
ಹಾವೇರಿ (ಡಿ13): ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ಬರೋಬ್ಬರಿ 40 ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬಿನ ಗದ್ದೆಗಳು ಧಗಧಗನೆ ಹೊತ್ತಿ ಉರಿದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಶಾಕಿಂಗ್ ಘಟನೆ ನಡೆದಿದೆ. ಇದರಿಂದಾಗಿ ಕಬ್ಬು ಬೆಳೆದ ಏಳು ಮಂದಿ ಅನ್ನದಾತರು ಕಂಗಾಲಾಗಿದ್ದಾರೆ.
ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದ ಜಮೀನುಗಳಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಇದರ ಪರಿಣಾಮವಾಗಿ ಏಕಾಏಕಿ ಕಬ್ಬಿನ ಗದ್ದೆಗಳಿಗೆ ಬೆಂಕಿ ಹತ್ತಿಕೊಂಡಿದೆ. ಕ್ಷಣ ಮಾತ್ರದಲ್ಲಿ ಬೆಂಕಿಯು ಪಕ್ಕದ ಗದ್ದೆಗಳಿಗೂ ವ್ಯಾಪಿಸಿ ಸುಮಾರು 40 ಎಕರೆ ಪ್ರದೇಶದ ಕಬ್ಬಿನ ಬೆಳೆ ನಾಶವಾಗಿದೆ. ಈ ದುರ್ಘಟನೆಯಲ್ಲಿ ಸತ್ಯನಾರಾಯಣ ರಟ್ಟಿಹಳ್ಳಿ, ಕೃಷ್ಣಪ್ಪ ರಟ್ಟಿಹಳ್ಳಿ, ಚನ್ನಪ್ಪ ಮುದ್ದಿ, ವಿರೂಪಾಕ್ಷಪ್ಪ ಮುದ್ದಿ ಸೇರಿದಂತೆ ಏಳು ಜನ ರೈತರಿಗೆ ಸೇರಿದ ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ಹೋಗಿದೆ. ಅಂದಾಜಿನ ಪ್ರಕಾರ, ಸುಮಾರು 80 ಲಕ್ಷಕ್ಕೂ ಅಧಿಕ ಮೌಲ್ಯದ ಕಬ್ಬು ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ.
ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಗಾಬರಿಗೊಂಡ ರೈತರು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಬೆಂಕಿ ನಿಯಂತ್ರಿಸಲು ಕಷ್ಟಪಟ್ಟರು. ಅಂತಿಮವಾಗಿ ಬೆಂಕಿಯನ್ನು ಹತೋಟಿಗೆ ತರಲಾಯಿತು.
ಈ ಘಟನೆಯ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಿಹಾರಕ್ಕಾಗಿ ರೈತರು ಸರ್ಕಾರದ ಮೊರೆ ಹೋಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ