
ಶಿವಮೊಗ್ಗ : ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಇರಾನ್ ಅಧ್ಯಕ್ಷ ಆಯತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ‘ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಂತ್ರ ಪಠಿಸುವ ಅಮೆರಿಕ, ಮತ್ತೊಂದೆಡೆ ಯುದ್ಧ ಮಾಡುತ್ತದೆ.
ಅಮೆರಿಕ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ. ಕ್ಷಿಪಣಿ ದಾಳಿಯಲ್ಲಿ ಇರಾನ್ ಅಧ್ಯಕ್ಷ ಆಯತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ