ಕಾವೇರಿ ವಿವಾದಕ್ಕೆ ಮೇಕೆದಾಟು ಪರಿಹಾರ; ಆ ಡ್ಯಾಂ ಇದ್ದಿದ್ರೆ ಜಲ ವಿವಾದನೇ ಇರ್ತಿರಲಿಲ್ಲ: ಡಿಕೆಶಿ

By Kannadaprabha News  |  First Published Aug 25, 2023, 10:54 PM IST

ಮೇಕೆದಾಟು ಅಣೆಕಟ್ಟು ನಿರ್ಮಾಣವಾಗಿದ್ದರೆ ಕಾವೇರಿ ನೀರಿನ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ. ಕಳೆದ ವರ್ಷ 400 ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರದ ಪಾಲಾಗಿದೆ. ಸ್ವಲ್ಪ ಪ್ರಮಾಣದ ನೀರು ಶೇಖರಿಸಿದ್ದರೂ ಸಮಸ್ಯೆಯಾಗುತ್ತಿರಲಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್ ಗಮನ ಹರಿಸಬೇಕು ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.


\ಬೆಂಗಳೂರು (ಆ.25) :  ‘ಪ್ರಸ್ತುತ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಸೃಷ್ಟಿಯಾಗಿರುವ ಕಾವೇರಿ ನೀರು ಹಂಚಿಕೆ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಮೇಕೆದಾಟು ಅಣೆಕಟ್ಟು ನಿರ್ಮಾಣವಾದರೆ ಇಂತಹ ಸಮಸ್ಯೆಯೇ ಬರುವುದಿಲ್ಲ. ಈ ಬಗ್ಗೆ ನಾವು ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದ್ದೇವೆ. ಈ ಬಗ್ಗೆ ನ್ಯಾಯಾಲಯ ಗಮನ ಹರಿಸಬೇಕು’ ಎಂದು ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಅಣೆಕಟ್ಟು ನಿರ್ಮಾಣವಾಗಿದ್ದರೆ ಕಾವೇರಿ ನೀರಿನ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ. ಕಳೆದ ವರ್ಷ 400 ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರದ ಪಾಲಾಗಿದೆ. ಸ್ವಲ್ಪ ಪ್ರಮಾಣದ ನೀರು ಶೇಖರಿಸಿದ್ದರೂ ಸಮಸ್ಯೆಯಾಗುತ್ತಿರಲಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್ ಗಮನ ಹರಿಸಬೇಕು ಎಂದು ಹೇಳಿದರು.

Tap to resize

Latest Videos

ಎಚ್‌ಡಿಕೆ ನೈಸ್ ದಾಖಲೆ ಬಿಡುಗಡೆ ಮಾಡಲಿ, ಅವರನ್ನು ಯಾರೂ ತಡೆದಿಲ್ಲ: ಡಿಕೆಶಿ

ನ್ಯಾಯಾಲಯವೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚನೆ ಮಾಡಿದೆ. ಇದು ತಾಂತ್ರಿಕ ಸಮಿತಿಯಾಗಿದ್ದು, ಸದ್ಯ ತಾಂತ್ರಿಕ ಅಂಶಗಳ ಬಗ್ಗೆ ಗಮನ ಹರಿಸಬೇಕು. ರಾಜ್ಯದಲ್ಲಿ ತೀವ್ರ ಬರ ಎದುರಾಗಿ ನೀರಿಲ್ಲದಂತಾಗಿರುವಾಗ ಅಷ್ಟುಪ್ರಮಾಣದ ನೀರನ್ನು ತಮಿಳುನಾಡಿಗೆ ಬಿಡಲು ಆಗುವುದಿಲ್ಲ. ಹೀಗಾಗಿಯೇ ಸುಪ್ರೀಂ ಕೋರ್ಚ್‌ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದರು.

ಇಂತಹ ಪರಿಸ್ಥಿತಿಯಲ್ಲಿ ಪ್ರಮುಖ ಪರಿಹಾರ ಎಂದರೆ ಅದು ಮೇಕೆದಾಟು ಯೋಜನೆ ಮಾತ್ರ. ಮೇಕೆದಾಟು ಅಣೆಕಟ್ಟು ನೀರನ್ನು ನಾವು ನೀರಾವರಿಗೆ ಬಳಸಲು ಸಾಧ್ಯವಿಲ್ಲ. ಕೇವಲ ಕುಡಿಯುವ ನೀರಿನ ಉಪಯೋಗಕ್ಕೆ ಬಳಸಬಹುದು. ಮೇಕೆದಾಟು ಯೋಜನೆ ಮಾಡಿದರೆ ಇಂತಹ ಸಂಕಷ್ಟದ ಸಮಯದಲ್ಲಿ ಹೆಚ್ಚು ಸಹಾಯಕ್ಕೆ ಬರುತ್ತದೆ. ನಾವು ಸುಪ್ರೀಂ ಕೋರ್ಚ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದೇವೆ. ಸುಪ್ರೀಂ ಕೋರ್ಚ್‌ ಈ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.

ಕೋಳಿ ಕೇಳಿ ಮಸಾಲೆ ಅರೆಯಲ್ಲ: ಸಿ.ಟಿ.ರವಿಗೆ ಡಿಕೆಶಿ ಟಾಂಗ್‌

ತಮಿಳುನಾಡು ಎಚ್ಚರಿಕೆ ವಹಿಸಬಹುದಿತ್ತು:

ನಮ್ಮ ಸರ್ಕಾರ ನ್ಯಾಯಾಲಯಕ್ಕೆ ಎಲ್ಲಾ ಮಾಹಿತಿ ನೀಡಿದ್ದು, ರಾಜ್ಯದ ರೈತರ ಹಿತ ಕಾಯಲು ಬದ್ಧವಾಗಿದೆ. ತಮಿಳುನಾಡು ತನ್ನ ಪಾಲಿನ ನೀರನ್ನು ಯಾವ ಉದ್ದೇಶಕ್ಕಾದರೂ ಬಳಸಬಹುದು. ಅದನ್ನು ನಾವು ಪ್ರಶ್ನಿಸಲು ಸಾಧ್ಯವಿಲ್ಲ. ಆದರೆ ತಮಿಳುನಾಡು ಸಂಕಷ್ಟದ ಸಮಯದಲ್ಲಿ ನೀರನ್ನು ಎಚ್ಚರಿಕೆಯಿಂದ ಬಳಸಬಹುದಾಗಿತ್ತು. ನಾವು ನಮ್ಮ ರೈತರಿಗೆ ಬಿತ್ತನೆ ಮಾಡದಂತೆ ಸಲಹೆ ನೀಡಿರುವಂತೆ ಅವರು ಸಹ ಅವರ ರೈತರಿಗೆ ಸಲಹೆ ನೀಡಬಹುದಿತ್ತು ಎಂದು ಹೇಳಿದರು.

click me!