Yeswanthpur : ಮಾರಮ್ಮ ಸರ್ಕಲ್‌ White Topping ಕಾಮಗಾರಿ: ನ.1ರೊಳಗೆ ಮುಗಿಸಲು ಸಚಿವರ ಸೂಚನೆ

Published : Oct 08, 2022, 02:27 PM ISTUpdated : Oct 08, 2022, 02:28 PM IST
Yeswanthpur : ಮಾರಮ್ಮ ಸರ್ಕಲ್‌ White Topping ಕಾಮಗಾರಿ: ನ.1ರೊಳಗೆ ಮುಗಿಸಲು ಸಚಿವರ ಸೂಚನೆ

ಸಾರಾಂಶ

ಯಶವಂತಪುರ ವೃತ್ತದಿಂದ ಮಲ್ಲೇಶ್ವರಂನ ಮಾರಮ್ಮನ ಗುಡಿ ಸರ್ಕಲ್‌ವರೆಗೆ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಭರದಿಂದ ಸಾಗಿದ್ದು, ನ.1ರೊಳಗೆ ಮುಗಿಸಲು ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು (ಅ.8): ಯಶವಂತಪುರ ವೃತ್ತದಿಂದ ಮಲ್ಲೇಶ್ವರಂನ ಮಾರಮ್ಮನ ಗುಡಿ ಸರ್ಕಲ್‌ವರೆಗೆ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಭರದಿಂದ ಸಾಗಿದ್ದು, ನ.1ರೊಳಗೆ ಮುಗಿಸಲು ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜೆಡಿಎಸ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಶ್ವತ್ಥ್ ನಾರಾಯಣ, ತೇಜಸ್ವಿ ಸೂರ್ಯ

ಶನಿವಾರ ಬೆಳಗ್ಗೆ ಕಾಮಗಾರಿ ಪರಿಶೀಲನೆ ನಡೆಸಿದ ಅವರು, 'ನಗರದ ಅತ್ಯಂತ ವಾಹನದ ದಟ್ಟಣೆಯ ರಸ್ತೆಗಳಲ್ಲಿ ಇದೂ ಒಂದಾಗಿದ್ದು, ಮಾರಮ್ಮ ಸರ್ಕಲ್‌(Maramma Circle)ನಿಂದ ಯಶವಂತಪುರ ವೃತ್ತ(Yashwantapur Circle)ದವರೆಗೆ ಈಗಾಗಲೇ ಒಂದು ಬದಿಯ ವೈಟ್‌ ಟಾಪಿಂಗ್(white topping) ಕಾಮಗಾರಿ ಮುಗಿದು ಸಾರ್ವಜನಿಕರು ಉಪಯೋಗಿಸುತ್ತಿದ್ದಾರೆ. ಈಗ ಇನ್ನೊಂದು ಬದಿಯಿಂದ ಈ ಕಾಮಗಾರಿ ನಡೆಸಲಾಗುತ್ತಿದೆ' ಎಂದರು. 

ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ 36, 37 ಮತ್ತು 41ರಲ್ಲಿ ಕುಡಿಯುವ ನೀರು ಪೂರೈಕೆಗೆ ಹೊಸದಾಗಿ 700 ಮಿಲಿ ಮೀಟರ್ ವ್ಯಾಪ್ತಿಯ ಕೊಳವೆಗಳನ್ನು ಹೊಸದಾಗಿ ಹಾಕಲಾಗುತ್ತಿದೆ. ಹಾಗೆಯೇ, ಬಿಇಎಲ್‌(BEL) ಗೆ ಸಂಪರ್ಕ ಕಲ್ಪಿಸುವ 300 ಮಿಲಿ ಮೀಟರ್ ವ್ಯಾಪ್ತಿಯ ಕೊಳವೆಗಳನ್ನು ಹಾಕಲಾಗುತ್ತಿದೆ. ಈ ಕಾಮಗಾರಿಗಳು ಕೂಡ ಕ್ಷಿಪ್ರಗತಿಯಲ್ಲಿ ಮುಗಿಯಲಿವೆ ಎಂದು ಅವರು ತಿಳಿಸಿದರು.

ಕಾಮಗಾರಿ ನಡೆಸುವಾಗ ಗುಣಮಟ್ಟದ ಪಾದಚಾರಿ ರಸ್ತೆಗಳನ್ನು ನಿರ್ಮಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಜೊತೆಗೆ, ಹಿಂದಿನ ಪಾದಚಾರಿ ಮಾರ್ಗಗಳಲ್ಲಿದ್ದ ಕೊರಕಲು ಇತ್ಯಾದಿ ಲೋಪದೋಷಗಳನ್ನು ಸರಿಪಡಿಸಲು ನಿರ್ದೇಶಿಸಲಾಗಿದೆ. ಸುಗಮ ವಾಹನ ಸಂಚಾರದ ಜತೆಗೆ ಪಾದಚಾರಿಗಳ ಸುಲಭ ಓಡಾಟಕ್ಕೂ ಅನುಕೂಲಕರ ಫುಟ್‌ಪಾತ್‌ಗಳನ್ನು ಅಭಿವೃದ್ಧಿ ಪಡಿಸಲು ಸಚಿವರು ಸೂಚಿಸಿದರು.

ರಾಮನಗರದಲ್ಲಿ ಜೆಡಿಎಸ್‌ಗೆ ಶಾಕ್ ಕೊಟ್ಟ ಅಶ್ವತ್ಥ್ ನಾರಾಯಣ, ಮಾಜಿ MLC ಬಿಜೆಪಿ ಸೇರ್ಪಡೆ

ಹೊಸ ಕೊಳವೆಗಳನ್ನು ಹಾಕುವಾಗ ಆ ಜಾಗಗಳನ್ನು ಭದ್ರವಾಗಿ ಮುಚ್ಚುವ ಕಡೆ ಗಮನ ಹರಿಸಬೇಕು. ಅಲ್ಲದೆ, ಒಳಚರಂಡಿ ಮಾರ್ಗಗಳನ್ನು ಸುಸ್ಥಿತಿಯಲ್ಲಿ ಇಡಬೇಕು. ಇಲ್ಲದೆ ಹೋದರೆ ಒಳಚರಂಡಿ ನೀರು ಕುಡಿಯುವ ನೀರಿಗೆ ಸೇರಿ ಎಲ್ಲವೂ ಕಲುಷಿತವಾಗುತ್ತದೆ. ಹೀಗಾಗದಂತೆ ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಜೊತೆಗೆ ಎಲ್ಲೂ ಅನಗತ್ಯವಾಗಿ ಮಣ್ಣು ತುಂಬಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಅವರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಹೇಳಿದರು.

ಬಿಬಿಎಂಪಿ(BBMP) ಕಾರ್ಯನಿರ್ವಾಹಕ ಎಂಜಿನಿಯರ್(Engineer) ಜಯಶಂಕರ್(jaishankar), ಜಲಮಂಡಳಿ ಸೇರಿದಂತೆ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್
ಮಹಿಳಾ ನೌಕರರಿಗೆ ಬ್ಯಾಡ್ ನ್ಯೂಸ್: ಮುಟ್ಟಿನ ರಜೆಗೆ ಹೈಕೋರ್ಟ್ ತಡೆ: ಸರ್ಕಾರದ ಆದೇಶಕ್ಕೆ ಹಿನ್ನಡೆ?