ಸಾರಿಗೆ ನೌಕರರಿಗೆ ಸಂತಸದ ಸುದ್ದಿ ನೀಡಿದ ಸಚಿವ ಶ್ರೀರಾಮುಲು

By Kannadaprabha News  |  First Published Sep 13, 2021, 12:50 PM IST

*   ಎರಡು ಸಾವಿರಕ್ಕೂ ಅಧಿಕ ನೌಕರರು ಅಮಾನತು
*   ಕೋರ್ಟ್‌ ಮೆಟ್ಟಿಲೇರಿದ ಕೆಲವು ನೌಕರರು 
*   ಸಭೆಯಲ್ಲಿ ನೌಕರರ ಸಮಸ್ಯೆಗಳ ಬಗ್ಗೆ ಚರ್ಚೆ 


ಬೆಂಗಳೂರು(ಸೆ.13): ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡು ಅಮಾನತು, ವಜಾ ಹಾಗೂ ವರ್ಗಾವಣೆ ಒಳಗಾಗಿದ್ದ ನೌಕರರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇಂದು ಅಧಿಕಾರಿಗಳ ಸಭೆ ಕರೆದಿರುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಸಾರಿಗೆ ಮುಷ್ಕರದ ವೇಳೆ ನಾಲ್ಕು ಸಾರಿಗೆ ನಿಗಮಗಳ ಪೈಕಿ ಸುಮಾರು ಎರಡು ಸಾವಿರಕ್ಕೂ ಅಧಿಕ ನೌಕರರನ್ನು ಅಮಾನತು ಮಾಡಲಾಗಿದೆ. ಹೀಗಾಗಿ ಕೆಲವರು ಕೋರ್ಟ್‌ ಮೆಟ್ಟಿಲೇರಿದ್ದಾರೆ ಎಂದು ಹೇಳಿದ್ದಾರೆ.

Tap to resize

Latest Videos

ಅತ್ಯಾಚಾರ ಆರೋಪ: ಕೆಎಸ್‌ಆರ್‌ಟಿಸಿ ಮೆಕ್ಯಾನಿಕಲ್‌ ಅಮಾನತು

ಈ ಎಲ್ಲ ವಿಚಾರಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ಸಭೆ ಕರೆಯಲಾಗಿದೆ ಅಂತ ಸಚಿವ ಶ್ರೀರಾಮುಲು ಅವರು ತಿಳಿಸಿದ್ದಾರೆ.   
 

click me!