ಮಲೇರಿಯಾ ಮುಕ್ತ ಕರ್ನಾಟಕಕ್ಕೆ ಸುಧಾಕರ್‌ ಪಣ

Published : Apr 26, 2022, 05:57 AM IST
ಮಲೇರಿಯಾ ಮುಕ್ತ ಕರ್ನಾಟಕಕ್ಕೆ ಸುಧಾಕರ್‌ ಪಣ

ಸಾರಾಂಶ

*  ಬ್ರಿಟನ್‌ ಮಾದರಿಯಲ್ಲಿ ರಾಜ್ಯದಲ್ಲೂ ಉಚಿತ ಆರೋಗ್ಯ ಸೇವೆಗೆ ಪ್ರಯತ್ನ *  ಆರೋಗ್ಯ ಕರ್ನಾಟಕ ನಿರ್ಮಾಣ *  ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಸರಿಯಾಗಬೇಕಾದರೆ ಶುಚಿತ್ವ ಬಹುಮುಖ್ಯ  

ಬೆಂಗಳೂರು(ಏ.26):  2030ಕ್ಕೆ ಮಲೇರಿಯಾ ಮುಕ್ತ ಭಾರತ(Malaria Free India) ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ 2027ರ ಹೊತ್ತಿಗೆ ಮಲೇರಿಯಾ ನಿರ್ಮೂಲನೆ ಆಗಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌(Dr K Sudhakar) ತಿಳಿಸಿದರು.

ಬೆಂಗಳೂರಿನ(Bengaluru) ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಪಿಎಂಎಸ್‌ಎಸ್‌ವೈ ಆಸ್ಪತ್ರೆ ವಿಶ್ವ ಮಲೇರಿಯಾ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಲೇರಿಯಾ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಯಾಗಿ ಶ್ರಮ ಪಟ್ಟರೆ ಆರೋಗ್ಯ ಕರ್ನಾಟಕದ(Karnataka) ಕನಸು ನನಸಾಗಬಹುದು ಎಂದು ಹೇಳಿದರು.
ಮಲೇರಿಯಾ ನಿರ್ಮೂಲನೆಗೆ ಸರ್ಕಾರ ಮತ್ತು ಸಮಾಜ ಒಟ್ಟಾಗಿ ಕೈಜೋಡಿಸಬೇಕಿದೆ. ಎಲ್ಲಾ ಹಳ್ಳಿಗಳಲ್ಲೂ ಆಶಾ ಕಾರ್ಯಕರ್ತರು ಶುಚಿತ್ವ ಮತ್ತು ನೈರ್ಮಲ್ಯದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ವೈದ್ಯಕೀಯ ಕಾಲೇಜುಗಳು ತಮ್ಮ ವಿದ್ಯಾರ್ಥಿಗಳನ್ನು ಬಳಸಿಕೊಂಡು ಆಯಾ ಜಿಲ್ಲೆಗಳಲ್ಲಿ, ತಾಲೂಕುಗಳಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಮಾಸ್ಕ್‌ ಹಾಕದ್ದಕ್ಕೆ ದಂಡ ಹಾಕುವ ಸ್ಥಿತಿ ಬಂದಿಲ್ಲ: ಸಚಿವ ಸುಧಾಕರ್‌

ಶುಚಿತ್ವ ಕಾಪಾಡಿ:

ಆರೋಗ್ಯ(Health) ವ್ಯವಸ್ಥೆ ಸಂಪೂರ್ಣವಾಗಿ ಸರಿಯಾಗಬೇಕಾದರೆ ಶುಚಿತ್ವ ಬಹುಮುಖ್ಯ. ಈ ಹಿಂದೆ ಗ್ರಾಮೀಣ ಪ್ರದೇಶದ ಶೇಕಡಾ 70-80ರಷ್ಟುಮನೆಗಳಲ್ಲಿ ಶೌಚಾಲಯಗಳು ಇರುತ್ತಿರಲಿಲ್ಲ. ಬಯಲು ಶೌಚಾಲಯದ ಮೊರೆ ಹೋಗಬೇಕಿತ್ತು. ಇದು ಆರೋಗ್ಯಕ್ಕೆ ಮಾರಕವಾಗಿರುತ್ತಿತ್ತು. ಸ್ವಚ್ಛ ಭಾರತ್‌ ಮಿಷನ್‌ ಅಡಿಯಲ್ಲಿ ಕಳೆದ 7 ವರ್ಷಗಳಲ್ಲಿ 12 ಕೋಟಿ ಶೌಚಾಲಯಗಳು ನಿರ್ಮಾಣವಾಗಿವೆ. ರಾಜ್ಯದ 10 ಜಿಲ್ಲೆಗಳಲ್ಲಿ ಕಳೆದ 3 ವರ್ಷಗಳಿಂದ ಒಂದೇ ಒಂದು ಮಲೇರಿಯಾ ಪ್ರಕರಣ ಕಂಡು ಬಂದಿಲ್ಲ. ಉಡುಪಿ, ಮಂಗಳೂರು ಪ್ರದೇಶಗಳಲ್ಲಿ ಮಲೇರಿಯಾ ಪ್ರಕರಣಗಳು ಹೆಚ್ಚಿವೆ. ಈ ಬಗ್ಗೆ ಅಧ್ಯಯನ ನಡೆಯುತ್ತಿದೆ. ವರದಿ ಬಂದ ಮೇಲೆ ಈ ಪ್ರದೇಶಗಳಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಅನ್ನುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು.

Bengaluru: ಕೆ.ಸಿ.ಜನರಲ್‌ನಲ್ಲೂ ತಾಯಿ-ಶಿಶು ಆಸ್ಪತ್ರೆ: ಸಚಿವ ಸುಧಾಕರ್‌

ತಪಾಸಣೆಗೆ ಮಹತ್ವ :

ಜ್ವರ ಅಥವಾ ಬೇರೆ ರೋಗ ಲಕ್ಷಣ ಕಂಡು ಬಂದಾಗ ರಕ್ತ ಪರೀಕ್ಷೆ ಮಾಡಿಸಿ, ರೋಗವಿದ್ದರೆ ತುರ್ತಾಗಿ ಚಿಕಿತ್ಸೆ ಪಡೆಯಬೇಕಿದೆ. ಸರ್ಕಾರ ಎಲ್ಲಾ ಪ್ರಾಥಮಿಕ, ಸಮುದಾಯ, ತಾಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ ರಕ್ತ ಪರೀಕ್ಷೆಗೆ ಬೇಕಾದಂತಹ ವ್ಯವಸ್ಥೆಗಳನ್ನು ಮಾಡಿದೆ. ಸಾರ್ವಜನಿಕರು ಈ ವ್ಯವಸ್ಥೆಯನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳೂ ಸರ್ಕಾರದ ಜೊತೆ ಕೈ ಜೋಡಿಸಬೇಕು. ಗ್ರಾಮೀಣ ಪ್ರದೇಶದಲ್ಲಿ(Rural Area) ಖಾಸಗಿ ವೈದ್ಯರು ಕೂಡ ಮಲೇರಿಯಾ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲ ಪಡಿಸಬೇಕು. ಕರ್ನಾಟಕವನ್ನು ಮಲೇರಿಯಾ ಮುಕ್ತ ರಾಜ್ಯವನ್ನಾಗಿ ಮಾಡಬೇಕು. ಪ್ರಧಾನಿಗಳು 2030ಕ್ಕೆ ಮಲೇರಿಯಾ ಮುಕ್ತ ಭಾರತಕ್ಕೆ ಕರೆ ಕೊಟ್ಟಿದ್ದಾರೆ. ಆದರೆ ಕರ್ನಾಟಕ 2027ರ ಹೊತ್ತಿಗೆ ಮಲೇರಿಯಾವನ್ನು ಮುಕ್ತ ವಾಗಬೇಕು. ಅದಕ್ಕಾಗಿ ತಯಾರಿ, ಸಿದ್ಧತೆಗಳು ಮತ್ತು ವಿಶೇಷ ಕಾರ್ಯಯೋಜನೆಗಳು ತುರ್ತಾಗಿ ಸಿದ್ಧವಾಗಬೇಕು ಎಂದು ಹೇಳಿದರು.

ಆರೋಗ್ಯ ಕರ್ನಾಟಕ ನಿರ್ಮಾಣ

ಸರ್ಕಾರ ಆರೋಗ್ಯ ಕಾರ್ಯಕರ್ತರಿಗೆ 7ನೇ ವೇತನ ಆಯೋಗದ ವರದಿಯಂತೆ ವೇತನ ನೀಡುತ್ತಿದೆ. ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಹೆಚ್ಚು ಹೆಚ್ಚು ಸೇವೆಗಳನ್ನು ನೀಡಲಾಗುತ್ತಿದೆ. ವೈದ್ಯರ ನೇಮಕವಾಗಿದೆ. ರಾಜ್ಯದ ಕಟ್ಟಕಡೆಯ ವ್ಯಕ್ತಿ ಕೂಡ ವಿಶ್ವಾಸ ಮತ್ತು ನಂಬಿಕೆಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಪಡೆಯಬೇಕು. ಬ್ರಿಟನ್‌ ಮಾದರಿಯಲ್ಲಿ ರಾಜ್ಯದಲ್ಲೂ ಉಚಿತ ಆರೋಗ್ಯ ಸೇವೆಗೆ ಪ್ರಯತ್ನ ನಡೆಯುತ್ತಿದೆ. ಮಾರಕ ರೋಗ, ಕ್ಲಿಷ್ಟಶಸ್ತ್ರ ಚಿಕಿತ್ಸೆಗಳು ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚು ಹೆಚ್ಚು ನಡೆಯಬೇಕಿದೆ. ಈಗಾಗಲೇ ಪ್ರತಿದಿನ 30,000 ಸೈಕಲ್‌ ನಷ್ಟು ನಡೆಯುತ್ತಿದ್ದ ಡಯಾಲಿಸಿಸ್‌ ಅನ್ನು 60,000 ಸೈಕಲ್‌ಗಳಿಗೆ ಏರಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ದುಬಾರಿಯಾಗಿರುವ ಸೇವೆ ಉಚಿತವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಹೆಚ್ಚು ಸಿಗುವಂತಾದರೆ ಆರೋಗ್ಯ ಕರ್ನಾಟಕ ನಿರ್ಮಾಣವಾಗುತ್ತದೆ ಎಂದು ಸಚಿವರು ತಿಳಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್