ಮರಾಠಾ ಮೀಸಲು ಕಿಡಿಗೆ ಹೊತ್ತಿ ಉರಿದ ಮಹಾರಾಷ್ಟ್ರ: ಕೆಎಸ್‌ಆರ್‌ಟಿಸಿಯ 10 ಬಸ್‌ಗಳಿಗೆ ಬಿತ್ತು ಬೆಂಕಿ!

By Kannadaprabha News  |  First Published Sep 2, 2023, 9:58 AM IST

ಮರಾಠ ಸಮುದಾಯಕ್ಕೆ ರಾಜ್ಯ ಸರ್ಕಾರ ನೀಡಿದ್ದ ಮೀಸಲಾತಿಯನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಜಾಲ್ನಾ ಜಿಲ್ಲೆಯ ಶಹಘಡ ಬಳಿ ಧುಳೆ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದ ಮರಾಠಾ ಹೋರಾಟಗಾರರು ಹಿಂಸೆಗೆ ಇಳಿದಿದ್ದಾರೆ.


ಜಾಲ್ನಾ/ಬೆಳಗಾವಿ: ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಶುಕ್ರವಾರ ಹಿಂಸಾಚಾರಕ್ಕೆ ತಿರುಗಿದೆ. ಘಟನೆಯಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಗಳಿಗೆ ಸೇರಿದ 10 ಬಸ್ಸಿಗೆ ಬೆಂಕಿ ಹಚ್ಚಲಾಗಿದೆ. ಘಟನೆಯಲ್ಲಿ 18 ಪೊಲೀಸರು ಮತ್ತು 20ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.

ಈ ಹಿಂದೆ ಮರಾಠ ಸಮುದಾಯಕ್ಕೆ ರಾಜ್ಯ ಸರ್ಕಾರ ನೀಡಿದ್ದ ಮೀಸಲಾತಿಯನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಜಾಲ್ನಾ ಜಿಲ್ಲೆಯ ಶಹಘಡ ಬಳಿ ಧುಳೆ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದ ಮರಾಠಾ ಹೋರಾಟಗಾರರು ಹಿಂಸೆಗೆ ಇಳಿದಿದ್ದಾರೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ 10 ಬಸ್ಸಿಗೆ ಬೆಂಕಿ ಹಾಕಲಾಗಿದ್ದು, ಎಲ್ಲ 10 ಬಸ್ಸು ಕರ್ನಾಟಕದ ಸಾರಿಗೆ ಸಂಸ್ಥೆಗಳ ಬಸ್ಸುಗಳು ಎಂದು ಗೊತ್ತಾಗಿದೆ. ಈ ಪೈಕಿ ಈ ಆಹುತಿಯಾದ 1 ಬಸ್ಸು ಔರಂಗಾಬಾದ್‌ನಿಂದ ಹುಬ್ಬಳ್ಳಿಗೆ ಬರುತ್ತಿತ್ತು. ಅದರಲ್ಲಿ 45 ಪ್ರಯಾಣಿಕರಿದ್ದು. ಅದರ ಬಸ್‌ನ ಚಾಲಕ ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದ ಎಲ್‌.ಎಲ್‌. ಲಮಾಣಿ ಎಂದು ಗೊತ್ತಾಗಿದೆ. ಕೆಲವು ಪ್ರಯಾಣಿಕರಿಗೆ ಗಾಯವಾಗಿದೆ.

Tap to resize

Latest Videos

ಇದನ್ನು ಓದಿ: ರಾಜಕೀಯ ಪಕ್ಷಗಳಿಗೆ ಶಾಕ್: ಮೀಸಲಾತಿ ಮಿತಿ ಶೇ. 50 ಮೀರಿಸಲು ಸುಪ್ರೀಂಕೋರ್ಟ್‌ ನಕಾರ

ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಹಾಗೂ ಅಶ್ರುವಾಯು ಸಿಡಿಸಿದ್ದಾರೆ. ಅಲ್ಲದೇ ಗಾಳಿಯಲ್ಲಿ ಕೆಲ ಸುತ್ತಿನ ಗುಂಡುಗಳನ್ನೂ ಹಾರಿಸಲಾಗಿದೆ. ಈ ನಡುವೆ ಶಾಂತಿ ಕಾಪಾಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಶಿವಸೇನಾ ನಾಯಕ ಏಕನಾಥ ಶಿಂಧೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿನ ಮರಾಠಿಗರಿಗೆ ಮಹಾರಾಷ್ಟ್ರ ನೆರವು ಪ್ರಕಟ

ಬಸ್‌ ಸಂಚಾರ ನಿಲ್ಲಿಸುತ್ತೇವೆ: ರಾಮಲಿಂಗಾರೆಡ್ಡಿ 
ಮಹಾರಾಷ್ಟ್ರದ ಗಲಾಟೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಿಗೆ ಬೆಂಕಿ ಬಿದ್ದಿದ್ದರೆ, ಗದ್ದಲ ಕಡಿಮೆಯಾಗುವವರೆಗೂ ಬಸ್‌ ಸಂಚಾರ ಸ್ಥಗಿತಗೊಳಿಸುವ ಬಗ್ಗೆ ತೀರ್ಮಾನಿಸಲಾಗುವುದು. ನಮ್ಮ ಬಸ್‌ಗಳಿಗೆ ರಕ್ಷಣೆ ನೀಡಲು ಮಹಾರಾಷ್ಟ್ರ ಸರ್ಕಾರವನ್ನು ಮನವಿ ಮಾಡುತ್ತೇವೆ ಎಂದು ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. 

ಇದನ್ನೂ ಓದಿ: ಪರ-ವಿರೋಧದ ನಡುವೆ ರಾತ್ರೋರಾತ್ರಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ!

 

ಇದನ್ನೂ ಓದಿ: ಬೆಳಗಾವಿ ಪಾಲಿಕೆಯಲ್ಲಿ MES ಯುಗಾಂತ್ಯ: ಮರಾಠಿಗರಿಗೆ ಮಣೆ ಹಾಕಿದ್ದಕ್ಕೆ ಬಿಜೆಪಿ ವಿರುದ್ಧ ಕರವೇ ಗರಂ

 

click me!