ಕೋವಿಡ್‌ ಸಂಕಷ್ಟಕ್ಕೆ ಮಿಡಿದ ಸುಧಾ ಮೂರ್ತಿ: ಧನ್ಯವಾದ ತಿಳಿಸಿದ ಸಚಿವ ಸುಧಾಕರ್‌

Kannadaprabha News   | Asianet News
Published : Aug 03, 2020, 09:39 AM ISTUpdated : Aug 03, 2020, 09:45 AM IST
ಕೋವಿಡ್‌ ಸಂಕಷ್ಟಕ್ಕೆ ಮಿಡಿದ ಸುಧಾ ಮೂರ್ತಿ: ಧನ್ಯವಾದ ತಿಳಿಸಿದ ಸಚಿವ ಸುಧಾಕರ್‌

ಸಾರಾಂಶ

ಬ್ರಾಡ್‌ ವೇ ಆಸ್ಪತ್ರೆಯು 200 ಹಾಸಿಗೆಗಳ ಕೋವಿಡ್‌ ಆಸ್ಪತ್ರೆಯಾಗಿ ಸಜ್ಜು| ಆಸ್ಪತ್ರೆಯ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ನರ್ಸ್‌, ಪ್ಯಾರಾ ಮೆಡಿಲ್‌ ಮತ್ತು ಇತರೆ ಸಿಬ್ಬಂದಿ ನಿಯೋಜನೆ| ಇನ್ನು ಎರಡು ವಾರದೊಳಗೆ ಆಸ್ಪತ್ರೆ ಕಾರ್ಯಾರಂಭ|

ಬೆಂಗಳೂರು(ಆ.03): ಶಿವಾಜಿನಗರದ ಬ್ರಾಡ್‌ ವೇ ಆಸ್ಪತ್ರೆಯನ್ನು ಇಸ್ಫೋಸಿಸ್‌ ಪ್ರತಿಷ್ಠಾನದ ನೆರವಿನೊಂದಿಗೆ 200 ಹಾಸಿಗೆಗಳ ಸುಸಜ್ಜಿತ ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತಿಸಲಾಗುತ್ತಿದ್ದು, ಇದಕ್ಕಾಗಿ ಪ್ರತಿಷ್ಠಾನದ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಬ್ರಾಡ್‌ ವೇ ಆಸ್ಪತ್ರೆಯು 200 ಹಾಸಿಗೆಗಳ ಕೋವಿಡ್‌ ಆಸ್ಪತ್ರೆಯಾಗಿ ಸಜ್ಜಾಗುತ್ತಿದೆ. ಇದರ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ನರ್ಸ್‌, ಪ್ಯಾರಾ ಮೆಡಿಲ್‌ ಮತ್ತು ಇತರೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಇನ್ನು ಎರಡು ವಾರದೊಳಗೆ ಕಾರ್ಯಾರಂಭ ಆಗಲಿದೆ ಎಂದು ತಿಳಿಸಿದ್ದಾರೆ. 

ಲಾಕ್‌ಡೌನ್‌ನಿಂದ ಕಷ್ಟದಲ್ಲಿರೋ ಮೈಸೂ​ರು ಝೂಗೆ 20 ಲಕ್ಷ: ಸುಧಾಮೂರ್ತಿ

 

ಈ ಆಸ್ಪತ್ರೆಯನ್ನು ಸುಸಜ್ಜಿತ ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತಿಸಲು ಅಗತ್ಯ ಮೂಲಸೌಕರ್ಯ ಒದಗಿಸಲು ನೆರವಾದ ಇಸ್ಫೋಸಿಸ್‌ ಪ್ರತಿಷ್ಠಾನ ಮತ್ತು ಅದರ ಮುಖ್ಯಸ್ಥರಾದ ಡಾ.ಸುಧಾಮೂರ್ತಿ ಅವರಿಗೆ ಸರ್ಕಾರ ಮತ್ತು ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ