ಬಿಜೆಪಿಯ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಖಚಿತತೆ ಕುರಿತು ಸಣ್ಣ ನೀರಾವರಿ ಮತ್ತು ತಂತ್ರ ಜ್ಞಾನ ಇಲಾಖೆ ಸಚಿವ ಭೋಸರಾಜ್ ಇದೀಗ ಸ್ಪಷ್ಟನೆ ನೀಡಿದ್ದಾರೆ.
ಮಡಿಕೇರಿ (ಅ.16): ಬಿಜೆಪಿಯ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಖಚಿತತೆ ಕುರಿತು ಸಣ್ಣ ನೀರಾವರಿ ಮತ್ತು ತಂತ್ರ ಜ್ಞಾನ ಇಲಾಖೆ ಸಚಿವ ಭೋಸರಾಜ್ ಇದೀಗ ಸ್ಪಷ್ಟನೆ ನೀಡಿದ್ದಾರೆ.
ತಲಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಚಾರ್ಯ ಅಷ್ಟೇ ಅಲ್ಲ ಬೇರೆಯವರೂ ಭೇಟಿಯಾಗಿದ್ದಾರೆ.ಮುಂದೆ ಇನ್ನಷ್ಟು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ಆದರೆ ಎಷ್ಟು ಜನ ಸೇರ್ಪಡೆಯಾಗುತ್ತಾರೆ ಅಂತ ಈಗಲೇ ಹೇಳಲಾಗದು. ಯಾರೆಲ್ಲ ಬರುತ್ತಾರೆ ಎಂದು ಹೇಳಲು ಮುಖ್ಯಮಂತ್ರಿ ಹಾಗೂ ನಮ್ಮ ಪಕ್ಷದ ಅಧ್ಯಕ್ಷರು ಇದ್ದಾರೆ ಎಂದಷ್ಟೇ ಹೇಳಿದರು.
ಕೆ.ಎಸ್.ಭಗವಾನ್ ಹೇಳಿಕೆಗೆ ಸರ್ಕಾರದ ಕುಮ್ಮಕ್ಕು ಇದೆ ಎಂಬ ಆರಗ ಜ್ಞಾನೇಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಯಾರೂ ಮಾತನಾಡಬಾರದು. ಆದರೆ ಕಾಂಗ್ರೆಸ್ ಯಾವತ್ತೂ ಜಾತಿ ಜಾತಿ ನಡುವೆ ವೈಷಮ್ಯ ಬೆಳೆಸಿಲ್ಲ. ಹಿಂದಿನಿಂದಲೂ ಕಾಂಗ್ರೆಸ್ ಎಲ್ಲಾ ಜಾತಿ ಧರ್ಮದವರನ್ನು ಒಂದೇ ರೀತಿ ಕಂಡಿದೆ ಎಂದರು.
ದಸರಾ ಕವಿಗೋಷ್ಠಿ ಪಟ್ಟಿಯಿಂದ ಪ್ರೊ. ಭಗವಾನ್‌ಗೆ ಕೊಕ್: ರಾಜೇಂದ್ರರಿಂದ ಚಾಲನೆ
ಕಾಂಗ್ರೆಸ್ ಸೇರ್ಪಡೆ ವಿಚಾರವು ನನ್ನೊಂದಿಗೆ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟನೆ
ಹೊನ್ನಾಳಿ: ಮಾಜಿ ಶಾಸಕರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದೇನೆ, ನಾವಿಬ್ಬರೂ ಅನ್ಯೋನ್ಯವಾಗಿದ್ದೇವೆ, ನಮ್ಮಿಬ್ಬರ ಸಂಬಂಧ ಚೆನ್ನಾಗಿದೆ ಎನ್ನುವ ಮಾತುಗಳು ನಮ್ಮ ಕಾರ್ಯಕರ್ತರಿಂದ ಹಿಡಿದು ಕ್ಷೇತ್ರದ ಜನರ ಬಾಯಲ್ಲಿ ಕೇಳಿ ಬರುತ್ತಿವೆ. ಇದು ಸುಳ್ಳು, ನಾನು ರೇಣುಕಾಚಾರ್ಯರೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ಶಾಸಕ ಡಿ.ಜಿ. ಶಾಂತನಗೌಡ ಪ್ರತಿಕ್ರಿಯಿಸಿದ್ದಾರೆ.
ಭಾನುವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಲವು ದಿನಗಳಿಂದ ಕ್ಷೇತ್ರದ ಜನತೆ ಈ ಆರೋಪಗಳನ್ನು ಮಾಡುತ್ತಿದ್ದು ಇದರಲ್ಲಿ ಹುರುಳಿಲ್ಲ. ಅದೇ ರೀತಿ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ವಿಚಾರ ಕೂಡಾ ನನ್ನೊಂದಿಗೆ ಚರ್ಚೆ ಮಾಡಿಲ್ಲ. ನಮ್ಮ ಕಾರ್ಯಕರ್ತರು ಪಕ್ಷಕ್ಕೆ ಅವರ ಅವಶ್ಯಕತೆ ಇಲ್ಲ ಎಂದು ಹೇಳುತ್ತಿದ್ದಾರೆ. ಕಾರ್ಯಕರ್ತರ ಅಭಿಪ್ರಾಯವೇ ನನ್ನ ಅಭಿಪ್ರಾಯ ಎಂದು ಹೇಳಿದರು.
ಬಿಜೆಪಿಗೆ ಸಮರ್ಥ ನಾಯಕತ್ವ ಇಲ್ಲ: ರೇಣು ಮತ್ತೆ ರೆಬೆಲ್
ಚುನಾವಣಾ ಪೂರ್ವದಲ್ಲಿ ರೇಣುಕಾಚಾರ್ಯ ಹಗರಣ ತನಿಖೆ ನಡೆಸುವ ಕುರಿತು ಹೇಳಿದ್ದರ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಾಸಕರು, ನಾನು ಶಾಸಕನಾದ ತಕ್ಷಣವೇ ನಮ್ಮ ಸರ್ಕಾರಕ್ಕೆ ಅವರ ಹಗರಣಗಳ ಕುರಿತು ತನಿಖೆ ಮಾಡುವಂತೆ ಮನವಿ ಮಾಡಿದ್ದೇನೆ. ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸಿರುವ ಕೊಳವೆಬಾವಿ ವಿಚಾರದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ನಮ್ಮ ಸರ್ಕಾರ ಅದರ ಬಗ್ಗೆ ತನಿಖೆ ಕೈಗೊಂಡಿದ್ದು, ಅದು ಜಿ.ಪಂ. ಕಚೇರಿಗೆ ವಿಚಾರಣೆಗಾಗಿ ಬಂದಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ಸ್‌ರೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
ಚುನಾವಣಾ ಪೂರ್ವದಲ್ಲಿ ರೇಣುಕಾಚಾರ್ಯ ನಮ್ಮ ಬಗ್ಗೆ ಸಾಕಷ್ಟು ಅಪಪ್ರಚಾರ ಮಾಡಿದ್ದಾರೆ. ಅದಕ್ಕೆ ನಾವೂ ಪ್ರತ್ಯಾರೋಪ ಮಾಡಿದ್ದೇವೆ, ಇದೆಲ್ಲ ಕ್ಷೇತ್ರದ ಜನತೆಗೆ ಗೊತ್ತಿದೆ. ಹೀಗಾಗಿ ಅವರೊಂದಿಗೆ ಹೊಂದಾಣಿಕೆಯಾಗುವ ಪ್ರಶ್ನೆಯೇ ಬರುವುದಿಲ್ಲ.ಡಿ.ಜಿ. ಶಾಂತನಗೌಡ, ಶಾಸಕ