ನಗರದ ಯಲಹಂಕದಲ್ಲಿ ಭೂಮಿ ಖರೀದಿ ಸಂಬಂಧ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ವಿರುದ್ಧ ವಂಚನೆ ಹಾಗೂ ಜಾತಿ ನಿಂದನೆ ಆರೋಪದ ಮೇಲೆ ಯಲಹಂಕ ಠಾಣೆಯಲ್ಲಿ ಎಫ್‌ಐಆರ್ ದಾಖಲಾದ ಬೆನ್ನಲ್ಲೆ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಬೆಂಗಳೂರು (ಸೆ.13) : ನಗರದ ಯಲಹಂಕದಲ್ಲಿ ಭೂಮಿ ಖರೀದಿ ಸಂಬಂಧ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ವಿರುದ್ಧ ವಂಚನೆ ಹಾಗೂ ಜಾತಿ ನಿಂದನೆ ಆರೋಪದ ಮೇಲೆ ಯಲಹಂಕ ಠಾಣೆಯಲ್ಲಿ ಎಫ್‌ಐಆರ್ ದಾಖಲಾದ ಬೆನ್ನಲ್ಲೆ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಡಿ.ಸುಧಾಕರ್ ಅವರು ಸಚಿವರಾಗಿರುವ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ದೂರಿನ ಸಂಬಂಧ ಸೂಕ್ತ ದಾಖಲೆ ಸಲ್ಲಿಸುವಂತೆ ಸಚಿವರಿಗೆ ಕೋರಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಲ್ಲೆ, ಜಾತಿ ನಿಂದನೆ: ಸಚಿವ ಡಿ.ಸುಧಾಕರ್ ಸೇರಿ ಮೂವರ ವಿರುದ್ಧ ಕೇಸ್
ಈ ಮಧ್ಯೆ, ಸಚಿವರು ಪ್ರಕರಣದ ಜಮೀನಿನ ಮೂಲ ಮಾಲೀಕರೊಂದಿಗೆ ಮಾತನಾಡಲು ಹೋದ ವೇಳೆ ಬೆದರಿಕೆ ಹಾಕಿದ್ದಾರೆ ಮತ್ತು ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಿದೆ. ಇದು ಒಂದು ಜಾತಿ ಸಮುದಾಯದ ಆಕ್ರೋಶಕ್ಕೂ ಕಾರಣವಾಗಿದೆ. ಜೊತೆಗೆ ಸಚಿವರ ವಿರುದ್ಧ ಪರಿಶಿಷ್ಟರ ವಿರುದ್ಧ ಜಾತಿ ನಿಂದನೆ, ಹಲ್ಲೆ ಆರೋಪಗಳು ಕೇಳಿ ಬಂದಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಸುಧಾಕರ್ ಅವರು, ಬ್ರಾಹ್ಮಣ ಸಮುದಾಯದ ಬಗ್ಗೆ ಕೀಳಾಗಿ ಆಡಿರುವ ಮಾತುಗಳ ಬಗ್ಗೆ ಕ್ಷಮೆ ಕೇಳಬೇಕು. ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿರುವ ಸುಧಾಕರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ.
ಆದರೆ ಸಚಿವರ ವಿರುದ್ಧ ಕೇಳಿ ಬಂದಿರುವ ವಂಚನೆ ಆರೋಪಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಳ್ಳಿ ಹಾಕಿದ್ದು, ಇದೊಂದು ಸುಳ್ಳು ಪ್ರಕರಣವಾಗಿದೆ. ಸಚಿವರ ರಾಜೀನಾಮೆ ಅಗತ್ಯವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಸಚಿವರ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ. ಡಿ.ವಿ.ಸದಾನಂದಗೌಡ ಸೇರಿದಂತೆ ಅನೇಕರು ಆಗ್ರಹಿಸಿದ್ದಾರೆ.
ಸುಧಾಕರ್ ಕುರಿತ ವಿವಾದ:
ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಕಂಪನಿಯ ಪಾಲುದಾರರಾಗಿರುವ ಡಿ.ಸುಧಾಕರ್ ಅವರು ಮೋಸದಿಂದ ಯಲಹಂಕ ಗ್ರಾಮದ ಸರ್ವೇ ನಂಬರ್ 108/1ರಲ್ಲಿ ಒಂದು ಎಕರೆ ಮೂವತ್ತು ಗುಂಟೆ ಜಮೀನು ಕಬಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಜಮೀನಿನ ವಿವಾದದ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
ಹಾಗಿದ್ದೂ ಕೂಡ ತಮ್ಮ ಮೇಲೆ ಒತ್ತಡ ಹಾಕಲು ಗುಂಪು ಕಟ್ಟಿಕೊಂಡು ಬಂದು ಸುಧಾಕರ್ ಅವರು ಬೆದರಿಕೆ ಹಾಕಿದ್ದಾರೆ. ಅಲ್ಲದೆ, ತಮ್ಮ ಹಾಗೂ ತಮ್ಮ ಕುಟುಂಬದವರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿದ್ದ ತಮ್ಮ ಮಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಕುಟುಂಬದ ಮಹಿಳೆಯರನ್ನು ಹೊರಗೆ ಎಳೆದೊಯ್ದು ಜೆಸಿಬಿ ಮೂಲಕ ಮನೆ ಕೆಡವಿಸಿದ್ದಾರೆ ಎಂದು ಆರೋಪಿಸಿರುವ ಜಮೀನಿನ ಮೂಲ ಮಾಲೀಕರಾದ ಸುಬ್ಬಮ್ಮ 35 ಜನರ ವಿರುದ್ಧ ದೂರು ದಾಖಲಿಸಿದ್ದಾರೆ.
ಆದರೆ ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ತಳ್ಳಿಹಾಕಿರುವ ಸಚಿವ ಡಿ.ಸುಧಾಕರ್, ತಾವೊಂದು ಕಂಪನಿಯ ನಿರ್ದೇಶಕನಾಗಿದ್ದು, ಕಂಪನಿಗೆ ಕ್ರಮಬದ್ಧವಾಗಿ ಸುಬ್ಬಮ್ಮ ಎಂಬುವರಿಂದ 10 ವರ್ಷಗಳ ಹಿಂದೆ ಕಾನೂನಿನ ಪ್ರಕಾರವೇ ಜಮೀನು ಖರೀದಿಸಿದ್ದೇನೆ. ಚೆಕ್ ಮೂಲಕವೇ ಮೂಲ ಮಾಲೀಕರಿಗೆ ಹಣ ನೀಡಲಾಗಿದೆ. ಆದರೆ, ಈಗ ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ದೌರ್ಜನ್ಯ, ವಂಚನೆ ಕೇಸ್ ಹಾಕಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಸುಧಾಕರ್ ವಾದ
ಕಂಪನಿಗೆ ಕ್ರಮಬದ್ಧವಾಗಿ ಸುಬ್ಬಮ್ಮ ಎಂಬುವರಿಂದ 10 ವರ್ಷಗಳ ಹಿಂದೆ ಕಾನೂನಿನ ಪ್ರಕಾರವೇ ಜಮೀನು ಖರೀದಿಸಿದ್ದೇನೆ. ಚೆಕ್ ಮೂಲಕವೇ ಮೂಲ ಮಾಲೀಕರಿಗೆ ಹಣ ನೀಡಲಾಗಿದೆ. ಆದರೆ, ಈಗ ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ದೌರ್ಜನ್ಯ, ವಂಚನೆ ಕೇಸ್ ಹಾಕಲಾಗಿದೆ.
ಅಂಬೇಡ್ಕರ್ ಅಧ್ಯಯನದಿಂದ ವಿದ್ಯಾರ್ಥಿಗಳ ಜೀವನ ಹಸನು: ಸಚಿವ ಡಿ.ಸುಧಾಕರ್
ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ಆಗ್ರಹ
ಸಚಿವ ಡಿ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ. ಡಿ.ವಿ.ಸದಾನಂದಗೌಡ ಸೇರಿದಂತೆ ಅನೇಕರು ಆಗ್ರಹಿಸಿದ್ದಾರೆ.
ಸಿದ್ದು ಎಚ್ಚರಿಕೆ ನಡೆ, ಡಿಕೆಶಿ ಸಮರ್ಥನೆ
ಸಚಿವ ಸುಧಾಕರ್ ಅವರನ್ನು ಕರೆದು ಮಾಹಿತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸುಧಾಕರ್ ವಿರುದ್ಧದ ಆರೋಪ ತಳ್ಳಿಹಾಕಿದ್ದು, ಇದೊಂದು ಸುಳ್ಳು ಪ್ರಕರಣ. ಸಚಿವರ ರಾಜೀನಾಮೆ ಅಗತ್ಯವಿಲ್ಲ ಎಂದು ಹೇಳಿದ್ದಾರೆ.