
ಬೆಂಗಳೂರು (ಮೇ.7) : ಪ್ಯಾರಾ ವೈದ್ಯಕೀಯ ಮಂಡಳಿಯಲ್ಲಿ ಮಾರ್ಕ್ ಕಾರ್ಡ್ ಟೆಂಡರ್‌ಗೆ ಸಂಬಂಧಿಸಿ ಅಕ್ರಮ ನಡೆದಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಇಲಾಖೆಯಲ್ಲಿ ಕಾನೂನು ಬಾಹಿರ ಟೆಂಡರ್‌ಗಳನ್ನು ಮಾಡಲಾಗುತ್ತಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರ ಲೂಟಿಯಲ್ಲಿ ತೊಡಗಿದ್ದು, ತಮಗೆ ಬೇಕಾದವರಿಗೆ ಮಾರ್ಕ್ಸ್ ಕಾರ್ಡ್ ಟೆಂಡರ್‌ಗೆ ಅವಕಾಶ ನೀಡಲಾಗುತ್ತಿದೆ. ಕರ್ನಾಟಕ ಪಬ್ಲಿಕ್ ಪ್ರೊಕ್ಯೂರ್‍ಮೆಂಟ್ ಪೋರ್ಟಲ್‍ನಲ್ಲಿ ಟೆಂಡರ್‌ಗಳನ್ನು ಹಾಕಲಾಗುತ್ತದೆ. ಮಾರ್ಕ್ಸ್ ಕಾರ್ಡ್ ಮುದ್ರಣ ಮಾಡುವ ಕಾರ್ಯದಲ್ಲಿ ನಮ್ಮ ಸರ್ಕಾರ ಟೆಂಡರ್ ನೀಡಿತ್ತು. ಒಂದು ಮಾರ್ಕ್ಸ್ ಕಾರ್ಡ್ ಮುದ್ರಿಸಲು 9.45 ರು.ಗೆ ಟೆಂಡರ್ ನೀಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಟೆಂಡರ್ ಕರೆದು ಮಾರ್ಕ್ಸ್ ಕಾರ್ಡ್ ಮುದ್ರಿಸಲು 100 ರು. ಕೋರಿದೆ. ಮಾತುಕತೆ ಬಳಿಕ 91 ರು.ಗೆ ಇಳಿಕೆ ಮಾಡಿದೆ ಎಂದು ದೂರಿದರು.
ಇದನ್ನೂ ಓದಿ: Breaking News: ರಾಜ್ಯದ ಜಲಾಶಯಗಳಿಗೆ ಬಿಗಿ ಭದ್ರತೆ ಒದಗಿಸಲು ರಾಜ್ಯ ಸರ್ಕಾರದಿಂದ ತುರ್ತು ಆದೇಶ!
ನಗರದ ಸಂಜಯನಗರದಲ್ಲಿನ ಊರ್ದವ್ ಮ್ಯಾನೇಜ್‍ಮೆಂಟ್ ಪ್ರೈವೇಟ್ ಲಿಮಿಟೆಡ್‍ಗೆ ವರ್ಕ್ ಆರ್ಡರ್ ಕೊಡಲಾಗಿದೆ. ಈ ವಿಷಯ ತಿಳಿದ ಬಳಿಕ ಸರ್ಕಾರಕ್ಕೆ ಪತ್ರ ಬರೆದು ಕೆಟಿಪಿಪಿ ಕಾಯ್ದೆ ಉಲ್ಲಂಘನೆಯಾಗಿರುವ ಬಗ್ಗೆ ಗಮನಸೆಳೆಯಲಾಗಿತ್ತು. ಇದಕ್ಕೆ ಈವರೆಗೂ ಉತ್ತರ ನೀಡಿಲ್ಲ. ಟೆಂಡರ್ ಅನ್ನು ಊರ್ದವ್ ಮ್ಯಾನೇಜ್‍ಮೆಂಟ್ ಪ್ರೈವೇಟ್ ಲಿಮಿಟೆಡ್‍ನ ನಿರ್ದೇಶಕ ವೆಂಕಟರೆಡ್ಡಿ ಡಿ. ಪಾಟೀಲರಿಗೆ ಇದನ್ನು ನೀಡಿದ್ದು, ಅವರು ಸಚಿವ ಡಾ.ಶರಣಪ್ರಕಾಶ್ ಪಾಟೀಲರ ಹತ್ತಿರದ ಸಂಬಂಧಿ ಅಥವಾ ಸಮೀಪವರ್ತಿಯಾಗಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ: ಇದನ್ನೂ ಓದಿ: ಆಪರೇಷನ್ ಸಿಂಧೂರ್ ಎಫೆಕ್ಟ್: 11 ಏರ್ಪೋರ್ಟ್‌ಗಳೂ ಬಂದ್, ವಿಮಾನಗಳ ಹಾರಾಟ ರದ್ದು
ಊರ್ದವ್ ಮ್ಯಾನೇಜ್‍ಮೆಂಟ್ ಪ್ರೈವೇಟ್ ಲಿಮಿಟೆಡ್ ಎಂಬುದು ಈವೆಂಟ್ ಮೆನೇಜ್‍ಮೆಂಟ್ ಕಂಪನಿಯಾಗಿದ್ದು, ಇದಕ್ಕೂ ಪ್ರಿಂಟಿಂಗ್‍ಗೂ ಏನೂ ಸಂಬಂಧ ಇಲ್ಲ. ಅವರು ಯಾವತ್ತೂ ಮುದ್ರಣದ ಕೆಲಸ ಮಾಡಿಲ್ಲ. ಸಚಿವರಿಗೆ ಬೇಕಾದವರಿಗೆ ಕೊಡಲು ಕ್ರಮ ಕೈಗೊಂಡಿದ್ದಾರೆ. ಇದು ಕಪ್ಪುಪಟ್ಟಿಗೆ ಸೇರಿಸಲಾದ ಕಂಪನಿಯಾಗಿದೆ. ಇದರ ಮೇಲೆ ಸುಮಾರು 20-25 ಪ್ರಕರಣಗಳಿವೆ. ಇಂತಹ ಕಂಪನಿಗೆ ಟೆಂಡರ್ ಕೊಡಲಾಗಿದೆ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ