ಜೆಡಿಎಸ್‌ನಲ್ಲಿದ್ದಾಗ ಮುಸ್ಲಿಮರ ಓಲೈಕೆ ಮಾಡ್ತಿದ್ದ ಯತ್ನಾಳ, ಬಿಜೆಪಿ ಸೇರುತ್ತಲೇ ಹಿಂದೂ ಹುಲಿ ಆಗಿಬಿಟ್ಟ: ಎಂಬಿ ಪಾಟೀಲ್ 

Published : Dec 10, 2023, 05:34 AM ISTUpdated : Dec 10, 2023, 05:44 AM IST
ಜೆಡಿಎಸ್‌ನಲ್ಲಿದ್ದಾಗ ಮುಸ್ಲಿಮರ ಓಲೈಕೆ ಮಾಡ್ತಿದ್ದ ಯತ್ನಾಳ, ಬಿಜೆಪಿ ಸೇರುತ್ತಲೇ ಹಿಂದೂ ಹುಲಿ ಆಗಿಬಿಟ್ಟ: ಎಂಬಿ ಪಾಟೀಲ್ 

ಸಾರಾಂಶ

ಇಸ್ಲಾಂ ಹಾಗೂ ಧರ್ಮಗುರು ಸೈಯ್ಯದ್ ಮೊಹಮ್ಮದ್ ತನ್ವೀರ್‌ ಪೀರಾ ಹಾಶ್ಮಿ ಅವರು ಐಸಿಸ್‌ ಭಯೋತ್ಪಾದಕರ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ವಿಷಯದ ತನಿಖೆಗೆ ರಾಜ್ಯ ಸರ್ಕಾರದ ಅನುಮತಿ ಬೇಕಿಲ್ಲ. ಯತ್ನಾಳರು ನೇರವಾಗಿ ಅಮಿತ್ ಶಾ ಬಳಿ ಹೋಗಿ ಕೇಂದ್ರದಿಂದಲೇ ತನಿಖೆ ಮಾಡಿಸಲಿ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸವಾಲು ಹಾಕಿದರು.

ವಿಜಯಪುರ (ಡಿ.10): ಇಸ್ಲಾಂ ಹಾಗೂ ಧರ್ಮಗುರು ಸೈಯ್ಯದ್ ಮೊಹಮ್ಮದ್ ತನ್ವೀರ್‌ ಪೀರಾ ಹಾಶ್ಮಿ ಅವರು ಐಸಿಸ್‌ ಭಯೋತ್ಪಾದಕರ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ವಿಷಯದ ತನಿಖೆಗೆ ರಾಜ್ಯ ಸರ್ಕಾರದ ಅನುಮತಿ ಬೇಕಿಲ್ಲ. ಯತ್ನಾಳರು ನೇರವಾಗಿ ಅಮಿತ್ ಶಾ ಬಳಿ ಹೋಗಿ ಕೇಂದ್ರದಿಂದಲೇ ತನಿಖೆ ಮಾಡಿಸಲಿ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸವಾಲು ಹಾಕಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಇಸ್ಲಾಂ ಹಾಗೂ ಧರ್ಮಗುರು ಸೈಯ್ಯದ್ ಮೊಹಮ್ಮದ್ ತನ್ವೀರ್‌ ಪೀರಾ ಹಾಶ್ಮಿ ವಿರೋಧಿ ನಡೆ ಅನುಸರಿಸುತ್ತಾ ಬಂದಿದ್ದಾರೆ. ತಾಕತ್ತಿದ್ದರೆ ಯತ್ನಾಳ ಎನ್ಐಎ ಮೂಲಕ ಈ ಕುರಿತು ತನಿಖೆ ಮಾಡಿಸಲಿ. ಒಂದೊಮ್ಮೆ ತನ್ವೀರ್‌ ಪೀರಾ ವಿರುದ್ಧ ಆರೋಪ ಸಾಬೀತಾಗದಿದ್ದರೆ ಯತ್ನಾಳ ದೇಶ ತೊರೆಯಲಿ ಎಂದು ನಾನೇನು ಹೇಳಲಾರೆ. ಆದರೆ, ಆರೋಪ ಮಾಡಿದ ಅವರು ಆಗ ಏನು ಮಾಡುತ್ತಾರೆ ಎಂದು ಈಗಲೇ ಸ್ಪಷ್ಟವಾಗಿ ಹೇಳಲಿ ಎಂದರು.

 

ಮೌಲ್ವಿ ಹಾಶ್ಮಿ ಜತೆ ನನಗೆ ಬಿಸಿನೆಸ್‌ ಇಲ್ಲ: ಶಾಸಕ ಬಸನಗೌಡ ಯತ್ನಾಳ್‌

ಯತ್ನಾಳ ಮುಸ್ಲಿಮರನ್ನು ದ್ವೇಷ ಮಾಡುತ್ತಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ನಡೆದ ಕಾರ್ಯಕ್ರಮದ ನೆಪ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ, ಧರ್ಮಗುರು ತನ್ವೀರ್‌ ಪೀರಾ ಹಾಶ್ಮಿ ವಿರುದ್ಧ ಐಸಿಸ್ ಸಂಪರ್ಕ ಇದೆ ಎಂದು ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿಗಳ ಜೊತೆಗಿನ ಫೋಟೋ ಹಾಕಿ ವೈರಲ್‌ ಮಾಡಿಸಿದ್ದಾರೆ. ಯತ್ನಾಳ ಅನಗತ್ಯವಾಗಿ ಮತ್ತೊಬ್ಬರ ಚಾರಿತ್ರ್ಯಹರಣದಂಥ ಹೀನಕೃತ್ಯ ಮಾಡಬಾರದು. ಅದು ಅವರಿಗೆ ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಜೆಡಿಎಸ್ ಪಕ್ಷದಲ್ಲಿ ಇದ್ದಾಗ ಮುಸ್ಲಿಮರ ಓಲೈಕೆ ಮಾಡುತ್ತಿದ್ದ ಯತ್ನಾಳ, ಬಿಜೆಪಿ ಸೇರುತ್ತಲೇ ಹಿಂದೂ ಹುಲಿ ಎಂದು ಬಿರುದು ಇರಿಸಿಕೊಂಡು ಓಡಾಡುತ್ತಿದ್ದಾರೆ. ಅವರು ಸಮಾನತೆ ಸಾರಿರುವ ಬಸವನಾಡಿನಲ್ಲಿ ಜನಿಸಿದ್ದಾರೆ ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದರು.

'ನಾವು ಲಿಂಗಾಯತರು ಮಾಂಸ ತಿನ್ನಲ್ಲ' : ಸದನದಲ್ಲಿ ಹೀಗೊಂದು ಸ್ವಾರಸ್ಯಕರ ಚರ್ಚೆ

ನಾನು ಹಿಂದೂ-ಮುಸ್ಲಿಂ ಇಬ್ಬರನ್ನೂ ಗೌರವಿಸುತ್ತೇನೆ. ಸ್ವಾತಂತ್ರ್ಯ ಹೋರಾಟದಲ್ಲಿ ಮುಸ್ಲಿಮರು ದೊಡ್ಡ ಕೊಡುಗೆ ನೀಡಿದ್ದಾರೆ. ಮುಸ್ಲಿಮರು ನಾವು ಸಹೋದರರು ಎಂದು ಸಂವಿಧಾನ ಸಾರಿದೆ. ಬಸವ ತತ್ವ ಕೂಡ ಇದನ್ನೇ ಹೇಳಿದೆ. ಶಾಸಕನಾದವನಿಗೆ ಮುಸ್ಲಿಂ ಶಾಸಕ, ಹಿಂದೂ ಶಾಸಕ ಎನ್ನಲಾಗುವುದಿಲ್ಲ. ಕ್ಷೇತ್ರದ ಎಲ್ಲ ಜನರಿಗೂ ಅವರು ಶಾಸಕರೇ. ಇದನ್ನು ಯತ್ನಾಳ ಮೊದಲು ಅರಿತುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್