ವಾಲ್ಮೀಕಿ ನಿಗಮದ ಹಗರಣ: ಎಂಡಿ, ಅಧಿಕಾರಿ ಅರೆಸ್ಟ್‌

By Kannadaprabha NewsFirst Published Jun 2, 2024, 7:08 AM IST
Highlights

ಈ ಅಧಿಕಾರಿಗಳ ಬಂಧನದ ಬೆನ್ನಲ್ಲೇ ನಿಗಮದ ಕಚೇರಿ, ಬಂಧಿತ ಅಧಿಕಾರಿಗಳ ನಿವಾಸಗಳು ಸೇರಿದಂತೆ ಕೆಲವೆಡೆ ಎಸ್‌ಐಟಿ ದಾಳಿ ನಡೆಸಿ ಕೆಲ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದೆ. ಅಂತೆಯೆ ಮತ್ತೊಂದು ತಂಡ ಹೈದರಾಬಾದ್‌ಗೆ ತೆರಳಿದ್ದು, ಅಕ್ರಮ ಹಣ ವರ್ಗಾವಣೆ ಸಂಬಂಧ ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 

ಬೆಂಗಳೂರು(ಜೂ.02): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 94.73 ಕೋಟಿ ರು. ಹಗರಣ ಸಂಬಂಧ ಅಮಾನತಾದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ ಮತ್ತು ಅಮಾನತಾದ ಲೆಕ್ಕಾಧಿಕಾರಿ ಪರಶುರಾಮ್ ಜಿ.ದುಗ್ಗಣ್ಣನವ‌ರ್ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ. 

ಈ ಅಧಿಕಾರಿಗಳ ಬಂಧನದ ಬೆನ್ನಲ್ಲೇ ನಿಗಮದ ಕಚೇರಿ, ಬಂಧಿತ ಅಧಿಕಾರಿಗಳ ನಿವಾಸಗಳು ಸೇರಿದಂತೆ ಕೆಲವೆಡೆ ಎಸ್‌ಐಟಿ ದಾಳಿ ನಡೆಸಿ ಕೆಲ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದೆ. ಅಂತೆಯೆ ಮತ್ತೊಂದು ತಂಡ ಹೈದರಾಬಾದ್‌ಗೆ ತೆರಳಿದ್ದು, ಅಕ್ರಮ ಹಣ ವರ್ಗಾವಣೆ ಸಂಬಂಧ ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ನಿಗಮದ ಖಾತೆಯಿಂದ 94.73 ಕೋಟಿ ರು. ಹಣ ಅಕ್ರಮ ವರ್ಗಾವಣೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ಎಡಿಜಿಪಿ ಮನೀಶ್ ಖರ್ಬಿಕರ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದೆ.  ಇದರ ಬೆನ್ನಲ್ಲೇ ಎಸ್‌ಐಟಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಲೆಕ್ಕಾಧಿಕಾರಿಯನ್ನು ಬಂಧಿಸಿದೆ.

Latest Videos

ವಾಲ್ಮೀಕಿ ನಿಗಮದ ಹಗರಣ: ಸಿಬಿಐನಿಂದಲೂ ತನಿಖೆ ನಿಶ್ಚಿತ?

ಪ್ರಕರಣದ ಹಿನ್ನೆಲೆ: 

ನಿಗಮವು ವಸಂತನಗರದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಹೊಂದಿದ್ದ ಖಾತೆಯನ್ನು 2024ರ ಫೆ.19ರಂದು ಎಂ.ಜಿ.ರಸ್ತೆಯ ಶಾಖೆಗೆ ವರ್ಗಾಯಿಸಲಾಗಿತ್ತು. ಬಳಿಕ ಖಾತೆಗೆ 187.33 ಕೋಟಿ ರು. ಹಣ ಜಮೆಯಾಗಿತ್ತು. ಮೇ 22 ರಂದು ನಿಗಮದ ಅಧಿಕಾರಿಗಳು ಬ್ಯಾಂಕ್‌ಗೆ ತೆರಳಿ ಚೆಕ್ ಬುಕ್, ಪಾಸ್ ಬುಕ್ ಬಗ್ಗೆ ಪ್ರಶ್ನೆ ಮಾಡಿದಾಗ ನಿಗಮದ ವಿಳಾಸಕ್ಕೆ ಕಳುಹಿಸಿರುವುದಾಗಿ ಬ್ಯಾಂಕ್ ಅಧಿಕಾರಿಗಳು ಹೇಳಿದಾರೆ.

ಆದರೆ, ವಾಸ್ತವದಲ್ಲಿ ಯಾವುದೇ ದಾಖಲೆ ಗಳು ನಿಗಮಕ್ಕೆ ಬಂದಿಲ್ಲ. ಈ ವೇಳೆ ಅನು ಮಾನಗೊಂಡು ಬ್ಯಾಂಕ್ ಖಾತೆ ಪರಿಶೀಲಿಸಿ ದಾಗ 94.73 ಕೋಟಿ ರು. ವಿವಿಧ ಕಂಪನಿಗಳ ಖಾತೆಗಳಿಗೆ ವರ್ಗಾವಣೆಯಾಗಿರುವುದು
ಕಂಡು ಬಂದಿತ್ತು. ನಿಗಮದ ಅಧಿಕಾರಿಗಳ ಅನುಮತಿ ಇಲ್ಲದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಹಣವರ್ಗಾವಣೆಯಾಗಿ ರುವುದು ಬೆಳಕಿಗೆ ಬಂದಿತ್ತು. ಅಕ್ರಮ ಹಣ ವರ್ಗಾವಣೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಪಾತ್ರ ಇರುವ ಬಗ್ಗೆ ಅನುಮಾನ ಗೊಂಡು ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರನ್ ಅವರು ಬ್ಯಾಂಕ್‌ನ ಸಿಇಒ ಸೇರಿ ಆರು ಮಂದಿ ವಿರುದ್ಧ ಹೈಗೌಂಡ್ಸ್ ಪೊ ಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿತ್ತು

ಬಂಧಿತರು ಆರು ದಿನ ಎಸ್‌ಐಟಿ ಕಸ್ಟಡಿಗೆ:

ಬಂಧಿತ ಇಬ್ಬರು ಅಧಿಕಾರಿಗಳನ್ನು ಎಸ್‌ಐಟಿ ಹೆಚ್ಚಿನ ವಿಚಾರಣೆಗಾಗಿ 6 ದಿನಗಳ ಕಾಲ ಕಸ್ಟ ಡಿಗೆ ಪಡೆದು ವಿಚಾರಣೆಗೆ ಒಳಪಡಿಸಿದೆ. ಹಗೆ ರಣ ಬೆಳಕಿಗೆ ಬಂದ ಬೆನ್ನಲ್ಲೇ ಸರ್ಕಾರ ಈ ಇಬ್ಬರು ಅಧಿಕಾರಿಗಳನ್ನು ಅಮಾನತು ಗೊಳಿಸಿದೆ.

ನಾಗೇಂದ್ರ ವಿರುದ್ಧದ ಆರೋಪದ ವಾಸ್ತವಾಂಶ ಪರಿಶೀಲನೆ: ಡಿ.ಕೆ. ಶಿವಕುಮಾರ್‌

ವಿಚಾರಣೆಗೆ ಎಸ್‌ಐಟಿ ನೋಟಿಸ್:

ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎಸ್ ಐಟಿ, ಅಕ್ರಮ ಹಣ ವರ್ಗಾವಣೆ ಸಂಬಂಧ ನಿಗಮದ ಅಧಿಕಾರಿಗಳು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳು ಸೇರಿದಂತೆ ಹಲವರಿಗೆ ವಿಚಾರಣೆಗೆ ಹಾಜರಾ ಗುವಂತೆ ನೋಟಿಸ್ ಜಾರಿ ಮಾಡಿದೆ.

ಶೀಘ್ರದಲ್ಲೇ ಸಚಿವರ ವಿಚಾರಣೆ ಸಾಧ್ಯತೆ

ಹಗರಣ ಸಂಬಂಧ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ. ಅಲ್ಲದೆ, ಆತ್ಮಹತ್ಯೆಗೆ ಶರಣಾದ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರು ತಮ್ಮ ಡೆತ್‌ನೋಟ್ ನಲ್ಲಿ ಸಚಿವ ಬಿ.ನಾಗೇಂದ್ರ ಅವರ ಮೌಖಿಕ ಸೂಚನೆ ಮೇರೆಗೆ ನಿಗಮದ ಹಣ ವರ್ಗಾಯಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ ಐಟಿ ಶೀಘ್ರದಲ್ಲೇ ಸಚಿವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

click me!