
ಬೆಂಗಳೂರು(ಆ.27): ರಾಜ್ಯದಲ್ಲಿ ಅನ್‌ಲಾಕ್-4 ವೇಳೆ ಯಾವ್ಯಾವ ನಿರ್ಬಂಧಗಳನ್ನು ಸಡಿಲಗೊಳಿಸಬೇಕು ಎಂಬ ಬಗ್ಗೆ ಈ ಬಾರಿಯೂ ಕೇಂದ್ರದ ಮಾರ್ಗಸೂಚಿಯನ್ನೇ ಅನುಸರಿಸಲಾಗುವುದು. ನನ್ನ ಪ್ರಕಾರ ನಮ್ಮ ಮೆಟ್ರೋ ಸಂಚಾರ ಶುರುವಾಗಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ತಿಂಗಳಿನ ಅನ್‌ಲಾಕ್ ಮಾರ್ಗಸೂಚಿಯಲ್ಲಿ ಏನೆಲ್ಲಾ ನಿಷೇಧ ಸಡಿಲಗೊಳ್ಳಬಹುದು ಎಂದು ಮಾಧ್ಯಮಗಳಲ್ಲಿ ತೋರಿಸಲಾಗುತ್ತಿದೆ. ಈವರೆಗೂ ಎಲ್ಲಾ ರಾಜ್ಯಗಳು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನೇ ಪಾಲಿಸಿಕೊಂಡು ಬಂದಿವೆ. ಈ ಬಾರಿಯೂ ಕೇಂದ್ರ ಸರ್ಕಾರವೇ ಮಾರ್ಗಸೂಚಿ ಪ್ರಕಟಿಸಲಿದೆ ಎಂದರು.
ಅನ್‌ಲಾಕ್ 4ರಲ್ಲಿ ಮೆಟ್ರೋ ರೈಲಿಗೆ ಅನುಮತಿ ಸಾಧ್ಯತೆ!
ಆಗಸ್ಟ್ ಅಂತ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಭೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರವು ಯಾವ ಮಾರ್ಗಸೂಚಿ ಪ್ರಕಟಿಸುತ್ತದೆಯೋ ಅದೇ ನಿಯಮಗಳನ್ನು ಪಾಲಿಸುತ್ತೇವೆ. ಈ ಬಾರಿ ನಮ್ಮ ಮೆಟ್ರೋ ಸಂಚಾರಕ್ಕೆ ಅವಕಾಶ ಸಿಗಬಹುದು ಎನಿಸುತ್ತಿದೆ ಎಂದು ಹೇಳಿದರು.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ