ಕೊರೋನಾ ಹೆಚ್ಚಾದರೆ ಕಾಂಗ್ರೆಸ್ಸೇ ನೇರ ಹೊಣೆ: ಸಚಿವ ಸುಧಾಕರ್‌

Published : Jun 16, 2022, 11:30 PM IST
ಕೊರೋನಾ ಹೆಚ್ಚಾದರೆ ಕಾಂಗ್ರೆಸ್ಸೇ ನೇರ ಹೊಣೆ: ಸಚಿವ ಸುಧಾಕರ್‌

ಸಾರಾಂಶ

*   ರಸ್ತೆಯಲ್ಲಿ ಜನರ ಸೇರಿಸಿ ಗುಂಪು ಗುಂಪಾಗಿ ಪ್ರತಿಭಟನೆ ತಪ್ಪು *  ಪ್ರತಿಭಟನೆಗೆ ಹೆಚ್ಚು ಜನ ಸೇರಿದರೆ ಸೋಂಕು ಉಲ್ಬಣ *  ಶಾಲೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ   

ಬೆಂಗಳೂರು(ಜೂ.16):  ಕಾಂಗ್ರೆಸ್‌ ನಡುರಸ್ತೆಯಲ್ಲಿ ಗುಂಪು ಗುಂಪಾಗಿ ಪ್ರತಿಭಟನೆ ನಡೆಸುತ್ತಿದ್ದು, ಕೊರೋನಾ ಸೋಂಕು ಹೆಚ್ಚಳವಾದರೆ ಅವರೇ ಹೊಣೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಕಿಡಿಕಾರಿದ್ದಾರೆ.

ಗುರುವಾರ ಸುದ್ದಿಗಾರದೊಂದಿಗೆ ಕಾಂಗ್ರೆಸ್‌ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್‌ ಪ್ರತಿಭಟನೆ ಮಾಡುವುದಾದರೆ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಡಲಿ. ಅದು ಬಿಟ್ಟು ಜನರನ್ನು ಸೇರಿಸಿಕೊಂಡು ನಡು ರಸ್ತೆಯಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. ಪ್ರತಿಭಟನೆಯಿಂದ ಹೆಚ್ಚು ಜನ ಸೇರಿ ಸೋಂಕು ಉಲ್ಬಣವಾಗುತ್ತದೆ. ಒಂದು ವೇಳೆ ಪ್ರತಿಭಟನೆಯಿಂದ ಕೊರೋನಾ ಹೆಚ್ಚಾದರೆ ಅದರ ನೈತಿಕ ಹೊಣೆಯನ್ನು ಕಾಂಗ್ರೆಸ್‌ ನಾಯಕರು ಹೊರಬೇಕು ಎಂದರು.
ಚರ್ಚಿಸಿ ದೂರು ದಾಖಲಿಸಲಾಗುವುದು:

COVID ORIGIN:ಚೀನಾ ಪ್ರಯೋಗಾಲಯದಿಂದ ಕೊರೋನಾ ವೈರಸ್ ಸೋರಿಕೆ ವಾದ ತಳ್ಳಿ ಹಾಕಲ್ಲ: ಡಬ್ಲ್ಯು ಎಚ್ ಒ

ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತಿದ್ದು, ಕಾಂಗ್ರೆಸ್‌ನ ಪ್ರತಿಭಟನೆಯಿಂದ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ. ಕಾಂಗ್ರೆಸ್‌ ನಾಯಕರ ವಿರುದ್ಧ ಪ್ರಕರಣ ದಾಖಲಿಸುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಈ ಹಿಂದೆಗೂ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿ ಮೇಕೆದಾಟು ಹೋರಾಟ ಮಾಡಿದ್ದರು. ಸತತ ಎರಡನೇ ಬಾರಿ ಕಾಂಗ್ರೆಸ್‌ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ನಾಯಕರ ನಡೆ ನಾಚಿಕೆ ತರಿಸುತ್ತದೆ. ಒಂದು ಕಡೆ ಸಂವಿಧಾನದ ಬಗ್ಗೆ ಸಾಕಷ್ಟು ಭಾಷಣ ಮಾಡುತ್ತಾರೆ. ಮತ್ತೊಂದು ಕಡೆ ಕಾನೂನು ಉಲ್ಲಂಘಿಸಿ, ನಿಯಮ ಪಾಲಿಸದೇ ಸಂವಿಧಾನಕ್ಕೆ ಅಗೌರವ ತೋರುವ ಕೆಲಸ ಮಾಡುತ್ತಾರೆ. ಈ ಹಿಂದೆ ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್‌, ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ಸೀತಾರಾಮ… ಕೇಸರಿ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ವಿಚಾರಣೆ ಕೂಡ ನಡೆದಿತ್ತು. ಆಗ ಯಾರು ಚಕಾರ ಎತ್ತಿರಲಿಲ್ಲ, ಯಾರೂ ಪ್ರತಿಭಟನೆಗೆ ಮುಂದಾಗಿರಲಿಲ್ಲ. ಈಗ ರಾಹುಲ್‌ ಗಾಂಧಿ ವಿಚಾರದಲ್ಲಿ ಮಾತ್ರ ಪ್ರತಿಭಟಿಸುತ್ತಿದ್ದಾರೆ. ಪ್ರಕರಣ ಸೂಕ್ತ ವಿಚಾರಣೆ ಆಗಲಿ, ಸತ್ಯ ಹೊರಗಡೆ ಬರಲಿ ಎಂದು ವ್ಯಂಗ್ಯವಾಡಿದರು.

ಮತ್ತೆ ಕೊರೋನಾ ಸ್ಫೋಟ: ಸೋಂಕು ಭಾರೀ ಏರಿಕೆ..!

ಅಕ್ಟೋಬರ್‌ನಲ್ಲಿ ಕೊರೋನಾ ಉಚ್ಛ್ರಾಯ ಸ್ಥಿತಿಗೆ

ಬೆಂಗಳೂರು: ರಾಜ್ಯ ತಾಂತ್ರಿಕ ಸಲಹಾ ಸಮಿತಿಯಗೆ ಐಐಟಿ ಕಾನ್ಪುರ ವರದಿ ನೀಡಿದೆ. ಜೂನ್‌ ಮೂರನೇ ವಾರದಿಂದ ಅಕ್ಟೋಬರ್‌ವರೆಗೂ ಕೊರೋನಾ ಇರಲಿದೆ. ಅದರಲ್ಲೂ ಅಕ್ಟೋಬರ್‌ನಲ್ಲಿ ಉಚ್ಛ್ರಾಯ (ಪೀಕ್‌) ಸ್ಥಿತಿ ತಲುಪಬಹುದು ಎಂದು ವರದಿಯಲ್ಲಿ ಅಂದಾಜಿಸಿದ್ದಾರೆ. ಈ ಹಿಂದೆ ಕೂಡ ಐಐಟಿ ಕಾನ್ಪುರ ವರದಿ ನೀಡಿತ್ತು. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಅದಕ್ಕೆ ತಕ್ಕಂತೆ ಪೂರಕವಾಗಿ ಸಿದ್ಧತೆ ಮಾಡಿಕೊಂಡಿದ್ದೇವೆ. ಸದ್ಯ ವರದಿಯಾಗುತ್ತಿರುವ ಕೊರೋನಾ ಪ್ರಕರಣಗಳು ಸೌಮ್ಯ ಲಕ್ಷಣ ಹೊಂದಿದ್ದು ಜನಸಾಮಾನ್ಯರು ಯಾವುದೇ ಆತಂಕ, ಭಯಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವರು ಹೇಳಿದರು.

ಶಾಲೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ:

ಬೆಂಗಳೂರಿನ ಶಾಲೆಗಳಲ್ಲಿ ಕೊರೋನಾ ಹೆಚ್ಚಳ ವಿಚಾರವಾಗಿ ಮಾತನಾಡಿದ ಸಚಿವರು, ‘ಒಂದೆರೆಡು ಶಾಲೆಗಳಲ್ಲಿ ಕೊರೋನಾ ಪ್ರಕರಣಗಳು ಕಾಣಿಸಿಕೊಂಡಿವೆ. ಆ ಶಾಲಾಗಳಿಗೆ ರಜೆ ಕೊಟ್ಟಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಶಾಲೆಗಳಿಗೆ ಸ್ಪಷ್ಟವಾದ ನಿಯಮಾವಳಿ ರೂಪಿಸಿದ್ದೇವೆ. ವಿದ್ಯಾರ್ಥಿಗಳು ಬರುವಾಗ ಥರ್ಮಲ… ಸ್ಕ್ರೀನಿಂಗ್‌ ಮಾಡಿ, ಮಾಕ್ಸ್‌ ಧರಿಸಿದ್ದಾರೆ ಎಂದು ತಪಾಸಣೆ ನಡೆಸಲಾಗುತ್ತಿದೆ. ಎಲ್ಲಾ ಶಾಲೆಗಳಲ್ಲಿ ಕೊರೋನಾ ನಿಯಮ ಕಡ್ಡಾಯ ಪಾಲನೆ ಮಾಡುತ್ತಿದ್ದಾರೆ’ ಎಂದು ತಿಳಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ