ಮಡಿಕೇರಿ: ಮಾನಸಿಕ ಖಿನ್ನತೆ: ಮನೆಯವರು ಮಲಗಿದ್ದಾಗ ಗುಂಡು ಹಾರಿಸಿಕೊಂಡು ಶಿಕ್ಷಕಿ ಸಾವು

Published : Apr 26, 2026, 12:55 PM IST
teacher suicide

ಸಾರಾಂಶ

ಕೊಡಗಿನ ಚೇರಂಬಾಣೆಯಲ್ಲಿ, ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದ 51 ವರ್ಷದ ಶಿಕ್ಷಕಿ ರೋಹಿಣಿ ಎ ಯು ಅವರು ತಮ್ಮ ಮನೆಯಲ್ಲಿದ್ದ ಕೋವಿಯಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ.

ಮಾನಸಿಕ ಖಿನ್ನತೆಗೆ ಶಿಕ್ಷಕಿ ಬಲಿ

ಕೊಡಗು: ಮಾನಸಿಕ ಒತ್ತಡದಿಂದ ಖಿನ್ನತೆಗೊಳಗಾದ ಶಿಕ್ಷಕಿಯೊಬ್ಬರು ಕೋವಿಯಿಂದ ಶೂಟ್ ಮಾಡಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಕೊಡಗಿನ ಚೇರಂಬಾಣೆಯಲ್ಲಿ ನಡೆದಿದೆ. ಮೃತ ಶಿಕ್ಷಕಿಯನ್ನು 51 ವರ್ಷದ ರೋಹಿಣಿ ಎ ಯು ಎಂದು ಗುರುತಿಸಲಾಗಿದೆ. ಮಾನಸಿಕ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದ ಶಿಕ್ಷಕಿ ಚೇರಂಬಾಣೆಯಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಮುಂಜಾನೆ 5 ಗಂಟೆ ವೇಳೆಗೆ ಅವರು ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಅವರು ಸಾವಿಗೆ ಶರಣಾಗಿದ್ದಾರೆ. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಡಗು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಮೆಟ್ರೋ ನಿಲ್ದಾಣದಲ್ಲಿ ದುರ್ವಾಸನೆ: ಲಾಕ್ ಆಗಿದ್ದ ಮಹಿಳಾ ಶೌಚಾಲಯದ ಬಾಗಿಲು ಒಡೆದ ಪೊಲೀಸರಿಗೆ ಶಾಕ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೈವದ ಭಂಡಾರ ಸಾಗುವ ವೇಳೆ ಕಾಲುಸಂಕ ಕುಸಿದು 8 ಜನರಿಗೆ ಗಂಭೀರ ಗಾಯ
ಮಳೆಗಾಲಕ್ಕೂ ಮುನ್ನ ತುಂಗಭದ್ರಾ ಜಲಾಶಯ ಸೇಫ್; ಎಲ್ಲಾ 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ