ಮಾರ್ಚ್‌ನಲ್ಲಿ ಬೆಂಗಳೂರಿನಿಂದ ತಿಪಟೂರಿಗೆ ಮೆಮೊ ರೈಲು: ಕೇಂದ್ರ ಸಚಿವ ವಿ.ಸೋಮಣ್ಣ

Published : Jan 06, 2025, 07:41 AM IST
ಮಾರ್ಚ್‌ನಲ್ಲಿ ಬೆಂಗಳೂರಿನಿಂದ ತಿಪಟೂರಿಗೆ ಮೆಮೊ ರೈಲು: ಕೇಂದ್ರ ಸಚಿವ ವಿ.ಸೋಮಣ್ಣ

ಸಾರಾಂಶ

ಇನ್ನು ಮೂರು ನಾಲ್ಕು ತಿಂಗಳಲ್ಲಿ ಬೆಂಗಳೂರಿನಿಂದ ತಿಪಟೂರಿಗೆ ಮತ್ತೊಂದು ಮೆಮೊ ರೈಲನ್ನು ಓಡಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸೋಮಣ್ಣ ತಿಳಿಸಿದರು. 

ತಿಪಟೂರು (ಜ.06): ಇನ್ನು ಮೂರು ನಾಲ್ಕು ತಿಂಗಳಲ್ಲಿ ಬೆಂಗಳೂರಿನಿಂದ ತಿಪಟೂರಿಗೆ ಮತ್ತೊಂದು ಮೆಮೊ ರೈಲನ್ನು ಓಡಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸೋಮಣ್ಣ ತಿಳಿಸಿದರು. ತಾಲೂಕಿನ ಅರಳಗುಪ್ಪೆಯಲ್ಲಿ ಯಶವಂತಪುರ ಚಿಕ್ಕಮಗಳೂರು ರೈಲು ಹೆಚ್ಚುವರಿ ನಿಲುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಬೆಂಗಳೂರು ತುಮಕೂರಿಗೆ ಮೆಮೊ ರೈಲನ್ನು ಬಿಟ್ಟಿರುವುದರಿಂದ ಪ್ರತಿದಿನ ಸಾವಿರಾರು ಪ್ರಯಾಣಿಕರಿಗೆ ಅನುಕೂಲವಾಗಿದೆ. ಕೇವಲ 20ರು. ಕೊಟ್ಟರೆ ತುಮಕೂರು ಬೆಂಗಳೂರಿಗೆ ಪ್ರಯಾಣಿಸಬಹುದು. 

ಅದೇ ರೀತಿ ಬೆಂಗಳೂರಿನಿಂದ ತಿಪಟೂರಿಗೂ ಒಂದು ವಿಶೇಷ ರೈಲು ಓಡಿಸಲು ಜನರು ಬೇಡಿಕೆ ಇಟ್ಟಿದ್ದಾರೆ. ಅದನ್ನು ಬರುವ ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಜಾರಿಗೊಳಿಸಲಾಗುವುದು ಎಂದರು. ತುಮಕೂರಿನಲ್ಲಿ ವಂದೇ ಭಾರತ್ ರೈಲು ನಿಲುಗಡೆ ಕೊಟ್ಟಿದ್ದೇವೆ. ತಿಪಟೂರಿನಲ್ಲಿ ಎರಡು ಜನಶತಾಬ್ದಿ ರೈಲುಗಳಿಗೆ ನಿಲುಗಡೆ ಕೊಟ್ಟಿದ್ದೇವೆ. ಸಂಪಿಗೆ ರೋಡ್‌ನಲ್ಲಿ ಹಾಗೂ ಇಂದು ಅರಳಗುಪ್ಪೆಯಲ್ಲಿ ಚಿಕ್ಕಮಗಳೂರು ಯಶವಂತಪುರ ರೈಲು ನಿಲುಗಡೆ ಮಾಡುತ್ತಿದ್ದೇವೆ. ಆರು ತಿಂಗಳು ಇಲ್ಲಿಂದ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯನ್ನು ನೋಡಿಕೊಂಡು ಇನ್ನೂ ಹೆಚ್ಚುವರಿ ರೈಲುಗಳ ನಿಲುಗಡೆ ಮಾಡಬೇಕಾ ಎಂದು ನಿರ್ಧರಿಸುತ್ತೇವೆ ಎಂದರು. 

ಹೆಜ್ಜಾಲ-ಚಾಮರಾಜನಗರ ರೈಲು ಮಾರ್ಗ ಆರಂಭಿಸಲು ಸಂಸದ ಸುನೀಲ್‌ ಬೋಸ್‌ ಮನವಿ

ಕಳೆದ ಆರು ತಿಂಗಳಲ್ಲಿ ತುಮಕೂರು ಜಿಲ್ಲೆಯಲ್ಲಿ 5700 ಕೋಟಿ ರೂಪಾಯಿಗಳ ಕಾಮಗಾರಿಯನ್ನು ಮಂಜೂರು ಮಾಡಿಸಿ ಟೆಂಡರ್ ಕರೆಯಲಾಗಿದೆ. ತುಮಕೂರು ರಾಯದುರ್ಗ ಸುಮಾರು ವರ್ಷದಿಂದ ನೆನೆಗುದಿಗೆ ಬಿದ್ದಿತ್ತು. ತುಮಕೂರು ದಾವಣಗೆರೆ ಆಗುವುದೇ ಇಲ್ಲ ಎಂದು ತಿಳಿಸಿದ್ದರು. ಆದರೆ ಈ ಎರಡೂ ಮಾರ್ಗದ ಕೆಲಸವನ್ನು ಆರಂಭಿಸಿ 2027ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕರೆಸಿ ಲೋಕಾರ್ಪಣೆ ಮಾಡಲಿದ್ದೇನೆ ಎಂದು ತಿಳಿಸಿದರು. ತುಮಕೂರು ಶಾಸಕ ಜ್ಯೋತಿ ಗಣೇಶ್, ಮಾಜಿ ಸಚಿವ ಬಿ.ಸಿ.ನಾಗೇಶ್, ಜೆಡಿಎಸ್ ಮುಖಂಡ ಶಾಂತಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ, ಉಪವಿಭಾಗಾಧಿಕಾರಿ ಸಪ್ತಶ್ರೀ, ತಹಸೀಲ್ದಾರ್ ಪವನ್‌ಕುಮಾರ್, ರೈಲ್ವೆ ಅಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು.

ಅಭಿವೃದ್ಧಿಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶವಿಲ್ಲ: ಸಂಸತ್ ಚುನಾವಣೆಯಲ್ಲಿ ನನ್ನ ವಿರುದ್ದದ ಅಪಪ್ರಚಾರಕ್ಕೆ ಕಿವಿ ಕೊಡದೆ ಪಕ್ಷ, ಜಾತಿ ನೋಡದೆ ಎಲ್ಲರೂ ಮತ ಹಾಕಿದ್ದೀರಿ. ನಾನೂ ಕೂಡ ಜಾತಿ ಪಕ್ಷ ನೋಡದೆ ಜಿಲ್ಲೆಯ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದ್ದೇನೆ. ದೇಶದಲ್ಲೇ ತುಮಕೂರು ಜಿಲ್ಲೆಯನ್ನು ಮಾದರಿ ಮಾಡುವ ಗುರಿ ಇಟ್ಟುಕೊಂಡಿದ್ದೇನೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು. ಹುಳಿಯಾರು ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಕುಂದುಕೊರತೆ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ನೆಲಮಂಗಲ-ತುಮಕೂರಿನವರೆಗೆ 6 ಪಥದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ಸೋಮಣ್ಣ

ಇನ್ನೆರಡು ವರ್ಷದಲ್ಲಿ ಜಿಲ್ಲೆಯಲ್ಲಿ ಎಲ್ಲೂ ರೈಲ್ವೆ ಗೇಟ್ ಇಲ್ಲದಂತೆ ಮಾಡಿ ರೈಲು ಮತ್ತು ಇತರೆ ವಾಹನಗಳು ತಡೆರಹಿತವಾಗಿ ಓಡಾಡುವಂತೆ ಮಾಡತ್ತೇನೆ. ನೆನೆಗುದಿಗೆ ಬಿದ್ದಿರುವ ಜಿಲ್ಲೆಯಲ್ಲಿ ಹಾದು ಹೋಗುವ ರೈಲ್ವೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿಸಿದ್ದೇನೆ. ನಿಂತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಆರಂಭಿಸಿದ್ದೇನೆ. ಗುಬ್ಬಿಯಿಂದ ತುಮಕೂರು ರಸ್ತೆಯನ್ನು ಬೆಂಗಳೂರಿನ ಎಂಜಿ ರಸ್ತೆ ರೀತಿ ಮಾಡುತ್ತೇನೆ. ಶಿರಾದಿಂದ ಕೆ.ಬಿ.ಕ್ರಾಸ್ ವರೆವಿಗೆ ಬುಕ್ಕಾಪಟ್ಟಣ ಮಾರ್ಗವಾಗಿ ರಸ್ತೆ ಅಭಿವೃದ್ಧಿಗೆ ಕೈ ಹಾಕಿದ್ದೇನೆ. ಹಾಸನದಿಂದ ಹಿರಿಯೂರಿಗೆ ಕೇವಲ 1 ಗಂಟೆಯಲ್ಲಿ ಪ್ರಯಾಣಿಸುವ ಎಕ್ಸ್ ಪ್ರೆಸ್‌ ಹೈವೆಗೆ ಹಣ ಬಿಡುಗಡೆ ಮಾಡಿಸಿದ್ದೇನೆ. ಪೂಣೆಯಿಂದ ತುಮಕೂರು ಜಿಲ್ಲೆ ಮಾರ್ಗವಾಗಿ ಬೆಂಗಳೂರಿಗೆ 55 ಸಾವಿರ ಕೋಟಿ ರು. ವೆಚ್ಚದ ಹೈವೆ ಕಾಮಗಾರಿ ಮಂಜೂರು ಮಾಡಿಸಿದ್ದೇನೆ ಎಂದು ವಿವರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಾಭರಣ ಸಿಕ್ಕಿದ ಚಾಲುಕ್ಯರ ತಾಣ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಪನನ ಕಾರ್ಯ, ಇಡೀ ಗ್ರಾಮ ಸ್ಥಳಾಂತರ?
ರಾಸುಗಳಿಗೆ ಅಲಂಕಾರ ಮಾಡಿ ಕಿಚ್ಚು ಹಾಯಿಸಿದ ರೈತರು; ನಾಡಿನಾದ್ಯಂತ ಮಕರ ಸಂಕ್ರಾಂತಿಯ ಸಂಭ್ರಮ