
ಮಂಗಳೂರು (ಜು.31) : ನಗರದ ಕದ್ರಿ ಶಿವಭಾಗ್‌ನಲ್ಲಿರುವ ಅಪಾರ್ಚ್‌ಮೆಂಟ್‌ನ 5ನೇ ಮಹಡಿಯಿಂದ ಜಾರಿ ಬಿದ್ದು ಮೆಡಿಕಲ್ ಕಾಲೇಜು ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವಿಗೀಡಾದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಮೂಲತಃ ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್‌ನಲ್ಲಿ ವಾಸವಾಗಿದ್ದ ಸಮಯ್ (21) ಮೃತಪಟ್ಟವಿದ್ಯಾರ್ಥಿ.
ತಮ್ಮ ಫ್ಲ್ಯಾಟ್‌ನ ಬಾಲ್ಕನಿಯಲ್ಲಿ ಬೆಳಗ್ಗಿನ ಸಮಯದಲ್ಲಿ ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಕೆಳಗೆ ಹೋಗಿದ್ದರು. ಅವರಿಗೆ ಸಹಾಯ ಮಾಡಲು ಬಕೆಟ್ ತೆಗೆದುಕೊಂಡು ಬರಲು ಸಮಯ್ ಅವರು ಬಾತ್‌ರೂಂಗೆ ಹೋಗಿದ್ದಾರೆ. ಅದಾಗಲೇ ಅವರ ತಾಯಿ ನೆಲಮಹಡಿ ತಲುಪಿದ್ದರು. ಸಮಯ್ ಅವರು ಫ್ಲ್ಯಾಟ್‌ನ ಬಾಲ್ಕನಿಗೆ ಬಂದು ಕಾರು ತೊಳೆಯಲು ಬಕೆಟ್ ಕೊಂಡು ಹೋಗಿದ್ದೀರಾ ಎಂದು ತಾಯಿ ಬಳಿ ಕೇಳಲು ಬಗ್ಗಿದರು. ಆದರೆ ಮಳೆ ನೀರಿನ ಹನಿಯಿಂದ ಜಾರಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.
ಅರಶಿನಗುಂಡಿ ಜಲಪಾತ ದುರಂತ, ಕೊನೆಗೂ 1 ವಾರದ ಬಳಿಕ ಶರತ್ ಮೃತದೇಹ ಪತ್ತೆ
ಸಮಯ್ ಅವರ ತಂದೆ ಸಿವಿಲ್ ಎಂಜಿನಿಯರ್ ಆಗಿದ್ದು, ತಾಯಿ ಗೃಹಿಣಿ. ಈ ದಂಪತಿಯ ಇಬ್ಬರು ಗಂಡು ಮಕ್ಕಳಲ್ಲಿ ಸಮಯ್ ಹಿರಿಯವರು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿಗೆ ಇನ್‌ಸ್ಟಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ
ಉಡುಪಿ: ಇಲ್ಲಿನ ಯುವತಿಯೊಬ್ಬಳಿಗೆ ಇನ್‌ಸ್ಟಗ್ರಾಮ್(instagram) ಜಾಲತಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಅಶ್ಲೀಲ ಸಂದೇಶ ಕಳಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯು ಜಿಗ್‌್ರ ಕೋಬ್ರಾ ಎಂಬ ಹೆಸರಿನಲ್ಲಿ ಖಾತೆ ಹೊಂದಿದ್ದು, ನೊಂದ ಯುವತಿಯ ಇನ್ಸಾ$್ಟಗ್ರಾಮ್ ಖಾತೆಯನ್ನು ಫಾಲೋ ಮಾಡುತ್ತಿದ್ದ. ಶುಕ್ರವಾರ ಆಕೆಯನ್ನು ಭಯಪಡಿಸುವ ರೀತಿಯಲ್ಲಿ ಕೆಟ್ಟಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ. ಇದು ಆಕೆಗೆ ಪರಿಚಯದವರಿಂದ ತಿಳಿದು ಬಂದಿದ್ದು, ಇದರಿಂದ ತನ್ನ ಮಾನಸಿಕ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾನೆ ಎಂದು ಆಕೆ ದೂರು ನೀಡಿದ್ದು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕಾರಿಗೆ ಟ್ರಕ್ ಡಿಕ್ಕಿ ಪೊಲೀಸ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ