* ಮೇಕೆದಾಟು ಯೋಜನೆಗೆ ಮತ್ತೊಂದು ವಿಘ್ನ
* ಯೋಜನೆಗೆ ತಡೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದ ತಮಿಳುನಾಡು
* ಕರ್ನಾಟಕ ಸಲ್ಲಿಸಿರುವ ಡಿಪಿಆರ್ ತಿರಸ್ಕರಿಸುವಂತೆ ಅರ್ಜಿ ಯಲ್ಲಿ ಮನವಿ
ನವದೆಹಲಿ, (ಆ.27): ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕಕ್ಕೆ ಮತ್ತೊಂದು ವಿಘ್ನ ಎದುರಾಗಿದೆ. ಮೇಕೆದಾಟು ಯೋಜನೆಗೆ ತಡೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ಹೌದು..ಮೇಕೆದಾಟು ಡ್ಯಾಂ ನಿರ್ಮಿಸುವುದನ್ನು ವಿರೋಧಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಈಗಾಗಲೇ ಕರ್ನಾಟಕ ಜಲ ಸಂಪನ್ಮೂಲ ಆಯೋಗಕ್ಕೆ ಸಲ್ಲಿಸಿರುವ ವರದಿಯನ್ನು ರದ್ದುಪಡಿಸಲು ಕೋರಿದೆ.
undefined
ಕರ್ನಾಟಕದ ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ವಪಕ್ಷ ಸಭೆಯಲ್ಲಿ ಮಹತ್ವದ 3 ನಿರ್ಧಾರ!
ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಾಯಕರ ನಡುವೆ ಕೆಲ ದಿನಗಳಿಂದ ಮಾತಿನ ಸಮರ ನಡೆಯುತ್ತಿದೆ.
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ನಿನ್ನೆ (ಆ.26) ಅಷ್ಟೇ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಿ ಬಂದಿದ್ದರು.
ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಶೀಘ್ರದಲ್ಲೇ ಡಿಪಿಆರ್ಗೆ ಮಾನ್ಯತೆ ಸಿಗಲಿದೆ ಎಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಜತೆಗೆ ರಾಜ್ಯ ಸರ್ಕಾರ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಿಯೇ ಸಿದ್ಧ ಎಂದು ಅವರು ಭರವಸೆಯನ್ನು ಸಹ ನೀಡಿದ್ದರು.
ಇದರ ಬೆನ್ನಲ್ಲೇ ಇದೀಗ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೊಗಿದ್ದು, ಕೋರ್ಟ್ ಏನು ಹೇಳುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.