Coronavirus ಕೊರೋನಾ ಬಗ್ಗೆ ಮಾತಾಡೋ ವೈದ್ಯರಿಗೆ ಸಚಿವ ಸುಧಾಕರ್ ಖಡಕ್ ಎಚ್ಚರಿಕೆ..!

By Suvarna News  |  First Published Jan 19, 2022, 5:35 PM IST

* ಕೊರೋನಾ ಬಗ್ಗೆ ನಾನಾ ಸುದ್ದಿ 
* ವೈದ್ಯರಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವ ಸುಧಾಕರ್
*  ಕೊರೋನಾ ಬಗ್ಗೆ ವೈದ್ಯರು ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ 


ಬೆಂಗಳೂರು, (ಜ.19): ಕೊರೋನಾ (Coronavirus) ಹೆಚ್ಚಾಗುತ್ತಿರುವ ನಡುವೆ ವೈದ್ಯರು (Doctors) ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಕರ್ನಾಟಕ ಆರೋಗ್ಯ ಇಲಾಖೆ ಸಚಿವ ಡಾ.ಸುಧಾಕರ್ ಎಚ್ಚರಿಕೆ‌ ನೀಡಿದ್ದಾರೆ.

ಇಂದು(ಬುಧವಾರ) ಚಿತ್ರದುರ್ಗದಲ್ಲಿ(Chitradurga) ಮಾತನಾಡಿದ ಅವರು, ಸರ್ಕಾರ ಇದಕ್ಕಾಗಿ ಫ್ಯಾನಲಿಸ್ಟ್ ಗಳನ್ನ ರೆಡಿ ಮಾಡ್ತಿದೆ. ಆ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದೆ. ಆದ್ರೆ ಕೊರೋನಾ ಬಗ್ಗೆ ಯಾವುದೇ ದಾಖಲೆ ಇಲ್ಲದೆ ಮಾತಾಡಿದ್ರೆ ಆಕ್ಟ್ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ವೈದ್ಯರಿಗೆ ಎಚ್ಚರಿಕೆ ನೀಡಿದರು.

Tap to resize

Latest Videos

undefined

Coronavirus ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ಸ್ಫೋಟ, ಅಶ್ವಥ್ ನಾರಾಯಣ ಆತಂಕ

ಇದು ಜನಪರ ಸರ್ಕಾರ. ಜನರಿಗೆ ಸಮಸ್ಯೆ ಆಗದಂತೆ ಕ್ರಮತಗೋಳ್ತೀನಿ. ಎಲ್ಲರ ಅಭಿಪ್ರಾಯವನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳುತ್ತೆ. ಇನ್ನು ಎರಡು ದಿನ ಬಾಕಿ ಇದೆ. ಎಲ್ಲಾ ಅಂಕಿ ಅಂಶಗಳನ್ನ ಆಧಾರದಲ್ಲಿಟ್ಟುಕೊಂಡು ಶುಕ್ರವಾರ ಸಭೆ ನಡೆಸಲಾಗುತ್ತದೆ. ಆ ಬಳಿಕ ನಿರ್ಧಾರ ಮಾಡಲಾಗುತ್ತೆ ಎಂದು ತಿಳಿಸಿದರು. 

 ಏರ್​ಪೋರ್ಟ್​ನಲ್ಲಿ (Airport) ಕೊವಿಡ್(Covid 19) ಟೆಸ್ಟ್ ರಿಪೋರ್ಟ್ ಗೋಲ್ ಮಾಲ್ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರ ಈವರೆಗೆ ನನ್ನ ಗಮನಕ್ಕೆ ಬಂದಿಲ್ಲ. ತಪ್ಪು ವರದಿ ಕೊಟ್ಟಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಲ್ಯಾಬ್ ತಪ್ಪು ವರದಿ ನೀಡಿದ್ದರೆ ಲೈಸನ್ಸ್(License) ರದ್ದು ಮಾಡಲಾಗುತ್ತದೆ. ವಿಮಾನ ನಿಲ್ದಾಣವೇ ಆಗಿರಲಿ, ಎಲ್ಲೇ ತಪ್ಪು ಆಗಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಂದರು.

ವೀಕೆಂಡ್ ಕರ್ಫ್ಯೂ ಬಗ್ಗೆ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ಸುಧಾಕರ್ , ಪ್ರತಿಯೊಬ್ಬರಿಗೂ ಅವರದ್ದೆ ಆದ ಅಭಿಪ್ರಾಯ ಇರುತ್ತದೆ. ಮುಖ್ಯಮಂತ್ರಿಗಳು ರಾಜ್ಯದ ಜನರ ಆರೋಗ್ಯದ ಹಿತ ಕಾಯಲು ನಿರ್ಣಯ ತೆಗೆದುಕೊಳ್ಳುತ್ತಾರೆ. ನಾನು ಯಾರ ಹೇಳಿಕೆಗೂ ಕೂಡ ಪ್ರತಿಕ್ರಿಯೆ ಕೊಡುವುದಿಲ್ಲ.  ಜನರ ಆರೋಗ್ಯ ನಮಗೆ ತುಂಬಾ ಮುಖ್ಯ, ನಮ್ಮ ಅಭಿಪ್ರಾಯ ಶುಕ್ರವಾರ ನೀಡುತ್ತೇವೆ ಎಂದು ಸುಧಾಕರ್ ಸ್ಪಷ್ಟಪಡಿಸಿದರು.

ಪ್ರತಿದಿನದ ಸೋಂಕು ಪ್ರಕರಣಗಳು 1 ಲಕ್ಷ ದಾಟಬಹುದು
ಕರ್ನಾಟಕದಲ್ಲಿ ಕೊರೊನಾ ಸೋಂಕಿನ 3ನೇ ಅಲೆಯು ಉತ್ತುಂಗಕ್ಕೆ ಹೋದಾಗ ಪ್ರತಿದಿನ ಸರಾಸರಿ 80 ಸಾವಿರದಿಂದ 1.20 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳಬಹುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ ಹೇಳಿದ್ದಾರೆ.

 ಈ ವಿಷಯವನ್ನು ತಜ್ಞರ‌ ವರದಿ ತಿಳಿಸಿದೆ. ವರದಿಯಲ್ಲಿ ಉಲ್ಲೇಖಿಸಿರುವಂತೆಯೇ ಪ್ರಸ್ತುತ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ಏರಿದಷ್ಟೇ ವೇಗವಾಗಿ ಸೋಂಕು ಪ್ರಕರಣಗಳು ಇಳಿಯಬಹುದು. ಫೆಬ್ರುವರಿ 2 ಅಥವಾ 3ನೇ ವಾರದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.

ದೇಶದಲ್ಲಿಯೇ ಕರ್ನಾಟಕ ರಾಜ್ಯದಲ್ಲಿ ಅತಿಹೆಚ್ಚು ಕೊರೊನಾ ಟೆಸ್ಟ್​ ಮಾಡಲಾಗುತ್ತಿದೆ. ಪ್ರತಿದಿನ 2ರಿಂದ 2.50 ಲಕ್ಷ ಟೆಸ್ಟ್ ಆಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕೊವಿಡ್ ಕೇಸ್ ಹೆಚ್ಚಾಗುತ್ತಿದೆ. ಇಂದು ಪಾಸಿಟಿವಿಟಿ ಪ್ರಮಾಣ ಹೆಚ್ಚಾಗಿದ್ದು, ಸಾವಿನ ಪ್ರಮಾಣ ಕಡಿಮೆಯಾಗಿದೆ. ವೀಕೆಂಡ್​ ಕರ್ಫ್ಯೂ ಬಗ್ಗೆ ಶುಕ್ರವಾರದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದು ಮುಂದಿನ ಕ್ರಮಗಳ ಬಗ್ಗೆ ತೀರ್ಮಾಣ ತೆಗೆದುಕೊಳ್ಳುತ್ತೇವೆ ಎಂದು ಅವರು ವಿವರಿಸಿದರು. ಮಾಸ್ಕ್ ಬೇಡ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಅವರು, ಅವರೇ ಮತ್ತೆ ಸ್ಪಷ್ಟೀಕರಣವನ್ನೂ ಕೊಟ್ಟಿದ್ದಾರೆ ಎಂದರು.

ಕೊವಿಡ್​ ಕೇರ್​ ಸೆಂಟರ್​ ಸ್ಥಾಪನೆ ಹಾಗೂ ನಿರ್ವಹಣೆ ಕುರಿತು 18 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಿದ್ದಾರೆ. ಒಂದೆರಡು ವಾರಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದರೂ ಅದನ್ನು ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದರು. ಆರೋಗ್ಯ ಇಲಾಖೆ ಸಿಬ್ಬಂದಿ ಬೂಸ್ಟರ್​ ಡೋಸ್​ ಪಡೆಯಬೇಕು. ಫ್ರಂಟ್​ಲೈನ್ ವಾರಿಯರ್ಸ್​​ ಇರುವುದರಿಂದ ಲಸಿಕೆ ಪಡೆಯಿರಿ ಎಂದು ಅವರು ಸೂಚಿಸಿದರು. 15-17 ವರ್ಷದ ಶೇ 60ರಷ್ಟು ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಲಸಿಕಾರಣವನ್ನು ಪೂರ್ಣಗೊಳಿಸಲಾಗುವುದು ಎಂದರು.

ಬೆಂಗಳೂರು ನಗರದಲ್ಲಿ ಇಂದು 25,595 ಕೊರೊನಾ ಪ್ರಕರಣ​ ಪತ್ತೆಯಾಗಿವೆ. ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ 16 ಸಾವಿರ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದ ಜನರು ಕೊರೊನಾ ನಿಯಮಗಳನ್ನು ಪಾಲಿಸಿಬೇಕು. ರಾಜ್ಯದಲ್ಲಿ ಇಂದು ಒಟ್ಟು 41,457 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ 22.03ರಷ್ಟಿದೆ. ಲಸಿಕೆ ಪಡೆಯದವರ ಮೇಲೆ ಈ ಬಾರಿ ವೈರಸ್​ ಪ್ರಭಾವ ಹೆಚ್ಚು ಎಂದು ಹೇಳಿದರು.

click me!