ಮೇಕೆದಾಟು ಯೋಜನೆ: ಎನ್‌ಜಿಟಿಯಿಂದ ಕರ್ನಾಟಕಕ್ಕೆ ಬಿಗ್ ರಿಲೀಫ್

By Suvarna NewsFirst Published Jun 18, 2021, 7:34 PM IST
Highlights

* ಹಸಿರು ನ್ಯಾಯ ಮಂಡಳಿಯಿಂದ ಕರ್ನಾಟಕಕ್ಕೆ ಬಿಗ್ ರಿಲೀಫ್ 
* ಕರ್ನಾಟಕ ವಿರುದ್ಧದ ಅರ್ಜಿಯನ್ನು ಇತ್ಯರ್ಥ
* ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯಲ್ಲಿ ಇದ್ದ ವಿವಾದಕ್ಕೆ ತೆರೆ

ಬೆಂಗಳೂರು, (ಜೂನ್.18): ರಾಜ್ಯದ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(NGT)ಯಿಂದ ಬಿಗ್ ರಿಲೀಫ್ ಸಿಕ್ಕಿದೆ.

ಅನುಮತಿ ಇಲ್ಲದೇ ಕಾಮಗಾರಿ ಶುರು ಮಾಡಲಾಗಿದೆ ಎಂದು ಪತ್ರಿಕಾ ವರದಿ ಆಧರಿಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿತ್ತು. ಇದನ್ನ ಅವಲೋಕಿಸಿದ ಎನ್‌ಜಿಟಿ, ಕರ್ನಾಟಕ ವಿರುದ್ಧದ ಅರ್ಜಿಯನ್ನು ಇತ್ಯರ್ಥಗೊಳಿಸಿದೆ. ಇದರಿಂದ ಕರ್ನಾಟಕಕ್ಕೆ ಮೇಕೆದಾಟು ಯೋಜನೆಯಲ್ಲಿ ಮಹತ್ವದ ಮುನ್ನಡೆಯಾಗಿದೆ.

"

ಮೇಕೆದಾಟು ಅಣೆಕಟ್ಟು: ಜಂಟಿ ಸಮಿತಿ ರಚಿಸಿದ ಹಸಿರು ನ್ಯಾಯ ಪೀಠ

ಮೇಕೆದಾಟು ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುತ್ತಿರುವ ಮಾಧ್ಯಮಗಳ ವರದಿ ಪ್ರಕಟ ಮಾಡಿತ್ತು. ಈ ಯೋಜನೆ ಅನುಷ್ಠಾನಗೊಳಿಸಲು ಕರ್ನಾಟಕವು ಅಪಾರ ಪ್ರಮಾಣದ ಸಸ್ಯ ಸಂಪತ್ತನ್ನು ನಾಶ ಮಾಡುತ್ತದೆ ಎಂದು ಅದರಲ್ಲಿ ಉಲ್ಲೇಖವಾಗಿತ್ತು. ಇದನ್ನು ನೋಡಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಸ್ವಯಂ ಪ್ರೇರಿತವಾಗಿ (ಸುವೋ ಮೋಟೋ) ದೂರು ದಾಖಲಿಸಿಕೊಂಡಿತ್ತು.

 ಯೋಜನೆ ಸ್ಥಳದಲ್ಲಿ ಕಾಮಗಾರಿ ಆರಂಭಿಸಿಲ್ಲ. ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶವಿಲ್ಲ ಎಂದು ಕರ್ನಾಟಕದ ಪರವಾಗಿ ವಾದ ಮಂಡಿಸಲಾಯಿತು. ವಾದ ಅಲಿಸಿದ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ನೇತೃತ್ವದ ಪ್ರಧಾನ ಪೀಠ, ಕರ್ನಾಟಕ ವಿರುದ್ಧದ ಅರ್ಜಿಯನ್ನು ಇತ್ಯಾರ್ಥ ಮಾಡಿದೆ. 

ಮೇಕೆದಾಟು;  ಕಾನೂನು ಹೋರಾಟ ಮತ್ತು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ
ಇನ್ನು ಈ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿದ್ದು,  ಕರ್ನಾಟಕಕ್ಕೆ ಮೇಕೆದಾಟು ಯೋಜನೆಯಲ್ಲಿ ಮಹತ್ವದ ಮುನ್ನಡೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕಕ್ಕೆ ಮೇಕೆದಾಟು ಯೋಜನೆಯಲ್ಲಿ ಮಹತ್ವದ ಮುನ್ನಡೆ!

ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ರಾಷ್ಟ್ರೀಯ ಹಸಿರು ಪೀಠದ ನಿರ್ಧಾರವನ್ನು ಸ್ವಾಗತಿಸುತ್ತೇನೆ.

ಈ ಯೋಜನೆಯ ಅನುಷ್ಠಾನದ ಮೂಲಕ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳ ಜನತೆಗೆ ಕುಡಿಯುವ ನೀರು ಪೂರೈಸಲು ನೆರವಾಗಲಿದೆ.

— Dr. Ashwathnarayan C. N. (@drashwathcn)

ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ರಾಷ್ಟ್ರೀಯ ಹಸಿರು ಪೀಠದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಈ ಯೋಜನೆಯ ಅನುಷ್ಠಾನದ ಮೂಲಕ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳ ಜನತೆಗೆ ಕುಡಿಯುವ ನೀರು ಪೂರೈಸಲು ನೆರವಾಗಲಿದೆ ಎಂದಿದ್ದಾರೆ.

click me!