ಬ್ರೇಕಿಂಗ್ ನ್ಯೂಸ್: ಸಚಿವ ಸುಧಾಕರ್ ತಂದೆಗೆ ಕೊರೋನಾ ಸೋಂಕು ದೃಢ..!

Published : Jun 22, 2020, 06:28 PM ISTUpdated : Jun 22, 2020, 06:42 PM IST
ಬ್ರೇಕಿಂಗ್ ನ್ಯೂಸ್: ಸಚಿವ ಸುಧಾಕರ್ ತಂದೆಗೆ ಕೊರೋನಾ ಸೋಂಕು ದೃಢ..!

ಸಾರಾಂಶ

ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರ ತಂದೆಯ ಕೊರೋನಾ ವರದಿ ಬಂದಿದ್ದು, ಅವರಿಗೆ ಕೊರೋನಾ ಇರುವುದು ದೃಢಪಟ್ಟಿದೆ.

ಬೆಂಗಳೂರು, (ಜೂನ್.22): ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರ ತಂದೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.ಈ ಬಗ್ಗೆ ಸ್ವತಃ ಸಚಿವ ಸುಧಾಕರ್ ಅವರೇ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

ಸಚಿವ ಸುಧಾಕರ್ ಮನೆಗೂ ಕಾಲಿಟ್ಟ ಕೊರೋನಾ...! 

ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಟ್ವೀಟ್ ಮಾಡಿದ್ದಾರೆ.

ಸಚಿವ ಡಾ. ಸುಧಾಕರ್ ತಂದೆಗೆ ಕೊರೋನಾ ಭೀತಿ, ಆಸ್ಪತ್ರೆಗೆ ದಾಖಲು

ಬೆಂಗಳೂರಿನ ಸದಾಶಿವ ನಗರದಲ್ಲಿರೋ ನಿವಾಸದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿತ್ತು. ಇದರ ಬೆನ್ನಲ್ಲೇ ಸಚಿವ ಸುಧಾಕರ್ ಅವರ ತಂದೆಗೆ ಕೊರೋನಾ ಲಕ್ಷಣಗಳಾದ ಇಜ್ವರ, ಕೆಮ್ಮು ಸಮಸ್ಯೆ ಕಂಡುಬಂದಿದ್ದವು. 

 ಹಿನ್ನಲೆಯಲ್ಲಿ 82 ವರ್ಷದ ಸುಧಾಕರ್ ತಂದೆಯವರನ್ನ ಆಸ್ಪತ್ರೆಗೆ ದಾಖಲಿಸಿ ಕೋವಿಡ್ ಪರೀಕ್ಷೆಗೂ ಒಳಪಡಿಸಲಾಗಿತ್ತು. ಇದೀಗ ಆ ವರದಿ ಬಂದಿದ್ದು, ಸೋಂಕು ಇರುವುದು ದೃಢವಾಗಿದೆ. ಈ ಮೂಲಕ ಇನ್ನುಳಿದ ಮನೆ ಸದಸ್ಯರಲ್ಲೂ ಆತಂಕ ಮನೆ ಮಾಡಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ