ಸಚಿವ ಡಾ. ಸುಧಾಕರ್ ತಂದೆಗೆ ಕೊರೋನಾ ಭೀತಿ, ಆಸ್ಪತ್ರೆಗೆ ದಾಖಲು

Published : Jun 22, 2020, 03:41 PM ISTUpdated : Jun 22, 2020, 05:30 PM IST
ಸಚಿವ ಡಾ.  ಸುಧಾಕರ್ ತಂದೆಗೆ ಕೊರೋನಾ ಭೀತಿ, ಆಸ್ಪತ್ರೆಗೆ ದಾಖಲು

ಸಾರಾಂಶ

ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರ ತಂದೆಗೂ ಕೊರೋನಾ ಲಕ್ಷಣಗಳು ಕಂಡುಬಂದಿದ್ದು, ಅವರನ್ನ ಆಸ್ಪತ್ರೆಗೆ ದಾಖಲಾಗಿಸಿದೆ.

ಬೆಂಗಳೂರು, (ಜೂನ್.22): ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಮನೆ ಕೆಲಸದ ಸಿಬ್ಬಂದಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರ ಬೆನ್ನಲ್ಲೇ ಸುಧಾಕರ್ ಅವರ ತಂದೆಗೂ ಕೊರೋನಾ ಲಕ್ಷಣಗಳಾದ ಜ್ವರ, ಕೆಮ್ಮು ಸಮಸ್ಯೆ ಕಂಡುಬಂದಿವೆ.

"

ಈ ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಲ್ಯಾಬ್ ರಿಪೋರ್ಟ್‌ಗಾಗಿ ಕಾಯುತ್ತಿದ್ದೇವೆ ಎಂದು ಈ ಬಗ್ಗೆ ಸ್ವತಃ ಸಚಿವ ಸುಧಾಕರ್ ಅವರೇ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಸಚಿವ ಸುಧಾಕರ್ ಮನೆಗೂ ಕಾಲಿಟ್ಟ ಕೊರೋನಾ...!

ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಬೆಂಗಳೂರಿನ ಸದಾಶಿವ ನಗರದಲ್ಲಿರೋ ನಿವಾಸದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.  ಇದರ ಮಧ್ಯೆ ಸಚಿವ ಸುಧಾಕರ್ ಅವರ ತಂದೆಗೆ ಕೊರೋನಾ ಭೀತಿ ಶುರುವಾಗಿದೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!