ಸರ್ಕಾರಿ ಗೌರವದ ಜತೆ ಚಳ್ಳಕೆರೆಯಲ್ಲಿ ಇಂದು ಸಚಿವ ಸುಧಾಕರ್‌ ಅಂತ್ಯಕ್ರಿಯೆ

Published : May 11, 2026, 06:12 AM IST
D Sudhakar

ಸಾರಾಂಶ

ಭಾನುವಾರ ನಿಧನರಾದ ಸಚಿವ ಡಿ.ಸುಧಾಕರ್ ಅವರ ಅಂತ್ಯ ಸಂಸ್ಕಾರವು ಸೋಮವಾರ ಮಧ್ಯಾಹ್ನ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರು ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಚಿತ್ರದುರ್ಗ: ಭಾನುವಾರ ಮುಂಜಾನೆ ನಿಧನ ಹೊಂದಿದ ಸಚಿವ ಡಿ.ಸುಧಾಕರ್ ಅವರ ಪಾರ್ಥಿವ ಶರೀರವನ್ನು ಚಳ್ಳಕೆರೆಯ ಅವರ ನಿವಾಸ, ‘ಗೊಮ್ಮಟ ನಿಲಯ’ಕ್ಕೆ ತರಲಾಗಿದ್ದು, ಸೋಮವಾರ ಮಧ್ಯಾಹ್ನ 4 ಗಂಟೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ.

ಇದಕ್ಕೂ ಮೊದಲು, ಸೋಮವಾರ ಬೆಳಗ್ಗೆ ಸಚಿವರ ಸ್ವಂತ ಮನೆ ಗೊಮ್ಮಟ ನಿಲಯದಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ. ಬಳಿಕ, ಚಳ್ಳಕೆರೆ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಿ.ಸುಧಾಕರ್ ಮೈದಾನಕ್ಕೆ ಮೃತದೇಹ ಕೊಂಡೊಯ್ದು, ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ನಂತರ ಮಧ್ಯಾಹ್ನ 4 ಗಂಟೆಗೆ ಚಿತ್ರದುರ್ಗ ರಸ್ತೆಯ ವಿಠ್ಠಲ ನಗರದಲ್ಲಿರುವ ಶಾಂತಕುಮಾರ್ ಮೆಮೋರಿಯಲ್ ಶೆಟಲ್ ಕೋರ್ಟ್ ಆವರಣಕ್ಕೆ ಮೃತದೇಹವನ್ನು ಕೊಂಡೊಯ್ಯಲಾಗುವುದು. ಬಳಿಕ, ಸಕಲ ಸರ್ಕಾರಿ ಗೌರವಗಳೊಂದಿಗೆ, ಜೈನ ಧರ್ಮದ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ‌ಸಿಂಗ್ ಸುರ್ಜೆವಾಲ ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಶಾಸಕರು, ಮಂತ್ರಿಗಳು, ಮುಖಂಡರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಚಿವ ಸುಧಾಕರ್ ನಿಧನಕ್ಕೆ ರಾಹುಲ್ ಗಾಂಧಿ ಸಂತಾಪ

ಚಳ್ಳಕೆರೆ: ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ.ಸುಧಾಕರ್ ನಿಧನಕ್ಕೆ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಭಾರತ್ ಜೋಡೋ ಯಾತ್ರೆಯಲ್ಲಿ ತಮ್ಮನ್ನು ಸುಧಾಕರ್ ಅಪ್ಪಿಕೊಂಡಿದ್ದ ಫೋಟೋವನ್ನು ಎಕ್ಸ್‌ನಲ್ಲಿ ಅವರು ಹಂಚಿಕೊಂಡಿದ್ದಾರೆ. ಸುಧಾಕರ್ ಬಡವರ ಪರ ಇದ್ದವರು. ಇವರ ಅಕಾಲಿಕ ಸಾವು ತಮಗೆ ಅತೀವ ನೋವು ತಂದಿದೆ ಎಂದು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸುಧಾಕರ್‌ ನಿಧನ ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

ಸಚಿವ ಡಿ.ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ಮೇ 10 ರಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಪ್ರಕಟಿಸಿದ್ದು, ಮೇ 11 ರಂದು ಸೋಮವಾರ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು, ಚಿತ್ರದುರ್ಗು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದ ಸುಧಾಕರ್‌ ನಿಧನದ ಹಿನ್ನೆಲೆ ಮೇ 11 ರಂದು ಸೋಮವಾರ ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಕಚೇರಿಗಳು, ಎಲ್ಲಾ ಶಾಲಾ ಕಾಲೇಜುಗಳು (ಅನುದಾನ ಪಡೆಯುವ ಎಲ್ಲಾ ವಿದ್ಯಾಸಂಸ್ಥೆ ಸೇರಿ) ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳಿಗೆ ಸಾರ್ವಜನಿಕ ರಜೆ ಘೋಷಿಸಲಾಗಿದೆ.

ಮೇ 10 ರಿಂದ ಮೇ 12 ರವರೆಗೆ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಮಾಡಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಮಗಳು ಇರುವುದಿಲ್ಲ. ಕಟ್ಟಡಗಳ ಮೇ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೈಕ್‌ ಸವಾರನ ಸಾವಿಗೆ ಕಾರಣನಾಗಿದ್ದ ವ್ಯಕ್ತಿಗೆ 1 ವರ್ಷದ ಬದಲು 1 ದಿನ ಜೈಲು: ಹೈಕೋರ್ಟ್
ಪ್ರಧಾನಿ ಮೋದಿ ಮಾರ್ಗದಲ್ಲಿ ಪತ್ತೆಯಾದ ಜಿಲೆಟಿನ್‌ ಕಡ್ಡಿಗಳು ಪತ್ತೆ; ಓರ್ವ ಶಂಕಿತನ ಬಂಧನ