
ಕೆಆರ್ ಪೇಟೆ (ಫೆ.10): ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸಾಕಷ್ಟು ತೆರಿಗೆ ಹೋಗುತ್ತದೆ. ಆದರೆ ಅನುದಾನ ನೀಡುವಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಬರಪರಿಹಾರಕ್ಕೆ ಒಂದು ರೂಪಾಯಿ ಹಣ ಬಿಡುಗಡೆ ಮಾಡಿಲ್ಲಿ ಶೀಘ್ರ ಬಿಡುಗಡೆ ಮಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಕೇಂದ್ರ ಸರ್ಕಾರವೇನು ಅಮೆರಿಕದಿಂದ ಹಣ ತರುವುದಿಲ್ಲ ಎಂದು ಸಚಿವ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಇಂದು ಕೆಆರ್ ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಸಚಿವರು, ಅನುದಾನ ತಾರತಮ್ಯ ವಿರೋಧಿಸಿ ನಡೆದ ಪ್ರತಿಭಟನೆಗೆ ಸಂಸದರಿಗೆ ಸಿಎಂ ಸಿದ್ದರಾಮಯ್ಯನವರು ಪತ್ರ ಬರೆದು ಆಹ್ವಾನಿಸಿದ್ರು. ಆದರೆ ಪ್ರತಿಭಟನೆಗೆ ಬೆಂಬಲಿಸಿ ಯಾರೂ ಬರಲಿಲ್ಲ. ಕಾಂಗ್ರೆಸ್ ಮಾತ್ರ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ರಾಷ್ಟ್ರರಾಜಧಾನಿಯಲ್ಲಿ ಧ್ವನಿಯೆತ್ತಿದೆ ಎಂದರು.
ಕೇಂದ್ರಕ್ಕೆ ಟ್ಯಾಕ್ಸ್ ಕಟ್ಟುವಲ್ಲಿ ಮಹಾರಾಷ್ಟ್ರ ಬಿಟ್ಟರೆ ಅತಿ ಹೆಚ್ಚು ತೆರಿಗೆ ಕೊಡುತ್ತಿರುವುದು ಕರ್ನಾಟಕ ಮಾತ್ರ. ಅತಿ ಕಡಿಮೆ ತೆರಿಗೆ ಕೊಡುವ ಉತ್ತರ ಪ್ರದೇಶಕ್ಕೆ ಹೆಚ್ಚು ಅನುದಾನ ಕೊಡುವ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾತ್ರ ಕಡಿಮೆ ಕೊಡ್ತಾರೆ. ಬರಗಾಲದಲ್ಲಿ 18000 ಕೋಟಿ ಎನ್‌ಡಿಆರ್‌ಎಫ್ ಫಂಡ್ ಕೇಳಿದ್ದೆವು. ಆದರೆ ಆ ಬಗ್ಗೆ ಇನ್ನೂ ಒಂದು ಸಭೆ ಕೂಡ ಮಾಡಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲ ಯೋಜನೆಗಳನ್ನು ಜಾರಿ ಮಾಡುವುದರಲ್ಲಿ ಕಾಂಗ್ರೆಸ್ ನಂ.1. ಹಿಂದಿನ ಸರ್ಕಾರಗಳು ತಮ್ಮ ಶಾಸಕರಿಗೆ ಬಿಟ್ಟು ಮತ್ಯಾರಿಗೂ ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. ನಮ್ಮ ಸರ್ಕಾರದಲ್ಲಿ ಎಲ್ಲಾ ಶಾಸಕರಿಗೂ ಸಮಾನ ಅನುದಾನ ಸಿಗುವಂತೆ ಮಾಡಿದ್ದೇವೆ. ಚುನಾವಣೆ ಬಂದಾಗ ಚುನಾವಣೆ ಮಾಡ್ತೀವಿ. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ ಎಂದರು.
ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಹೊರತು ಬಿಜೆಪಿ, ಈಶ್ವರಪ್ಪ ಅಲ್ಲ: ಎಂಬಿ ಪಾಟೀಲ್ ಕಿಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ