ಮಂಡ್ಯದಲ್ಲಿ ಸೆಮಿಕಂಡಕ್ಟರ್ ಕಂಪನಿಗೆ 100 ಎಕರೆ ಜಾಗ; ಕುಮಾರಸ್ವಾಮಿಗೆ ಎಂ.ಬಿ. ಪಾಟೀಲ ಪತ್ರ

Published : Dec 24, 2025, 07:10 PM IST
Mandya Sansung Groups

ಸಾರಾಂಶ

ಅಮೆರಿಕ ಮೂಲದ ಸ್ಯಾನ್ಸನ್ ಗ್ರೂಪ್ ಸೆಮಿಕಂಡಕ್ಟರ್ ಕಂಪನಿಗೆ ಮಂಡ್ಯದಲ್ಲಿ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಈ ಕುರಿತು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು (ಡಿ.24): ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್ ಗೆ ತನ್ನ ಘಟಕ ಸ್ಥಾಪಿಸಲು ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಭೂಮಿ ನೀಡಲು ರಾಜ್ಯ ಸರಕಾರ ಉತ್ಸುಕವಾಗಿದೆ. ಆದರೆ ಈ ಸಂಬಂಧವಾಗಿ ಆ ಕಂಪನಿಯ ಉನ್ನತಾಧಿಕಾರಿಗಳನ್ನು ಸಂಪರ್ಕಿಸಲು ಸಾಕಷ್ಟು ಪ್ರಯತ್ನಿಸಿದರೂ ಅವರು ಸಿಕ್ಕಿಲ್ಲ. ಈ ಯೋಜನೆ ರಾಜ್ಯಕ್ಕೆ ಬಂದು ನೆಲೆಯೂರಬೇಕು ಎನ್ನುವುದು ನಮ್ಮ ಆಸಕ್ತಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಸಂಬಂಧ ಬುಧವಾರ ಮಾಹಿತಿ ನೀಡಿರುವ ಅವರು, 'ಕುಮಾರಸ್ವಾಮಿ ಈ ಬಗ್ಗೆ ಅ.31ರಂದು ನಮಗೆ ಪತ್ರ ಬರೆದಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ನಾವು ನ.24ರಂದು ಪ್ರತ್ಯುತ್ತರ ಬರೆದಿದ್ದೆವು. ಏತನ್ಮಧ್ಯೆ ಪ್ರಸ್ತಾವಿನ ಯೋಜನೆಯ ವಿವರಗಳನ್ನು ತಿಳಿದುಕೊಳ್ಳಲು ಸ್ಯಾನ್ಸನ್ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಮತ್ತು ಭಾರತೀಯ ವ್ಯವಹಾರಗಳ ಮುಖ್ಯಸ್ಥ ಅಭಯ್ ಕೆ.ರೈ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಲಾಗಿದೆ. ಆದರೆ ಅವರ ಕಡೆಯಿಂದ ಇದುವರೆಗೂ ಉತ್ತರ ಬಂದಿಲ್ಲ' ಎಂದಿದ್ದಾರೆ.

100 ಎಕರೆ ಕೊಡಲು ಅಡ್ಡಿಯೇನಿಲ್ಲ

ಮಂಡ್ಯ ಜಿಲ್ಲೆಯಲ್ಲಿ ನೀರು, ವಿದ್ಯುತ್, ಸಂಪರ್ಕ ಸೌಲಭ್ಯವಿರುವ ಕಡೆಯಲ್ಲೇ 100 ಎಕರೆ ಕೊಡಲು ಅಡ್ಡಿಯೇನಿಲ್ಲ. ಕಂಪನಿಯ ಕಡೆಯಿಂದ ಮನವಿ ಬಂದರೆ ಭೂ ಮಂಜೂರಾತಿಯ ಕಾರ್ಯಸಾಧ್ಯತೆ ಜೊತೆಗೆ ಇನ್ನಿತರ ಅಗತ್ಯ ಅನುಮೋದನೆಗಳು ಮತ್ತು ಮೂಲಸೌಕರ್ಯಗಳನ್ನು ಪರಿಗಣಿಸಿ, ತ್ವರಿತವಾಗಿ ಮುಂದಿನ ಹಂತಕ್ಕೆ ಕೊಂಡೊಯ್ಯಲಾಗುವುದು. ಈ ಹೊಣೆಯನ್ನು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಅವರಿಗೆ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹೈಟೆಕ್ ಉದ್ಯಮಗಳನ್ನು ಬೆಳೆಸಲು ರಾಜ್ಯ ಸರಕಾರ ಬದ್ಧವಾಗಿದೆ. ಈ ಉದ್ದೇಶಿತ ಹೂಡಿಕೆ ಯೋಜನೆ ರಾಜ್ಯದ ಕೈತಪ್ಪಬಾರದು ಎನ್ನುವುದು ನಮ್ಮ ಕಳಕಳಿಯಾಗಿದೆ. ಇದರಿಂದ ಬೆಂಗಳೂರಿನ ಹೊರಗಿನ ಭಾಗಗಳಲ್ಲಿ ಉದ್ಯೋಗಸೃಷ್ಟಿ ಮತ್ತು ಉದ್ದಿಮೆಗಳ ಬೆಳವಣಿಗೆಗೂ ಅನುಕೂಲವಾಗಲಿದೆ ಎಂದು ಪಾಟೀಲ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮದ್ಯ ನಿಷೇಧಿಸದಿದ್ದರೆ ಸಿಎಂ ಸಿದ್ದರಾಮಯ್ಯ ನನ್ನ ಪಾಲಿಗೆ ರಾಕ್ಷಸ: ಶಾಸಕ ಶರಣು ಸಲಗರ್!
ಬಳ್ಳಾರಿ: ಮನೆಯಿಂದ 10 ಕಿಲೋಮೀಟರ್‌ ದೂರ ಇರುವಾಗ ಅಪಘಾತ, ಒಂದೇ ಕುಟುಂಬದ ಮೂವರ ಸಾವು!