
ಮಮತಾ ಮರ್ಧಾಳ, ಏಷ್ಯಾನೆಟ್ ಸುವರ್ಣ ನ್ಯೂಸ್
ಬೆಂಗಳೂರು(ಜೂ.09): ರೋಗಿಗಳನ್ನು ಮಾನವೀಯ ದೃಷ್ಠಿಕೋನದಿಂದ ನೋಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯಾಧಿಕಾರಿಗಳಿಗೆ ಕರೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು(ಶುಕ್ರವಾರ) ಹಿರಿಯ ಅಧಿಕಾರಿಗಳು ಹಾಗೂ ಎಲ್ಲಾ ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, ನಿರ್ಲಕ್ಷ್ಯ ದಿಂದ ರೋಗಿಗಳಿಗೆ ತೊಂದರೆ ಆದರೆ ಯಾವುದೇ ಕಾರಣಕ್ಕೂ ನಾನು ಸಹಿಸಲ್ಲ ಎಂದರು.
ಆರೋಗ್ಯ ಇಲಾಖೆ ಸಾರ್ವಜನಿಕ ವಲಯದಲ್ಲಿ ಅತ್ಯಂತ ಸೂಕ್ಷ್ಮತೆ ಹೊಂದಿರುವ ಇಲಾಖೆ. ಇಲ್ಲಿ ತುರ್ತಾಗಿ ರೋಗಿಗಳಿಗೆ ಸ್ಪಂದಿಸಬೇಕು. ಕೆಲವು ತಪ್ಪುಗಳಿಂದ ರೋಗಿಗಳಿಗೆ ಸಮಸ್ಯೆಗಳಾಗೊದನ್ನ ನಾವು ನೋಡುತ್ತಿರುತ್ತೇವೆ. ಆದರೆ, ನಿರ್ಲಕ್ಷ್ಯದಿಂದ ರೋಗಿಗಳಿಗೆ ತೊಂದರೆ ಆಗಬಾರದು ಎಂದು ಗೂಂಡುರಾವ್ ಹೇಳಿದರು.
ನೈತಿಕ ಪೊಲೀಸ್‌ಗಿರಿಗೆ ಕಡಿವಾಣ; ದ.ಕನ್ನಡ ಜಿಲ್ಲಾ ಉಸ್ತುವಾರಿಯಾದ ಬೆನ್ನಲ್ಲೇ ಗುಡುಗಿದ ಗುಂಡುರಾವ್!
ಉದಾಸೀನ, ನಿರ್ಲಕ್ಷ್ಯದಿಂದ ಆಸ್ಪತ್ರೆಗಳಲ್ಲಿ ಸಾವು ನೋವುಗಳು ಸಂಭವಿಸಿದರೆ ಸಹಿಸಲು ಸಾಧ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ತಪ್ಪುಗಳನ್ನು ಸರಿಪಡಿಸೋಣ. ಆದರೆ ನಿರ್ಲಕ್ಷ್ಯ ತೋರಬಾರದು. ಇದು ಅಕ್ಷಮ್ಯ. ಆ ರೀತಿಯ ಪ್ರಕರಣಗಳು ಕಂಡುಬಂದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನ ಸಚಿವರು ಅಧಿಕಾರಿಗಳಿಗೆ ನೀಡಿದ್ದಾರೆ.
ಕ್ರಮ ಕೈಗೊಂಡ ಬಳಿಕ ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡ ಹಾಕಿದರೆ, ನಾನು ಮಣಿಯುವವನಲ್ಲ ಎಂದು ಸಚಿವರು ಇದೇ ವೇಳೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರು ಸಾರ್ವಜನಿಕರಿಗೆ ಪಬ್ಲಿಕ್ ರಿಲೇಷನ್ ಆಫಿಸರ್ ರೀತಿಯಲ್ಲೂ ಕೆಲಸ ಮಾಡಬೇಕು. ರೋಗಿಗಳಿಗೆ ಆತ್ಮ ಸ್ಥೈರ್ಯ ತುಂಬಬೇಕು. ನೀವೇ ನಿರ್ಲಕ್ಷ್ಯ, ಉದಾಸೀನ ಮಾಡಿದರೆ ರೋಗಿಗಳಿಗೆ ನೆಮ್ಮದಿಯೇ ಇಲ್ಲದಂತಾಗುತ್ತದೆ.
ರಾಜ್ಯದಾದ್ಯಂತ ಬೇರೆ ಬೇರೆ ಪ್ರಾದೇಶಿಕ ವಿಭಾಗಗಳಲ್ಲಿ ಪ್ರವಾಸ ಮಾಡುವುದಾಗಿ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದ, ಗುಂಡೂರಾವ್, ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯಗಳನ್ನು ಸಂಗ್ರಹಿಸ್ತೇನೆ ಎಂದರು.. ಆಸ್ಪತ್ರೆಗಳಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಒಳ್ಳೆಯ ಹೆಸರು ಪಡೆಯುವಂತೆ ಕೆಲಸ ಮಾಡಬೇಕು. ಯಾರು ಒಳ್ಳೆಯ ಕೆಲಸ ಮಾಡ್ತಾರೆ ಅವರ ಪರ ನಾನಿರ್ತೇನೆ. ಸರ್ಕಾರದಿಂದ ಕೂಡ ಸಂಪೂರ್ಣ ಸಹಕಾರ ಕೊಡಿಸುವ ಭರವಸೆಯನ್ನು ಇದೇ ವೇಳೆ ಸಚಿವರು ಅಧಿಕಾರಿಗಳಿಗೆ ನೀಡಿದರು.
ಚಾಮರಾಜನಗರ ಆಕ್ಸಿಜನ್ ದುರಂತದ ಮರುತನಿಖೆ: ಸಚಿವ ದಿನೇಶ್ ಗುಂಡೂರಾವ್
ಜಿಲ್ಲಾವಾರು ಪ್ರತಿಯೊಬ್ಬ ಡಿಎಚ್.ಒ ಗಳ ಕಾರ್ಯಸಾಮರ್ಥ್ಯದ ವರದಿ ನೀಡುವಂತೆ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳುಗೆ ದಿನೇಶ್ ಗೂಂಡೂರಾವ್ ಈವೇಳೆ ಸೂಚನೆ ನೀಡಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಜಿಲ್ಲಾವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಏನೆಲ್ಲಾ ಬದಲಾವಣೆಗಳಾಗಿದೆ. ಎಷ್ಟು ಪ್ರಗತಿ ಕಂಡಿದ್ದೇವೆ. ಎಲ್ಲಿ ಸರಿದಾರಿಯಲ್ಲಿ ಹೋಗುತ್ತಿಲ್ಲ. ಎಲ್ಲ ಮಾಹಿತಿಗಳನ್ನ ನೀಡುವಂತ ಸೂಚನೆ ನೀಡಿದರು. .
ರಾಷ್ಟ್ರೀಯ ಹೆಲ್ತ್ ಮಿಷನ್ ನ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಗುಂಡೂರಾವ್, ಡಯಾಬಿಟೀಸ್ ಸಮೀಕ್ಷಾ ವರದಿಗಳ ಕುರಿತು ಚರ್ಚೆ ನಡೆಸಿದರು. ಹಲವು ಜಿಲ್ಲೆಗಳಲ್ಲಿ ಡಯಾಬಿಟಿಸ್ 1 ರಿಂದ 2 ಪರ್ಸೆಂಟ್ ಇದೆ ಎಂದು ಸಮೀಕ್ಷೆಯಲ್ಲಿ ಹೇಳಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಝೀರೋ ಪರ್ಸೆಂಟ್ ಅಂತಾ ವರದಿ ನೀಡಿದ್ದಾರೆ. ಆದರೆ, ಯಾದಗಿರಿ ಡಿ.ಎಚ್.ಒ ಅವರಿಗೆ ಡಯಾಬಿಟೀಸ್ ಇದ್ದ ಹಾಗಿದೆ ಎಂದು ಸಚಿವರು ಹಾಸ್ಯ ಚಟಾಕಿ ಹಾರಿಸಿದರು. ಎಲ್ಲರು ಕ್ರಿಯೇಟಿವ್ ಆಗಿ, ಉತ್ತಮವಾಗಿ ಕೆಲಸ ಮಾಡಿ. ಸಾರ್ವಜಿನಿಕರಿಗೆ ನೀವು ಒಳ್ಳೆಯದನ್ನ ಮಾಡಿದರೆ, ನಿಮಗೂ ಒಳ್ಳೆಯದಾಗಲಿದೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ