Mekedatu Padayatra: ಮೇಕೆದಾಟು ಹೋರಾಟ ಅದು ರಾಜಕೀಯ ಪಾದಯಾತ್ರೆ: ಸಿಎಂ ಬೊಮ್ಮಾಯಿ

By Suvarna News  |  First Published Feb 27, 2022, 7:25 AM IST

*  ಉಕ್ರೇನ್‌ನಲ್ಲಿ ಪೂರ್ವ ಭಾಗದಲ್ಲಿ ಭಾರತೀಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ
*  ಯುದ್ಧದ ತೀವ್ರತೆ ಕಡಿಮೆ ಆದ ತಕ್ಷಣ ವಿದ್ಯಾರ್ಥಿಗಳು ಕರೆತರುವ ಕೆಲಸ ನಡೆಯಲಿದೆ 
*  ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಮಾತನಾಡಲಿರುವ ಪ್ರಧಾನಿ ಮೋದಿ


ಹುಬ್ಬಳ್ಳಿ(ಫೆ.27): ಮಾರ್ಚ್ 4 ರಿಂದ ರಾಜ್ಯ ಬಜೆಟ್ ಅಧಿವೇಶನ(Budget Session) ನಡೆಯಲಿದೆ. ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಗುತ್ತೆ ಅಂತ ಈಗಲೇ ಹೇಳಲು ಬರಲ್ಲ. ಬಜೆಟ್‌ನಲ್ಲಿ ಏನಿದೆ ಅನ್ನೋದನ್ನ ಈಗ ಹೇಳಿದ್ರೆ ತಪ್ಪಾಗುತ್ತೆ. ಅದರ ಬಗ್ಗೆ ಮಾರ್ಚ್ 4 ರಂದೇ ನೋಡಿ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದ್ದಾರೆ.

ಎಸ್‌ಡಿಪಿಐ(SDPI), ಪಿಎಎಫ್‌ಐ(PFI) ಬ್ಯಾನ್ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಎಲ್ಲ ಘಟನೆಗಳ ಬಗ್ಗೆ ಹಿರಿಯ ಪೊಲೀಸ್(Police) ಅಧಿಕಾರಿಗಳು ಬಹಳ ಕೂಲಂಕುಷವಾಗಿ ಪರಿಶೀಲನೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ನಡೆದ ಹಲವಾರು ಘಟನೆಗಳು ಸೇರಿ ವಿಶೇಷವಾಗಿ ಕರಾವಳಿ ಪ್ರದೇಶದಲ್ಲಿ ಶಾಂತಿ ಕದಡುವುದು. ಮತೀಯ ದ್ವೇಷ ಬಿತ್ತುವಂತದ್ದನ್ನ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ಸಂಗ್ರಹ ಮಾಡುತ್ತಾರೆ. ಅದರ ಆಧಾರದ ಮೇಲೆ  ಬರುವಂತಹ ದಿನದಲ್ಲಿ ಸರ್ಕಾರ ಕ್ರಮಕೈಗೊಳ್ಳಲಿದೆ ಅಂತ ಸ್ಪಷ್ಟಪಡಿಸಿದ್ದಾರೆ. 

Tap to resize

Latest Videos

Bengaluru Press Club Awards: ಪತ್ರಕರ್ತ-ರಾಜಕಾರಣಿ ನಂಟು ಅವಿನಾಭಾವ: ಸಿಎಂ ಬೊಮ್ಮಾಯಿ

ಕಾಂಗ್ರೆಸ್ ಮೇಕೆದಾಟು(Congress Mekedatu) ಹೋರಾಟ ಅದು ರಾಜಕೀಯ ಪಾದಯಾತ್ರೆಯಾಗಿದೆ. ಅವರು ಮೊದಲು ಮಾಡಿದ್ದು ಅದನ್ನೇ, ಈಗ ಮಾಡೋದು ಅದನ್ನೇ. ಅವರ ಕಾಲದಲ್ಲಿ ಡಿಪಿಆರ್(DPR) ಸಿದ್ಧಪಡಿಸಲು 5 ವರ್ಷ ತೆಗೆದುಕೊಂಡಿದ್ದರು. ಕುಮಾರಸ್ವಾಮಿ(HD Kumaraswamy) ಬಂದಮೇಲೆ ಡಿಪಿಆರ್ ಸಿದ್ಧವಾಯ್ತು. ಹೀಗಾಗಿ ಯಾವ ನೈತಿಕ ಆಧಾರದ ಮೇಲೆ ಹೀಗೆ ಹೇಳ್ತಾರೆ ಅಂತ ಸಿಎಂ ಪ್ರಶ್ನಿಸಿದ್ದಾರೆ. 

ಉಕ್ರೇನ್‌ನಲ್ಲಿ(Ukraine) ರಾಜ್ಯದ(Karnataka) ವಿದ್ಯಾರ್ಥಿಗಳು ಸಿಲುಕಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಕೇಂದ್ರ ಸರ್ಕಾರ ಈಗಾಗಲೇ ಸೂಕ್ತ ಕ್ರಮ ಕೈಗೊಂಡಿದೆ. ಉಕ್ರೇನ್‌ನಲ್ಲಿ ಪೂರ್ವ ಭಾಗದಲ್ಲಿ ಭಾರತೀಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ.  ಯುದ್ಧದ ತೀವ್ರತೆ ಕಡಿಮೆ ಆದ ತಕ್ಷಣ ವಿದ್ಯಾರ್ಥಿಗಳು ಕರೆತರುವ ಕೆಲಸ ನಡೆಯಲಿದೆ ರಷ್ಯಾ ಅಧ್ಯಕ್ಷ ಪುಟಿನ್(Vladimir Putin) ಜೊತೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಮಾತನಾಡಲಿದ್ದಾರೆ. ಕೇಂದ್ರ ವಿದೇಶಾಂಗ ಸಚಿವರು ಸಹ ನಿರಂತರ ಸಂಪರ್ಕದಲ್ಲಿದ್ದಾರೆ ಅಂತ ತಿಳಿಸಿದ್ದಾರೆ. 

ಅಲ್ಪಸಂಖ್ಯಾತರ ಅಭಿವೃದ್ಧಿಗೆ ವಿಶೇಷ ಕಾರ‍್ಯಕ್ರಮ

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು (Special Program) ಏರ್ಪಡಿಸುವ ಮೂಲಕ ಸಾಮಾಜಿಕ ನ್ಯಾಯದ ಜತೆ ಸಾಮಾಜಿಕ ಅಭಿವೃದ್ಧಿಯ ಗುರಿ ಸಾಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.  

ಉಕ್ರೇನ್‌ನಲ್ಲಿ ಸಿಲುಕಿದ ಕನ್ನಡಿಗರು: ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಬೊಮ್ಮಾಯಿ

ಫೆ.25 ರಂದು ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್‌ ಮೂಲಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಅಬುಲ್‌ ಕಲಾಂ ಅಜಾದ್‌ ಭವನವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ್ದ ಅವರು, ಅಲ್ಪಸಂಖ್ಯಾತರ ಕೆಲ ಸಮುದಾಯಗಳು ಕಡು ಬಡತನದಲ್ಲಿದ್ದು, ಅವರ ಅಭಿವೃದ್ಧಿಗೆ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದರು. 

ಬದಲಾವಣೆಯ ಯುಗದಲ್ಲಿ ಬದಲಾವಣೆಯ ವೇಗವನ್ನು ಅಳವಡಿಸಿಕೊಂಡು ಅಲ್ಪಸಂಖ್ಯಾತರು ಗುರಿಯನ್ನು ಸಾಧಿಸಬೇಕು ಮತ್ತು ಸಮಾಜದ ಮುಖ್ಯವಾಹಿನಿಗೆ ಬರಬೇಕು. 21ನೇ ಶತಮಾನ ಜ್ಞಾನದ ಶತಮಾನವಾಗಿದ್ದು, ಜಗತ್ತು ಬದಲಾವಣೆಯ ರೀತಿಯನ್ನು ಗ್ರಹಿಸಿ, ಮಕ್ಕಳನ್ನು ಸಿದ್ಧಪಡಿಸಬೇಕು. ಈ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರ ಮತ್ತು ಸಮಾಜ ಮಕ್ಕಳಿಗೆ ಸೂಕ್ತ ಅವಕಾಶಗಳನ್ನು ಮತ್ತು ಸವಲತ್ತುಗಳನ್ನು ಕಲ್ಪಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಸಹಕರಿಸಬೇಕು ಎಂದರು. ಮಕ್ಕಳ ವಿದ್ಯಾರ್ಜನೆ ವಿಚಾರದಲ್ಲಿ ಬಹಳ ಮುಕ್ತ ವಾತಾವರಣ ನಿರ್ಮಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಅವಕಾಶ ಕಲ್ಪಿಸುತ್ತದೆ. ಪ್ರಧಾನಿಯವರ ನೇತೃತ್ವದಲ್ಲಿ ನವಭಾರತದ ನಿರ್ಮಾಣಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬಹಳಷ್ಟುಅಧ್ಯಯನ ಮಾಡಿ ಜಾರಿಗೆ ತರಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಲಾಭವನ್ನು ಅಲ್ಪಸಂಖ್ಯಾತರು ಪಡೆಯಬೇಕು ಎಂದು ಹೇಳಿದ್ದರು. 
 

click me!