ರಾಜಕೀಯ ವಾಕ್ಸಮರದಲ್ಲಿ ನನ್ನ ಹೆಸರು ತರಬೇಡಿ: ಬಿಜೆಪಿ ವಿರುದ್ಧ ಮಹಿಳಾ ಆಯೋಗಕ್ಕೆ ದಿನೇಶ್ ಗುಂಡೂರಾವ್ ಪತ್ನಿ ದೂರು

Published : Oct 04, 2024, 10:52 PM IST
ರಾಜಕೀಯ ವಾಕ್ಸಮರದಲ್ಲಿ ನನ್ನ ಹೆಸರು ತರಬೇಡಿ: ಬಿಜೆಪಿ ವಿರುದ್ಧ ಮಹಿಳಾ ಆಯೋಗಕ್ಕೆ ದಿನೇಶ್ ಗುಂಡೂರಾವ್ ಪತ್ನಿ ದೂರು

ಸಾರಾಂಶ

ನಾನು ರಾಜಕೀಯದಲ್ಲಿ ಇಲ್ಲ.‌ ರಾಜಕೀಯ ಕುಟುಂಬದಲ್ಲಿರುವ ಒಬ್ಬ ಮಹಿಳೆ ಅಷ್ಟೇ. ರಾಜಕೀಯಕ್ಕೂ ನನಗು ಸಂಬಂಧವಿಲ್ಲ. ನಾನು ಮುಸ್ಲಿಂ ಕುಟುಂಬದಿಂದ ಬಂದು ಹಿಂದು ಕುಟುಂಬದಲ್ಲಿದ್ದೇನೆ ಎಂಬ ಒಂದೇ ಕಾರಣಕ್ಕೆ ಬಿಜೆಪಿ ತನ್ನ ರಾಜಕೀಯಕ್ಕಾಗಿ ನನ್ನ ಹೆಸರನ್ನ ತಳುಕು ಹಾಕುವುದು ಸರಿಯಲ್ಲ ಎಂದು ಟಬು ರಾವ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್   

ಬೆಂಗಳೂರು(ಅ.04):  ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಅನಗತ್ಯವಾಗಿ ಬಿಜೆಪಿ ತಮ್ಮ ಹೆಸರನ್ನ ಎಳೆದು ತರುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ನಾನು ರಾಜಕೀಯದಲ್ಲಿ ಇಲ್ಲ.‌ ರಾಜಕೀಯ ಕುಟುಂಬದಲ್ಲಿರುವ ಒಬ್ಬ ಮಹಿಳೆ ಅಷ್ಟೇ. ರಾಜಕೀಯಕ್ಕೂ ನನಗು ಸಂಬಂಧವಿಲ್ಲ. ನಾನು ಮುಸ್ಲಿಂ ಕುಟುಂಬದಿಂದ ಬಂದು ಹಿಂದು ಕುಟುಂಬದಲ್ಲಿದ್ದೇನೆ ಎಂಬ ಒಂದೇ ಕಾರಣಕ್ಕೆ ಬಿಜೆಪಿ ತನ್ನ ರಾಜಕೀಯಕ್ಕಾಗಿ ನನ್ನ ಹೆಸರನ್ನ ತಳುಕು ಹಾಕುವುದು ಸರಿಯಲ್ಲ ಎಂದು ಟಬು ರಾವ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

 ಸಾವರ್ಕರ್ ಬ್ರಾಹ್ಮಣನಾಗಿದ್ದರೂ ಗೋಮಾಂಸ ತಿನ್ನುತ್ತಿದ್ದರು ಎಂಬ ಹೇಳಿಕೆ: ಸಚಿವ ಗುಂಡೂರಾವ್ ವಿರುದ್ಧ ದೂರು ದಾಖಲು

ಮೊನ್ನೆಯಷ್ಟೇ ಸಾವರ್ಕರ್ ಕುರಿತ ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆ ಟೀಕಿಸುವ ಭರದಲ್ಲಿ ಬಿಜೆಪಿ, ಸಚಿವರ ಪತ್ನಿ ಟಬು ರಾವ್ ಅವರ ಹೆಸರನ್ನ ಪ್ರಸ್ತಾಪಿಸಿತ್ತು. ಬಿಜೆಪಿ ಟ್ವೀಟ್ ನಲ್ಲಿ ತಮ್ಮ ಹೆಸರನ್ನ ಎಳೆದು ತಂದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಟಬು ರಾವ್ ಈ ಬಗ್ಗೆ ಸಂಬಂಧಪಟ್ಟವರನ್ನ ಕರೆಸಿ ವಿಚಾರಣೆ ನಡೆಸುವಂತೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. 

ರಾಜಕೀಯವಾಗಿ ಟೀಕೆ ಟಿಪ್ಪಣಿ ಮಾಡುವಾಗ ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡುತ್ತಿದ್ದಾರೆ. ಬಿಜೆಪಿಯ ಶಾಸಕ ಯತ್ನಾಳ್ ಅವರು ಇದೇ ರೀತಿಯ ಆಕ್ಷೇಪಾರ್ಹ ಹೇಳಿಕೆ ನೀಡಿದಾಗ ಟಬು ರಾವ್ ಅವರು ಮಾನನಷ್ಟ ಪ್ರಕರಣ  ದಾಖಲಿಸಿದ್ದರು. ಪ್ರಕರಣಕ್ಕೆ ಸ್ಟೇ ಕೋರಿದ್ದ ಯತ್ನಾಳ್ ಅವರಿಗೆ ಹೈ ಕೋರ್ಟ್ ನ ಜಸ್ಟಿಸ್ ನಾಗಪ್ರಸನ್ನ ಅವರ ಪೀಠ ತರಾಟೆಗೆ ತೆಗೆದುಕೊಂಡಿದ್ದಲ್ಲದೇ, ತಡೆಯಾಜ್ಞೆ ನೀಡಲು ನಿರಾಕರಿಸಿದ್ದರು. ಆದರೆ ಇದೀಗ ಬಿಜೆಪಿ ತನ್ನ ಟ್ವೀಟರ್ ನಲ್ಲಿ ಟಬು ರಾವ್ ಅವರ ಹೆಸರನ್ನ ಉಲ್ಲೇಖಿಸಿ ಟೀಕಿಸಿದೆ. ಬಿಜೆಪಿಯ ಈ ನಡೆ ಪುನಾರಾವರ್ತನೆ ಆಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಹಿಳಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!
ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!