಾರೆ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್
ಹೊಸ ವರ್ಷ 2026ಕ್ಕೆ ಕೆಲವೇ ದಿನ, 2025ರಲ್ಲಿ ದೇಶಮಟ್ಟದಲ್ಲಿ ಸುದ್ದಿಯಾದ ಬೆಂಗಳೂರಿನ ಅಪರಾಧ ಲೋಕದ ಕರಾಳ ಅಧ್ಯಾಯಗಳಿವು!