
ಕಲಬುರಗಿ (ಸೆ.12): ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 8.17 ಗಂಟೆ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯಲ್ಲಿ ದಾಖಲಾಗಿದೆ.
ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು, ಭೂಕಂಪನ ಘಟನೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ ಸಂಪರ್ಕದಲ್ಲಿದ್ದೇನೆಂದು ಹೇಳಿದ್ದಾರೆ.
ಭೂಕಂಪನವು ಸಣ್ಣ ಪ್ರಮಾಣದ್ದಾಗಿದ್ದು, ಸಾರ್ವಜನಿಕರು ಹಾಗೂ ಚಿಂಚನಸೂರು ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯ ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಸಚಿವ ಖರ್ಗೆ ಅವರು ವಿನಂತಿಸಿದ್ದಾರೆ.
'ಭೂಮಿಯು ಸ್ವಲ್ಪ ನಡುಗಿದಂತೆ ಅನುಭವವಾಯ್ತು. ಆದರೆ ಯಾವುದೇ ಅನಾಹುತವಾಗಿಲ್ಲ ಎಂದು ಚಿಂಚನಸೂರು ಗ್ರಾಮಸ್ಥರು ಪ್ರತಿಕ್ರಿಯಿಸಿದ್ದಾರೆ. ಇದೇ ರೀತಿ, ಸುತ್ತಲಿನ ಗ್ರಾಮಗಳಲ್ಲೂ ಈ ರೀತಿಯ ಅನುಭವಗಳಾಗಿವೆ.
ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 8.17 ಗಂಟೆ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯಲ್ಲಿ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ