
ಬೆಂಗಳೂರು (ಸೆ.8): ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ದೊರೆಯುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಯೋಜನಾ ವೆಚ್ಚ ಶೇ.86ರಷ್ಟು ಹೆಚ್ಚಳವಾಗಿದೆ. ಈ ಹಿಂದೆ ಸಲ್ಲಿಸಿದ್ದ ಡಿಪಿಆರ್‌ನಲ್ಲಿ 9 ಸಾವಿರ ಕೋಟಿ ರು. ಯೋಜನಾ ವೆಚ್ಚ ನಿಗದಿ ಮಾಡಲಾಗಿತ್ತು. ಇದೀಗ ಸಲ್ಲಿಸಲಾಗಿರುವ ಪರಿಷ್ಕೃತ ಡಿಪಿಆರ್‌ನಲ್ಲಿ ಯೋಜನಾ ವೆಚ್ಚ 16,745 ಕೋಟಿ ರು.ಗೆ ಹೆಚ್ಚಳವಾಗಿದೆ.
ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಹಾಗೂ ವಿದ್ಯುತ್ ಉತ್ಪಾದನೆ ದೃಷ್ಟಿಯಿಂದ ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಅದಕ್ಕಾಗಿ ಈಗಾಗಲೇ ಎರಡು ಬಾರಿ ಡಿಪಿಆರ್ ಸಲ್ಲಿಕೆಯಾಗಿದೆ. ಈ ಹಿಂದೆ ಡಿಪಿಆರ್ ಸಲ್ಲಿಸಿದಾಗ ಕೇಂದ್ರ ಸರ್ಕಾರ ಕೆಲ ಸ್ಪಷ್ಟನೆಗಳೊಂದಿಗೆ ಪರಿಷ್ಕೃತ ಡಿಪಿಆರ್ ಸಲ್ಲಿಸುವಂತೆ ಸೂಚಿಸಿತ್ತು.
ಅದರಂತೆ ರಾಜ್ಯ ಸರ್ಕಾರ ಕಳೆದ ತಿಂಗಳು ಪರಿಷ್ಕೃತ ಡಿಪಿಆರ್ ಸಲ್ಲಿಸಿದೆ. ಡಿಪಿಆರ್‌ನಲ್ಲಿ ಬದಲಾವಣೆ ಹಾಗೂ ಕೇಂದ್ರದಿಂದ ಅನುಮತಿ ದೊರೆಯುವರಲ್ಲಾಗುತ್ತಿರುವ ವಿಳಂಬದಿಂದಾಗಿ ಯೋಜನಾ ವೆಚ್ಚದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಮೊದಲು ಸಲ್ಲಿಕೆಯಾಗಿದ್ದ ಯೋಜನೆಯ ಡಿಪಿಆರ್‌ನಲ್ಲಿ 9 ಸಾವಿರ ಕೋಟಿ ರು. ಯೋಜನಾ ವೆಚ್ಚ ನಿಗದಿ ಮಾಡಲಾಗಿತ್ತು. ಇದೀಗ ಸಲ್ಲಿಸಲಾಗಿರುವ ಪರಿಷ್ಕೃತ ಡಿಪಿಆರ್‌ನಲ್ಲಿ ಯೋಜನಾ ವೆಚ್ಚ 16,745 ಕೋಟಿ ರು.ಗೆ ಹೆಚ್ಚಳವಾಗಿದೆ. ಇದು ರಾಜ್ಯದ ಆರ್ಥಿಕ ಹೊರೆಯನ್ನು ಮತ್ತಷ್ಟು ಹೆಚ್ಚಿಸುವಂತಾಗಿದೆ. ಹೀಗಾಗಿ ಮೇಕೆದಾಟು ಯೋಜನೆ ಜಾರಿಗಾಗಿ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಪಡೆಯಲು ಯೋಜಿಸಲಾಗುತ್ತಿದೆ. ಅದರಂತೆ ಕಳೆದ ವಾರ ಕೇಂದ್ರ ಸಚಿವರನ್ನು ಭೇಟಿಯಾಗಿದ್ದ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಅವರು ಯೋಜನೆಯ ವಿವರಣೆ ನೀಡಿದ್ದಲ್ಲದೆ, ಆರ್ಥಿಕ ನೆರವು ನೀಡುವಂತೆಯೂ ಕೋರಿದ್ದಾರೆ.
ಮೇಕೆದಾಟು ಯೋಜನೆಯಿಂದ 67 ಟಿಎಂಸಿ ನೀರು ಸಂಗ್ರಹಿಸಿ ಅದರಲ್ಲಿ 4.67 ಟಿಎಂಸಿ ನೀರು ಬೆಂಗಳೂರು ನಗರಕ್ಕೆ ಪೂರೈಸಲಾಗುತ್ತದೆ. ಅದರ ಜತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ