
ವಿಧಾನಸಭೆ(ಜು.15): ರಾಜ್ಯದಲ್ಲಿನ ಅಕ್ರಮ ಮರಳು ಗಣಿಗಾರಿಕೆ ತಡೆ ಹಾಗೂ ಮರಳು ಕೊರತೆ ಸಮಸ್ಯೆ ನಿವಾರಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಶಾಸಕರು, ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಅಲ್ಲಮಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಗಣಿ ಮತ್ತು ಭೂ ವಿಜ್ಞಾನ ಸಚಿವರ ಪರವಾಗಿ ಉತ್ತರಿಸಿದ ಕೃಷ್ಣ ಬೈರೇಗೌಡ, ಮರಳು ಗಣಿಗಾರಿಕೆಯನ್ನು ಸ್ಥಗಿತಗೊಳಿಸಿದರೆ ಮರಳಿನ ದರ ವಿಪರೀತ ಏರಿಕೆಯಾಗುತ್ತದೆ. ಅದೇ ಕಾನೂನಾತ್ಮಕವಾಗಿ ಮಾಡಲು ಹೋದರೆ ಅಕ್ರಮ ತಲೆದೋರುತ್ತದೆ. ಹೀಗಾಗಿ ಮರಳಿನ ಕೊರತೆ ಉಂಟಾಗದಂತೆ, ಅಕ್ರಮ ನಡೆಯದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವ ಹೊಣೆಯನ್ನು ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆ ತಡೆಗೆ ಕಠಿಣ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
ಅದಕ್ಕಾಗಿ ಎಲ್ಲ ಜಿಲ್ಲೆಗಳಲ್ಲೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಅದರಲ್ಲಿ ಜಿಲ್ಲಾಧಿಕಾರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಉಪಸ್ಥಿತರಿರುವಂತೆ ಮಾಡಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ