
ಬೆಂಗಳೂರು: ಸ್ಯಾಂಡಲ್ ವುಡ್, ಬಾಲಿವುಡ್ ಬಳಿಕ ಇದೀಗ ಸ್ವಾಮೀಜಿಯೋರ್ವರ ಮೇಲೆ ಮೀ ಟೂ ಆರೋಪ ಎದುರಾಗಿದೆ.
ನೆಲಮಂಗಲ ತಾಲೂಕಿನ ವನಕಲ್ಲು ಮಠದ ಶ್ರೀ ಬಸವ ರಮಾನಂದ ಸ್ವಾಮೀಜಿ ಮೇಲೆ ಆರೋಪ ಎದುರಾಗಿದ್ದು, ಮಠದಲ್ಲಿ ಆಸರೆ ಕೇಳಿಕೊಂಡು ಬಂದ ಭಕ್ತೆಯೇ ಸ್ವತಃ ಆರೋಪ ಮಾಡಿದ್ದಾರೆ.
ಒಂಟಿಯಾಗಿ ಬರುವಂತೆ ಬಸವರಮಾನಂದ ಸ್ವಾಮೀಜಿ ಹೇಳುತ್ತಿದ್ದರು. ಕೆಲಸ ಕೊಡಿಸುವ ಭರವಸೆಯಿಂದ ಮಠಕ್ಕೆ ಕರೆಯುತ್ತಿದ್ದರು ಎಂದು ಮಹಿಳೆ ಆರೋಪ ಮಾಡಿದ್ದಾರೆ.
ಈ ವಿಷಯವನ್ನು ಹೊರಗೆ ತಿಳಿಸಿದರೆ ನಿನ್ನ ವಿರುದ್ಧ ಅಪಪ್ರಚಾರ ಹಾಗೂ ಕೊಲೆ ಮಾಡುವುದಾಗಿ ಧಮ್ಕಿ ಹಾಕಿದ್ದರು. ಈ ಬಗ್ಗೆ ದೂರು ದಾಖಲಾಗಿದ್ದರೂ ಕೂಡ ಪೊಲೀಸರು ಸ್ವಾಮೀಜಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಸಂಬಂಧ 7 ತಿಂಗಳ ಹಿಂದೆ ಡಾಬಸ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಹಿಳೆ ಆರೋಪ ಮಾಡಿದ್ದಾರೆ.
ಇನ್ನು ಈ ಸಂಬಂಧ ಬಿ ರಿಪೋರ್ಟ್ ಹಾಕಲು ಮುಂದಾದ ಡಾಬಸ್ ಪೇಟೆ ಪೊಲೀಸರ ವಿರುದ್ಧವೂ ಕೂಡ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ನ್ಯಾಯ ಸಿಗದ ಹಿನ್ನೆಲೆಯಲ್ಲಿ ವಿಡಿಯೋ ಮಾಡಿ ಮಹಿಳೆ ತನ್ನ ನೋವನ್ನು ಹೇಳಿಕೊಂಡಿದ್ದಾರೆ. ಅಲ್ಲದೇ ಇಲ್ಲಿನ ಪಿಎಸ್ ಐ ಶಂಕರ್ ನಾಯ್ಕ್ ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ