ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿಮಾಲ್ಟ್: ಸಚಿವ ಮಧು ಬಂಗಾರಪ್ಪ

By Govindaraj SFirst Published Feb 8, 2024, 7:23 AM IST
Highlights

ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಚಿಕ್ಕಿ ನೀಡಲಾಗುತ್ತಿದೆ. ಆರು ದಿನ ಕ್ಷೀರ ಭಾಗ್ಯ ಹಾಲು ನೀಡಲು ಕ್ರಮ ವಹಿಸಲಾಗಿದೆ. ಈಗ ಮೂರು ದಿನ ಹಾಲಿಗೆ ರಾಗಿಮಾಲ್ಟ್ ಮಿಕ್ಸ್ ಮಾಡಿ ನೀಡಲು ಕ್ರಮ ವಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 

ಮೈಸೂರು (ಫೆ.08): ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಚಿಕ್ಕಿ ನೀಡಲಾಗುತ್ತಿದೆ. ಆರು ದಿನ ಕ್ಷೀರ ಭಾಗ್ಯ ಹಾಲು ನೀಡಲು ಕ್ರಮ ವಹಿಸಲಾಗಿದೆ. ಈಗ ಮೂರು ದಿನ ಹಾಲಿಗೆ ರಾಗಿಮಾಲ್ಟ್ ಮಿಕ್ಸ್ ಮಾಡಿ ನೀಡಲು ಕ್ರಮ ವಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮಕ್ಕಳಿಗೆ ರಾಗಿ ಮಾಲ್ಟ್ ಮಿಕ್ಸ್ ನೀಡುವ ಸಂಬಂಧ ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ)ಯಿಂದ ಪರೀಕ್ಷೆ ಮಾಡಿಸಲಾಗಿದ್ದು, ಮಕ್ಕಳಿಗೆ ನೀಡಬಹುದೆಂಬ ವರದಿ ಬಂದಿದೆ. ಹೀಗಾಗಿ, ಶೀಘ್ರದಲ್ಲೇ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲಾಗುವುದು ಎಂದರು.

ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ನೀರನ್ನು ನವೆಂಬರ್‌ನಿಂದ ಪೂರೈಸಲಾಗುತ್ತಿದೆ. ಇದರಿಂದ ಶಾಲೆಗಳಲ್ಲಿ ಮುಕ್ತವಾಗಿ ಎಲ್ಲಾ ವ್ಯವಸ್ಥೆ ಬಳಸಿಕೊಳ್ಳಬಹುದು. ಎಷ್ಟೋ ಶಾಲೆಗಳಿಗೆ ವಿದ್ಯುತ್ ಬಿಲ್ ಕಟ್ಟಲು ಸಾಧ್ಯವಾಗುತ್ತಿಲ್ಲ. ಉಚಿತವಾಗಿ ವಿದ್ಯುತ್ ಹಾಗೂ ನೀರು ನೀಡಿದ ಮೇಲೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅನುಕೂಲವಾಗಿದೆ. ಎಷ್ಟೋ ಶಾಲೆಗಳು ವಿದ್ಯುತ್ ಬಿಲ್‌ಗೆ ಹೆದರಿ ಕಂಪ್ಯೂಟರ್ ಬಳಸುತ್ತಿಲ್ಲ. ಆದರೆ, ಈಗ ಕಂಪ್ಯೂಟರ್ ಬಳಕೆ ಹೆಚ್ಚಾಗಿದೆ ಎಂದು ಅವರು ತಿಳಿಸಿದರು.ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರುತ್ತೇವೆ. ಒಮ್ಮೆ ಫೇಲಾದ ನಂತರ ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಪಾಸಾಗುವವರಿಗೆ ಮಾರ್ಕ್ಸ್ ಕಾರ್ಡ್ ನೀಡುವಾಗ ಸಪ್ಲಿಮೆಂಟರಿ ಎಂದು ನಮೂದಿಸುವುದಿಲ್ಲ. ಮಕ್ಕಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲಾಗುತ್ತದೆ. ಸರ್ಕಾರಿ ಶಾಲೆಗಳನ್ನು ಉನ್ನತೀಕರಣ ಮಾಡಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ಮಾಡಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

Latest Videos

500 ಶಾಲೆಗಳು ಮೇಲ್ದರ್ಜೆಗೆ: ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗೆ ಹೆಚ್ಚಿನ ಬೇಡಿಕೆ ಇದೆ. ಈಗಾಗಲೇ 300 ಶಾಲೆಗಳಿದ್ದು, ಮುಂದಿನ ವರ್ಷ ಸಿಎಸ್ಆರ್ ಅನುದಾನದಲ್ಲಿ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗಿದೆ. ಹಾಗೆಯೇ, ರಾಜ್ಯದಲ್ಲಿ 6 ಸಾವಿರ ಗ್ರಾಪಂಗಳಿದ್ದು, ಮುಂದಿನ 3 ವರ್ಷಗಳಲ್ಲಿ ಎರಡು ಗ್ರಾಪಂಗಳಿಗೆ ಒಂದರಂತೆ ಒಟ್ಟು 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ಯೋಜಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಮಕ್ಕಳಲ್ಲಿ ಕೋಮುವಾದಿ ವಿಷ ತುಂಬುವ ಚಾಳಿ ಬಿಜೆಪಿಯದ್ದು: ಸಚಿವ ಮಧು ಬಂಗಾರಪ್ಪ

ರಾಜ್ಯದಲ್ಲಿ 53 ಸಾವಿರ ಶಿಕ್ಷಕರ ಕೊರತೆ ಇದೆ. ಹೀಗಾಗಿ, 43 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಪಾಠ ಮಾಡಿಸಲಾಗುತ್ತಿದೆ. ಇತ್ತೀಚೆಗೆ 12500 ಶಿಕ್ಷಕರನ್ನು ನೇಮಿಸಲಾಗಿದ್ದು, ಅವರು ಪಾಠ ಮಾಡುತ್ತಿದ್ದಾರೆ. ಇನ್ನೂ 20 ಸಾವಿರ ಶಿಕ್ಷಕರ ನೇಮಕಾತಿಗಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು 10 ಸಾವಿರ ಶಿಕ್ಷಕರ ನೇಮಕಾತಿಗೆ ಅವಕಾಶ ನೀಡುವ ನಿರೀಕ್ಷೆ ಇದೆ.
- ಮಧು ಬಂಗಾರಪ್ಪ, ಶಿಕ್ಷಣ ಸಚಿವರು

click me!