
ಮಂಡ್ಯ (ಅ.25) : ಅದ್ಧೂರಿ, ಆಡಂಬರದ ಮದುವೆಗಳ ನಡುವೆಯೂ ರಾಷ್ಟ್ರಕವಿ ಕುವೆಂಪು ಅವರ ಮಂತ್ರ ಮಾಂಗಲ್ಯದ ರೀತಿಯಲ್ಲಿ ಅತ್ಯಂತ ಸರಳವಾಗಿ ಮದುವೆ ಮಾಡಿಕೊಂಡ ಜೋಡಿ ರಕ್ತದಾನ, ಪರಿಸರ ಸಂರಕ್ಷಣೆಗಾಗಿ ಸಸಿ ನೆಟ್ಟು ಮಾದರಿಯಾಗಿದ್ದಾರೆ.
ತಾಲೂಕಿನ ಎಂ.ಎಸ್.ಯಶಸ್ವಿನಿ ಮತ್ತು ಸಿ.ಸೋಮಶೇಖರ್ ಅವರು ಬೆಳಗ್ಗೆ ಸಸಿ ನೆಟ್ಟು, ರಕ್ತದಾನ ಮಾಡುವ ಮೂಲಕ ದಾಂಪತ್ಯಕ್ಕೆ ಕಾಲಿಟ್ಟ ಜೋಡಿಗಳು. ಗ್ರಾಮದ ಮಲ್ಲೇಶ್ವರಸ್ವಾಮಿ ಸಮುದಾಯ ಭವನದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪರಿಕಲ್ಪನೆಯಂತೆ ಶ್ರೀನಾದನಂದನಾಥ ಸ್ವಾಮಿ, ನಟ ಚೇತನ್ ಅಹಿಂಸಾ, ನಟಿ ಪೂಜಾ ಗಾಂಧಿ, ಗಣ್ಯರ ಸಮ್ಮುಖದಲ್ಲಿ ಮಂತ್ರ ಮಾಂಗಲ್ಯ ಮದುವೆ ಆಗುವ ಮೂಲಕ ಸಂಸಾರಿಕ ಹಾದಿ ತುಳಿದರು.
ಇದನ್ನೂ ಓದಿ: ವಧು-ವರರಿಬ್ಬರಿಗೂ ತಾಳಿ ಮಾದರಿಯ ವಿವಾಹ ಮುದ್ರೆ: ವಿಶಿಷ್ಟ ಮದುವೆಗೆ ಸಾಕ್ಷಿಯಾದ ಗದಗ..!
ರೈತಸಂಘ ಮುಖಂಡರಾದ ನಂದಿನಿ ಜಯರಾಂ ವಿವಾಹ ಸಂಹಿತೆ ಬೋಧಿಸಿದರು. ಯಾಚೇನಹಳ್ಳಿ ಶ್ರೀರಾಮಕೃಷ್ಣ ಸೇವಾಕೇಂದ್ರ ಟ್ರಸ್ಟ್‌ನ ಶ್ರೀನಾದನಂದನಾಥಸ್ವಾಮಿ ಸಾನ್ನಿಧ್ಯ ವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ